ಹೂವಿನ ಹಡಗಲಿ

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಭಾಗವಹಿಸುವವರಿ ಸತತ ಪರಿಶ್ರಮವಿರಬೇಕು; ಬಡಿಗೇರ್

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಭಾಗವಹಿಸುವವರಿ ಸತತ ಪರಿಶ್ರಮವಿರಬೇಕು; ಬಡಿಗೇರ್

ಹೂವಿನ ಹಡಗಲಿ 06: ಸತತ ಅಧ್ಯಯನದಿಂದ ಯಶಸ್ಸು ಸಾಧ್ಯ ಎಂದು ಹಗರಿಬೊಮ್ಮನಹಳ್ಳಿ ಶಿಕ್ಷಕ ನವೀನ್ ಬಡಿಗೇರ್ ಹೇಳಿದರು. ಪಟ್ಟಣದ ಸಾರ್ವಜನಿಕ ಶಾಖಾ ಗ್ರಂಥಾಲಯದಲ್ಲಿ ಗ್ರಂಥಾಲಯ ಇಲಾಖೆ ಹಾಗೂ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಂವಿಧಾನ, ಮೂಲಭೂತ ಹಕ್ಕುಗಳು, ಭೂಗೋಳ, ಸಮಾಜ ವಿಜ್ಞಾನ, ಇತಿಹಾಸ ಮೊದಲಾದ ವಿಷಯಗಳ ಬಗ್ಗೆ ಪರಿಪೂರ್ಣ ಮಾಹಿತಿ ನೀಡಿದರು.  

ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುವ ಕನಸು ಚಿಗುರುವುದು ಸಹಜ. ಅದಕ್ಕೆ ತಕ್ಕಂತೆ ಪ್ರತಿನಿತ್ಯ ಅಧ್ಯಯನ ಬಹಳ ಮುಖ್ಯ. ಎಲ್ಲಾ ವಿಭಾಗಗಳಲ್ಲೂ ಪ್ರಶ್ನೆ ಕೇಳುತ್ತಾರೆ. ಪ್ರಚಲಿತ ವಿದ್ಯಮಾನಗಳು, ಪರಿಸರ, ಕ್ರೀಡೆ, ಸಾಹಿತ್ಯ, ದೇಶ ವಿದೇಶ,ಇನ್ನಿತರೆ ವಿಷಯಗಳ ಬಗ್ಗೆ ಸಾಕಷ್ಟು ಓದಿನ ಅವಶ್ಯಕತೆ ಇದೆ ಎಂದರು.ನಿತ್ಯ ಸಾರ್ವಜನಿಕ ಗ್ರಂಥಾಲಯಕ್ಕೆ ಭೇಟಿ ನೀಡುವ ಹವ್ಯಾಸ ಬೆಳೆಸಿಕೊಳ್ಳಿ. ಐ ಪಿ ಎಸ್, ಕೆ ಎ ಎಸ್ ಸಾಧಕರ ಸಾಧನೆ ನಿಮಗೆ ಸ್ಪೂರ್ತಿ ಆಗಬೇಕು ಎಂದು ಹೇಳಿದರು.ಶಾಖಾ ಗ್ರಂಥಾಲಯಾಧಿಕಾರಿ ಮಂಜುನಾಥ ಬೋವಿ ತಿಂಗಳಲ್ಲಿ ಎರಡು ಶನಿವಾರ ಗ್ರಂಥಾಲಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗುವ ಯುವಕರಿಗೆ ತಜ್ಞರಿಂದ ಮಾಹಿತಿ ಒದಗಿಸಲಾಗುವುದು.ಇದರ ಪ್ರಯೋಜನ ಪಡೆಯಬೇಕು ಎಂದು ಹೇಳಿದರು.ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ ಪಿ ಎಂ ಅಶೋಕ್,ಗೌರವಾಧ್ಯಕ್ಷ ಅಯ್ಯನಗೌಡರ ಕೊಟ್ರಗೌಡ, ಶಿಕ್ಷಕರಾದ ಕೊಟ್ರೇಶ್ ಹೊಂಬಾಳೆ, ಚಂದ್ರ​‍್ಪ ಸಿ, ಎಚ್ ಜಿ ಪಾಟೀಲ್ ಇತರರು ಉಪಸ್ಥಿತರಿದ್ದರು. 


ಸುದ್ದಿ ಓದಿ