ಕಾಮನ್ವೆಲ್ತ್ ಸಂಸ್ಥೆಯ ಸಂಘದ ಭಾರತ ವಲಯದ ಸಮ್ಮೇಳನ : ಬಸವರಾಜ ಹೊರಟ್ಟಿ ಭಾಗಿ
ಹುಬ್ಬಳಿ 19: ಎರಡು ದಿನಗಳ ಕಾಲ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 10 ನೇ ಕಾಮನ್ವೆಲ್ತ್ ಸಂಸ್ಥೆಯ ಸಂಘದ ಭಾರತ ವಲಯದ ಸಮ್ಮೇಳನ - ವಿಧಾನ ಪರಿಷತ್ ಸಭಾಪತಿ ಮಾನ್ಯ ಶ್ರೀ ಬಸವರಾಜ ಹೊರಟ್ಟಿ ಭಾಗಿ.
ಸೋಮವಾರ ದಿನಾಂಕ.23.09.2024 ರಿಂದ ಎರಡು ದಿನಗಳ ಕಾಲ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 10 ನೇ ಕಾಮನ್ವೆಲ್ತ್ ಸಂಸದೀಯ ಸಂಘದ ಭಾರತ ವಲಯದ ಸಮ್ಮೇಳನ ಜರುಗಲಿದ್ದು, ಕರ್ನಾಟಕ ರಾಜ್ಯದ ಪ್ರತಿನಿಧಿಯಾಗಿ ವಿಧಾನ ಪರಿಷತ್ತಿನ ಸಭಾಪತಿ ಮಾನ್ಯ ಶ್ರೀ ಬಸವರಾಜ ಹೊರಟ್ಟಿರವರು ಈ ಸಮ್ಮೇಳನದಲ್ಲಿ ಪಾಲ್ಗೊಳ್ಳಲ್ಲಿದ್ದಾರೆ.
ಎರಡು ದಿನಗಳ ಕಾಲ ನಡೆಯುವ ಸಮ್ಮೇಳನದಲ್ಲಿ ದೇಶದ ಎಲ್ಲಾ ರಾಜ್ಯಗಳ ವಿಧಾನ ಸಭೆಯ ಸಭಾಧ್ಯಕ್ಷರು ಉಪಸಭಾಧ್ಯಕ್ಷರುಗಳು ಹಾಗೂ ವಿಧಾನ ಪರಿಷತ್ತಿನ ಸಭಾಪತಿ ಹಾಗೂ ಉಪಸಭಾಪತಿಗಳು ಭಾಗವಹಿಸಲಿದ್ದಾರೆ. ಸೋಮವಾರ ಲೋಕಸಭಾಧ್ಯಕ್ಷ ಓಂ ಬಿರ್ಲಾ ಅವರು ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ.
ಸಮ್ಮೇಳನದಲ್ಲಿ ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಮಾನ್ಯ ಬಸವರಾಜ ಹೊರಟ್ಟಿಯವರು “ಸುಸ್ಥಿರ ಹಾಗೂ ಸಮಗ್ರ ಅಭಿವೃದ್ದಿ ಸಾಧಿಸುವಲ್ಲಿ ಶಾಸನ ಸಭೆಗಳ ಪಾತ್ರ” ವಿಷಯ ಕುರಿತು ವಿಚಾರ ಮಂಡಿಸಲಿದ್ದು ತಮ್ಮ ನಿರಂತರ 45 ವರ್ಷಗಳ ಸಂಸದೀಯ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.
ಈ ಮೇಲಿನ ಮಹತ್ವದ ವಿಷಯವನ್ನು ತಮ್ಮ ಜನಪ್ರಿಯ ಪತ್ರಿಕೆ/ಮಾಧ್ಯಮದಲ್ಲಿ ರಾಜ್ಯಮಟ್ಟದ ಸುದ್ದಿಯನ್ನಾಗಿ ಪ್ರಕಟಿಸಬೇಕೆಂದು ಈ ಮೂಲಕ ತಮ್ಮಲ್ಲಿ ವಿನಂತಿಸುತ್ತೇನೆ.