ಶಿಗ್ಗಾವ್

ಕ್ಷೇತ್ರದ ಸವಾಂರ್ಗೀಣ ಅಭಿವೃದ್ಧಿಗೆ ಬದ್ಧ : ಶಾಸಕ ಪಠಾಣ

ಕ್ಷೇತ್ರದ ಸವಾಂರ್ಗೀಣ ಅಭಿವೃದ್ಧಿಗೆ ಬದ್ಧ : ಶಾಸಕ ಪಠಾಣ


             ಶಿಗ್ಗಾವಿ 24  : ಕ್ಷೇತ್ರದ ಸವಾಂರ್ಗೀಣ ಅಭಿವೃದ್ಧಿಗೆ ಬದ್ಧನಾಗಿದ್ದು, ಗ್ರಾಮೀಣ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆಎಂದು ಶಾಸಕ ಯಾಸೀರ್ ಅಹ್ಮದಖಾನ್ ಪಠಾಣ ಹೇಳಿದರು.  ತಾಲೂಕಿನ ಸುರಪಗಟ್ಟಿ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು ಕ್ಷೇತ್ರದ ಜನರ ಋಣ ತೀರಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕ್ಷೇತ್ರದ ಸವಾಂರ್ಗೀಣ ಅಭಿವೃದ್ಧಿಗೆ ಬದ್ಧನಾಗಿ ಕೆಲಸ ಮಾಡುತ್ತಿದ್ದೇನೆಎಂದರು.                           ತಾಲೂಕಿನಲ್ಲಿ ಈಗಾಗಲೇ 8 ಸಾವಿರ ಪಟ್ಟಾಗಳನ್ನು ವಿತರಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕಾಲೋನಿಗಳ ಅಭಿವೃದ್ಧಿ, ವಿವಿಧ ಸಮಾಜಗಳ ಸಮುದಾಯ ಭವನ ಹಾಗೂ ಮಠಗಳ ನಿರ್ಮಾಣಕ್ಕೂ ಅನುದಾನ ಒದಗಿಸಲಾಗುತ್ತಿದೆ ಎಂದರು.   ಗ್ಯಾರಂಟಿ ಸಮಿತಿ ಅದ್ಯಕ್ಷ ಶೇಖಪ್ಪ ಮಣಕಟ್ಟಿ, ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುಡ್ಡಪ್ಪ ಜಲದಿ, ಬಾಪುಗೌಡ ಹೊಸಗೌಡ್ರ ಸೇರಿದಂತೆ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು. 


ಸುದ್ದಿ ಓದಿ