ಮುಂದಗೋಡ

ತಹಶೀಲ್ದಾರ, ಉಪವಿಭಾಗಾಧಿಕಾರಿ ಅಥವಾ ಜಿಲ್ಲಾಧಿಕಾರಿಗೆ ನೇರವಾಗಿ ದೂರು ಸಲ್ಲಿಸಿ: ಶಂಕರ ಗೌಡಿ

ತಹಶೀಲ್ದಾರ, ಉಪವಿಭಾಗಾಧಿಕಾರಿ ಅಥವಾ ಜಿಲ್ಲಾಧಿಕಾರಿಗೆ ನೇರವಾಗಿ ದೂರು ಸಲ್ಲಿಸಿ: ಶಂಕರ ಗೌಡಿ

ಲೋಕದರ್ಶನ ವರದಿ 

ಮುಂಡಗೋಡ:ತಾಲೂಕಿನಲ್ಲಿ ಒಟ್ಟು 94 ಗ್ರಾಮಗಳಿದ್ದು ಈ ಪೈಕಿ 12 ಜನವಸತಿ ಇಲ್ಲದ ಬೇಚರಾಕ ಗ್ರಾಮಗಳಿದ್ದು ಬಾಕಿ ಉಳಿದ 82 ಗ್ರಾಮಗಳಲ್ಲಿ ಈಗಾಗಲೇ ಸ್ಮಶಾನಕ್ಕಾಗಿ ಸರ್ಕಾರಿ ಭೂಮಿಯನ್ನು ಗುರುತಿಸಿ ಕಾಯ್ದಿರಿಸಲಾಗಿದೆ. ಸ್ಮಶಾನಕ್ಕಾಗಿ ಕಾಯ್ದಿರಿಸಿದ ಜಾಗಗಳನ್ನು ಪಹಣಿ ಪತ್ರಿಕೆಯಲ್ಲಿ ಇಂಡೀಕರಣಗೊಳಿಸಲಾಗಿದೆ ಹಾಗೂ ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳಿಗೆ ಹಸ್ತಾಂತರಿಸಲಾಗಿದೆ. ಸ್ಮಶಾನಕ್ಕಾಗಿ ಕಾಯ್ದಿರಿಸಿದ ಜಾಗವು ಒತ್ತುವರಿಯಾಗಿದ್ದಲ್ಲಿ ಸಾರ್ವಜನಿಕರು ಸಂಬಂಧಪಟ್ಟ ತಹಶೀಲ್ದಾರ, ಉಪವಿಭಾಗಾಧಿಕಾರಿ ಅಥವಾ ಜಿಲ್ಲಾಧಿಕಾರಿಗಳಲ್ಲಿ ನೇರವಾಗಿ ದೂರು ಸಲ್ಲಿಸಬಹುದಾಗಿದೆ ಎಂದು ತಹಶೀಲ್ದಾರ ಶಂಕರ ಗೌಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 


ಸುದ್ದಿ ಓದಿ