ಕಸ ಎಸೆಯುವ ಸ್ಥಳ ಸ್ವಚ್ಛಗೊಳಿಸಿ ರಂಗೋಲಿ ಹಾಕಿ ಜಾಗೃತಿ ಮೂಡಿಸಿದ ಕಮ್ಯುನಿಟಿ ಮೊಬಲೈಸರ್ಗಳು
Community mobilizers raised awareness by cleaning up a garbage dumping spot and drawing a *Rangoli*
ಅಥಣಿ, ಆ.14: ಅಥಣಿ ನಗರಸಭೆಯ ಕಮ್ಯುನಿಟಿ ಮೊಬಲೈಸರ್ಗಳು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ, ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ದತ್ತಾ ವಾಸ್ಟರ್, ಸದಸ್ಯರಾದ ಮಲ್ಲೇಶ ಹುದ್ದಾರ, ಮೃಣಾಲಿನಿ ದೇಶಪಾಂಡೆ ಮತ್ತು ರಾಜಶೇಖರ ಗುಡೋಡಗಿ ಅವರ ಸಹಯೋಗದಲ್ಲಿ 14 ಮತ್ತು 4ನೇ ವಾರ್ಡ್ಗಳ ನಾಗರಿಕರಲ್ಲಿ ಸ್ವಚ್ಛತೆ ಹಾಗೂ ಕಸ ವಿಲೇವಾರಿ ಕುರಿತು ಜಾಗೃತಿ ಮೂಡಿಸಲಾಯಿತು.
ಮರಗುಬಾಯಿ ದೇವಸ್ಥಾನದ ಸಮೀಪದ ಮೂಲೆಯಲ್ಲಿ ಸಾರ್ವಜನಿಕರು ಹಲವು ವರ್ಷಗಳಿಂದ ಕಸ ಎಸೆಯುತ್ತಿದ್ದ ಪರಿಣಾಮ ಕೊಳಚೆ ನಿರ್ಮಾಣವಾಗಿತ್ತು. ಈ ಕುರಿತು ನಗರಸಭೆಗೆ ನೂರಾರು ದೂರುಗಳು ಬಂದಿದ್ದವು.
ಈ ಹಿನ್ನೆಲೆಯಲ್ಲಿ ಕಮ್ಯುನಿಟಿ ಮೊಬಲೈಸರ್ಗಳು ಮುಂಜಾನೆ 6 ಗಂಟೆಯಿಂದ ಸ್ಥಳದಲ್ಲೇ ನಿಂತು ಕಸ ಎಸೆಯಲು ಬರುತ್ತಿದ್ದ ಸಾರ್ವಜನಿಕರಿಗೆ ತಿಳಿವಳಿಕೆ ನೀಡಿದರು. ಕಸ ಎಸೆಯಲು ಬಂದವರನ್ನು ವಾಪಸ್ ಕಳುಹಿಸಿ, ಮನೆಗಳ ಮುಂದೆ ಬರುವ ಕಸ ಸಂಗ್ರಹ ವಾಹನದಲ್ಲಿಯೇ ಹಸಿ ಮತ್ತು ಒಣ ಕಸವನ್ನು ಪ್ರತ್ಯೇಕಿಸಿ ನೀಡುವಂತೆ ಮನವಿ ಮಾಡಿದರು.
ಬಳಿಕ ನಗರಸಭೆ ಸಿಬ್ಬಂದಿ ಸ್ಥಳದಲ್ಲಿದ್ದ ಕಸವನ್ನು ತೆರವುಗೊಳಿಸಿ ಸ್ವಚ್ಛಗೊಳಿಸಿದರು. ಕಮ್ಯುನಿಟಿ ಮೊಬಲೈಸರ್ಗಳು ಸ್ಥಳದಲ್ಲಿ ಆಕರ್ಷಕ ರಂಗೋಲಿ ಬಿಡಿಸುವ ಮೂಲಕ ಕಸ ಎಸೆಯುತ್ತಿದ್ದ ಜಾಗವನ್ನು ಸುಂದರಗೊಳಿಸಿ ಸಾರ್ವಜನಿಕರ ಗಮನ ಸೆಳೆದರು.
ಈ ಸಂದರ್ಭದಲ್ಲಿ ಮಾತನಾಡಿದ ಸ್ಥಾಯಿ ಸಮಿತಿ ಅಧ್ಯಕ್ಷ ದತ್ತಾ ವಾಸ್ಟರ್, ಸಾರ್ವಜನಿಕರು ಸ್ವಚ್ಛತೆ ಕಾಪಾಡುವಲ್ಲಿ ನಗರಸಭೆ ಸಿಬ್ಬಂದಿಯೊಂದಿಗೆ ಸಹಕರಿಸಿ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಕಸ ಹಾಗೂ ಕೊಳಚೆ ಸಂಗ್ರಹವಾಗುವುದರಿಂದ ಡೆಂಗ್ಯೂ, ಮಲೇರಿಯಾ ಸೇರಿದಂತೆ ವಿವಿಧ ರೋಗಗಳು ಹರಡುವ ಸಾಧ್ಯತೆ ಹೆಚ್ಚಾಗುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಹೇಳಿದರು. ಆರೋಗ್ಯ ಇಲಾಖೆಯ ಕುಮಾರ ಯಳಮೇಲಿ, ರವಿ ಕಾಂಬಳೆ ಸೇರಿದಂತೆ ಪೌರ ಕಾರ್ಮಿಕರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 