ಎಸ್ಸೆಸ್ಸೆಲ್ಸಿ ಪಠ್ಯಕ್ರಮ ಪೂರ್ಣಗೊಳಿಸಿ: ಮಹೇಶ್ ವಿ ಪೂಜಾರ
Complete the SSLC syllabus: Mahesh V Pujara
ಹೂವಿನ ಹಡಗಲಿ 11: 2025-26 ನೇ ಸಾಲಿನ ಎಸ್ಸೆಸ್ಸೆಲ್ಸಿ ಪಠ್ಯಕ್ರಮ ಡಿಸೆಂಬರ್ ಅಂತ್ಯಕ್ಕೆ ಪೂರ್ಣಗೊಳಿಸಿರಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ವಿ ಪೂಜಾರ ಹೇಳಿದರು.
ಪಟ್ಟಣದ ಸೊಪ್ಪಿನ ಕಾಳಮ್ಮ ಬಾಲಕಿಯರ ಪ್ರೌಢಶಾಲೆಯಲ್ಲಿ ಸೋಮವಾರ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಆಯೋಜಿಸಿದ್ದ ತಾಲೂಕು ಪ್ರೌಢಶಾಲಾ ಮುಖ್ಯ ಗುರುಗಳ ಶೈಕ್ಷಣಿಕ ಸಭೆಯಲ್ಲಿ ಮಾತನಾಡಿದರು. 29 ಅಂಶಗಳು: ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗಾಗಿ ಇಲಾಖೆಯ 29 ಅಂಶಗಳನ್ನು ಪರಿಣಾಮವಾಗಿ ಜಾರಿಗೆ ತರಬೇಕು. ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಶ್ರಮಿಸಬೇಕು ಎಂದರು.ಎಸ್ಸೆಸ್ಸೆಲ್ಸಿ ಬೆಳಗಿನ ವಿಶೇಷ ತರಗತಿ ಸಂಜೆ ಗುಂಪು ಅಧ್ಯಯನ ಸಂವಾದ ಕಡ್ಡಾಯವಾಗಿ ಪ್ರತಿ ದಿನ ನಿರ್ವಹಿಸಬೇಕು. ಮಧ್ಯ ವಾರ್ಷಿಕ ಪರೀಕ್ಷೆಯ ಉತ್ತರ ಪತ್ರಿಕೆಗಳನ್ನು ವಿದ್ಯಾರ್ಥಿಗಳಿಗೆ ತೋರಿಸಿ ಫಲಿತಾಂಶ ವಿಶ್ಲೇಷಣೆ ಮಾಡಬೇಕು ಎಂದು ತಿಳಿಸಿದರು.
ನ. 14 ಪಾಲಕರ ಶಿಕ್ಷಕರ ಸಭೆ ಮಕ್ಕಳ ದಿನಾಚರಣೆ ನ 14 ರಂದು ಮಕ್ಕಳ ಪೋಷಕರ ಸಭೆಯನ್ನು ಹಬ್ಬದಂತೆ ಆಚರಿಸಿ. ಮಕ್ಕಳ ಶೈಕ್ಷಣಿಕ ಪ್ರಗತಿ ಕುರಿತು ತಂದೆ ತಾಯಿ ಪೋಷಕರಿಗೆ ಸೂಕ್ತ ಮಾರ್ಗದರ್ಶನ ನೀಡಿರಿ. ಅಂದು ಸಿಹಿ ಊಟದ ವ್ಯವಸ್ಥೆ ಕಲ್ಪಿಸಲು ಹೇಳಿದರು. ಪಠ್ಯಾಧಾರಿತ ಘಟಕ ಪರೀಕ್ಷೆಗಳನ್ನು ನಡೆಸಿ ಸಂಬಂಧಿಸಿದ ಶಿಕ್ಷಕರು ತಂತ್ರಾಂಶದಲ್ಲಿ ಇಂದೀಕರಿಬೇಕು. ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ಸತತ ಗೈರು ಹಾಜರಾಗಿದರೆ ಪಾಲಕರ ಮನೆ ಭೇಟಿ ನೀಡಿ ಜಾಗೃತಿ ಮೂಡಿಸುವ ಕೆಲಸ ಆಗಬೇಕು ಎಂದರು.
ಕ್ಷೇತ್ರ ಸಮನ್ವಯಾಧಿಕಾರಿ ಎ ಕೋಟೆಪ್ಪ ಶಾಲೆ ಬಿಟ್ಟ ಮಕ್ಕಳ ಅಪಾರ್, ಯು ಡೈಸ್, ಡ್ರಾಯಿಂಗ್ ಪರೀಕ್ಷೆ ಕುರಿತು ಮಾಹಿತಿ ಹಂಚಿಕೊಂಡರು.ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ವಿ ಹನುಮಂತಪ್ಪ ಬಿಸಿಯೂಟ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ತರಲು ಮಾರ್ಗದರ್ಶನ ನೀಡಿದರು. ತಾಲೂಕು ಪ್ರೌಢಶಾಲಾ ಮುಖ್ಯ ಗುರುಗಳ ಸಂಘದ ಅಧ್ಯಕ್ಷ ಜಿ ಎಂ ಕಾಂತೇಶ್, ಉಪ ಪ್ರಾಂಶುಪಾಲ ರವೀಂದ್ರನಾಥ ಶಿಕ್ಷಣ ಸಂಯೋಜಕ ಹಣ್ಣಿ ನರೇಶ್ ಇದ್ದರು. ತಾಲೂಕಿನ ಸರ್ಕಾರಿ ಅನುದಾನಿತ ಅನುದಾನರಹಿತ ಮೊರಾರ್ಜಿ ಪ್ರೌಢಶಾಲೆಗಳ ಮುಖ್ಯ ಗುರುಗಳು ಭಾಗವಹಿಸಿದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 