ಜನಸಂಖ್ಯೆ ನಿಯಂತ್ರಣಕ್ಕೆ ಸಮುದಾಯದ ಸಹಭಾಗಿತ್ವ ಅಗತ್ಯ: ಡಾ. ಅಲ್ಲಾ ರಮೇಶ್ ಬಾಬು
Community participation is essential for population control: Dr. Alla Ramesh Babu
ಲೋಕದರ್ಶನ ವರದಿ
ಬಳ್ಳಾರಿ, 14: ಜನಸಂಖ್ಯೆ ನಿಯಂತ್ರಣವು ಕೇವಲ ಸರ್ಕಾರಿ ಇಲಾಖೆಗಳ ಜವಾಬ್ದಾರಿಯಲ್ಲ. ಇದರಲ್ಲಿ ಸಮುದಾಯದ ಸಕ್ರಿಯ ಭಾಗವಹಿಸುವಿಕೆ ಅಗತ್ಯವಿದೆ. ಈ ಮೂಲಕ ಮುಂದಿನ ದಿನಗಳಲ್ಲಿ ದೇಶದ ಜನಸಂಖ್ಯೆ ನಿಯಂತ್ರಣ ಸಾಧಿಸಲು ಸಾಧ್ಯ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಲ್ಲಾ ರಮೇಶ್ ಬಾಬು ಹೇಳಿದರು.
ನಗರದ ಪ್ರಾಥಮಿಕ ಆರೋಗ್ಯ ಕೇಂದ್ರ ಕೌಲ್ಬಜಾರ್ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಸ್ತುತ ಭಾರತದಲ್ಲಿ ಜನಸಂಖ್ಯೆ 147.6 ಕೋಟಿ ಹಾಗೂ ಕರ್ನಾಟಕದ ಜನಸಂಖ್ಯೆ ಸುಮಾರು 6.9 ಕೋಟಿ ಮೀರಿದೆ. ಹೆಚ್ಚುತ್ತಿರುವ ಜನಸಂಖ್ಯೆಯಿಂದ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿಯಲ್ಲಿ ಹಲವು ಸವಾಲುಗಳನ್ನು ಎದುರಿಸಬೇಕಾಗಿದೆ. ಆದ್ದರಿಂದ ಕುಟುಂಬ ಕಲ್ಯಾಣ ಯೋಜನೆಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು, ಎರಡು ಮಕ್ಕಳ ನಡುವೆ ಕನಿಷ್ಠ ಮೂರು ವರ್ಷಗಳ ಅಂತರ ಕಾಯ್ದುಕೊಳ್ಳುವಂತೆ ಪ್ರತಿಯೊಬ್ಬರೂ ಆದ್ಯತೆ ನೀಡಬೇಕು ಎಂದು ಕರೆ ನೀಡಿದರು.
ಜನಸಂಖ್ಯೆ ನಿಯಂತ್ರಣದಲ್ಲಿ ಸಾಕಷ್ಟು ಪ್ರಗತಿ ಸಾಧಿಸಿದ್ದರೂ, ಜನಸಂಖ್ಯಾ ಸ್ಥಿರತೆ ಸಾಧಿಸುವುದು ಇನ್ನೂ ದೊಡ್ಡ ಸವಾಲಾಗಿದೆ. ಈ ನಿಟ್ಟಿನಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ಉಚಿತ ತಾತ್ಕಾಲಿಕ ಹಾಗೂ ಶಾಶ್ವತ ಕುಟುಂಬ ನಿಯಂತ್ರಣ ವಿಧಾನಗಳನ್ನು ಸಾರ್ವಜನಿಕರು ಬಳಸಿಕೊಳ್ಳಬೇಕು ಎಂದು ತಿಳಿಸಿದರು.
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು 