ಸವದತ್ತಿ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಪಣ: ಶಾಸಕ ವಿಶ್ವಾಸ ವೈದ್ಯ
Commitment to comprehensive development of the charitable sector: MLA Vishwas Vaidya
ಸವದತ್ತಿ 10: ಕ್ಷೇತ್ರದ ಸಮಗ್ರ ಅಭಿವೃದ್ಧಿಯೇ ನನ್ನ ಮೊದಲ ಆದ್ಯತೆ ಎಂಬ ದೃಢ ಸಂಕಲ್ಪದೊಂದಿಗೆ ಶಾಸಕ ವಿಶ್ವಾಸ ವೈದ್ಯ ಅವರು ಕ್ಷೇತ್ರದ ಸರ್ವತೋಮುಖ ಪ್ರಗತಿಗೆ ಹೊಸ ವೇಗ ನೀಡಿದ್ದಾರೆ. ಅಧಿಕಾರ ವಹಿಸಿಕೊಂಡ ಅಲ್ಪಾವಧಿಯಲ್ಲೇ ಮೂಲಸೌಕರ್ಯ, ಶಿಕ್ಷಣ ಹಾಗೂ ಧಾರ್ಮಿಕ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ ತುಂಬುವ ಮೂಲಕ ಅವರು ಜನಸಾಮಾನ್ಯರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಸವದತ್ತಿಯ ಪ್ರಸಿದ್ಧ ಶಕ್ತಿಪೀಠವಾದ ಯಲ್ಲಮ್ಮನಗುಡ್ಡಕ್ಕೆ ಪ್ರತಿವರ್ಷ ಆಗಮಿಸುವ ಲಕ್ಷಾಂತರ ಭಕ್ತಾದಿಗಳಿಗೆ ಸುಸಜ್ಜಿತ ಸೌಲಭ್ಯ ಕಲ್ಪಿಸಲು ಹೆಚ್ಚಿನ ಅನುದಾನ ತಂದಿದ್ದಾರೆ.ಕುಡಿಯುವ ನೀರಿನ ಸಮರ್ಕ ವ್ಯವಸ್ಥೆ, ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸುಸಜ್ಜಿತ ರಸ್ತೆಗಳ ನಿರ್ಮಾಣ.ಭಕ್ತರಿಗಾಗಿ ಹೈಟೆಕ್ ತಂಗುದಾಣಗಳ ಸುಧಾರಣೆ. ಈ ಮೂಲಕ ಕ್ಷೇತ್ರದ ಧಾರ್ಮಿಕ ಪ್ರವಾಸೋದ್ಯಮದ ಅಭಿವೃದ್ಧಿಗೆ ಹೊಸ ನಾಂದಿ ಹಾಡಿದ್ದಾರೆ.
ಗ್ರಾಮೀಣ ಭಾಗದ ರಸ್ತೆಗಳನ್ನು ಮೇಲ್ದರ್ಜೆಗೇರಿಸಲು ಶಾಸಕರು ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಮುಖ್ಯ ರಸ್ತೆಗಳ ಡಾಂಬರೀಕರಣ ಮತ್ತು ಸೇತುವೆಗಳ ನಿರ್ಮಾಣ ಕಾರ್ಯ ಚುರುಕುಗೊಂಡಿದೆ. ಮಲಪ್ರಭಾ ಅಚ್ಚುಕಟ್ಟು ಪ್ರದೇಶದ ರೈತರ ಹಿತದೃಷ್ಟಿಯಿಂದ ನೀರಾವರಿ ಸೌಲಭ್ಯಗಳನ್ನು ಬಲಪಡಿಸಲು ಮುಂದಾಗಿರುವ ಅವರು, ಬಾಕಿ ಇರುವ ಯೋಜನೆಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಸರ್ಕಾರಿ ಶಾಲೆಗಳ ಸಬಲೀಕರಣ ಹಾಗೂ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಸುಸಜ್ಜಿತ ವೈದ್ಯಕೀಯ ಸೌಲಭ್ಯಗಳು ದೊರೆಯುವಂತೆ ಮಾಡುವಲ್ಲಿ ಶಾಸಕರು ನಿರಂತರ ಶ್ರಮಿಸುತ್ತಿದ್ದಾರೆ. ಪ್ರತಿ ಮಗುವಿಗೂ ಗುಣಮಟ್ಟದ ಶಿಕ್ಷಣ ಮತ್ತು ಪ್ರತಿ ನಾಗರಿಕನಿಗೂ ಉತ್ತಮ ಆರೋಗ್ಯ ಸೇವೆ ಸಿಗಬೇಕು ಎಂಬುದು ಅವರ ದೂರದೃಷ್ಟಿಯಾಗಿದೆ.
ಕೇವಲ ಕಚೇರಿಗೆ ಸೀಮಿತವಾಗದೆ, ನೇರವಾಗಿ ಹಳ್ಳಿಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸುವ ಅವರ ಸರಳ ವ್ಯಕ್ತಿತ್ವ ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ. ಪಕ್ಷಾತೀತವಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡುವುದು ನನ್ನ ಗುರಿ. ಕ್ಷೇತ್ರದ ಪ್ರತಿಯೊಬ್ಬ ನಾಗರಿಕನಿಗೂ ಸರ್ಕಾರದ ಸೌಲಭ್ಯಗಳು ತಲುಪಬೇಕು. ಸವದತ್ತಿಯನ್ನು ರಾಜ್ಯದ ಮಾದರಿ ಕ್ಷೇತ್ರವನ್ನಾಗಿ ಮಾಡುವುದೇ ನನ್ನ ಕನಸು ಎಂದು ತಿಳಿಸಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 