ಕಾಗವಾಡ

ಶ್ರೀ ಬಸವೇಶ್ವರ ಏತ ನೀರಾವರಿ ಯೋಜನೆ ನಿಗದಿತ ಸಮಯದಲ್ಲಿ ಪೂರ್ಣಗೊಳಿಸಿ : ನೀರಾವರಿ ನಿಗಮದ ಹಿರಿಯ ಅಧಿಕಾರಿಗಳೊಂದಿಗೆ ಶ್ರೀಮಂತ ಪಾಟೀಲ್ ಚರ್ಚೆ

ಶ್ರೀ ಬಸವೇಶ್ವರ ಏತ ನೀರಾವರಿ ಯೋಜನೆ ನಿಗದಿತ ಸಮಯದಲ್ಲಿ ಪೂರ್ಣಗೊಳಿಸಿ : ನೀರಾವರಿ ನಿಗಮದ ಹಿರಿಯ ಅಧಿಕಾರಿಗಳೊಂದಿಗೆ ಶ್ರೀಮಂತ ಪಾಟೀಲ್ ಚರ್ಚೆ

ಲೋಕದರ್ಶನ ವರದಿ 


ಕಾಗವಾಡ 06: ಕಾಗವಾಡ ತಾಲೂಕಿನ ಲಕ್ಷಾಂತರ ರೈತರ ಭೂಮಿಗೆ ಕೃಷ್ಣಾ ನದಿಯಿಂದ ನೀರು ಹರಿಸಲು ಶ್ರೀ ಬಸವೇಶ್ವರ ಏತ ನೀರಾವರಿ ಯೋಜನೆ ಸುಮಾರು 1,230 ಕೋಟಿ ರೂ ವೆಚ್ಚದಲ್ಲಿ ಅನುಷ್ಠಾನಗೊಂಡಿದೆ. ಅಂತಿಮ ಘಟ್ಟದಲ್ಲಿರುವ ಯೋಜನೆಗೆ ಹೆಚ್ಚಿನ ಆದ್ಯತೆ ನೀಡಿ ನಿಗದಿಪಡಿಸಿದ ಸಮಯದಲ್ಲಿ ಪೂರ್ಣಗೊಳಿಸಬೇಕೆಂದು ಕಾಗವಾಡ ಕ್ಷೇತ್ರ ಶಾಸಕರು ಹಾಗೂ ಮಾಜಿ ಸಚಿವರಾದ ಶ್ರೀಮಂತ ಪಾಟೀಲ್ ಇವರು ಬೆಂಗಳೂರಿನಲ್ಲಿ ಕರ್ನಾಟಕ ರಾಜ್ಯ ನೀರಾವರಿ ನಿಗಮದ ಮುಖ್ಯ ವ್ಯವಸ್ಥಾಪಕ ನಿರ್ದೇಶಕ ರೊಂದಿಗೆ ವಿಶೇಷ ಸಭೆ ಕರೆದು ಚರ್ಚಿಸಿ ಕೆಲಸೂಚನೆಗಳನ್ನು ನೀಡಿದರು. 

ಗುರುವಾರ ದಿ. 6ರಂದು ಬೆಂಗಳೂರಿನ ವಿಧಾನಸೌಧದಲ್ಲಿ ಕರ್ನಾಟಕ ರಾಜ್ಯ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಲ್ಲಿಕಾರ್ಜುನ್ ಬಿ.ಜಿ. ಇವರೊಂದಿಗೆ ವಿಶೇಷ ಸಭೆ ಆಯೋಜಿಸಿದರು. 

ಶ್ರೀ ಬಸವೇಶ್ವರ ಏತ ನೀರಾವರಿ ಯೋಜನೆಯ ಕಾಮಗಾರಿ ಬಗ್ಗೆ ಚರ್ಚಿಸಿ ಪ್ರಗತಿ ಪರೀಶೀಲನೆ ಮಾಡಿದರು. ಯೋಜನೆ ನಿರ್ದಿಷ್ಟ ಸಮಯದಲ್ಲಿ ಪೂರ್ಣಗೊಳಿಸ ಬೇಕಾಗಿದೆ. ಈ ಕಾರಣ ಯೋಜನೆಯ ಕಾಮಗಾರಿ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಕೆಲ ಸೂಚನೆಗಳು ಶಾಸಕ ಶ್ರೀಮಂತ ಪಾಟೀಲರು ನೀಡಿದರು. 

ಶ್ರೀ ಬಸವೇಶ್ವರ ಏತ ನೀರಾವರಿ ಯೋಜನೆಯ ಕಾಮಗಾರಿ ಬಗ್ಗೆ ಶಾಸಕ ಶ್ರೀಮಂತ ಪಾಟೀಲರು ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ ಕಾಮಗಾರಿ ವತಿಯಿಂದ ಪೂರ್ಣಗೊಳಿಸಲು ಪ್ರಯತ್ನಿಸುತ್ತಿದ್ದಾರೆ. ಇದನ್ನು ಆಲಿಸಿದ ಇಲ್ಲಿಯ ರೈತರು ಅವರ ಸಮರ್ಥಕರು ಸಂತಸ ವ್ಯಕ್ತಪಡಿಸಿದರು. 


ಸುದ್ದಿ ಓದಿ