ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ: ಶಾಸಕ ಕೌಜಲಗಿ
ಬೈಲಹೊಂಗಲ- ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಕೈಗೊಂಡು ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಬೇಕೆಂದು ಶಾಸಕ ಮಹಾಂತೇಶ ಕೌಜಲಗಿ ಹೇಳಿದರು.
ಪಟ್ಟಣದ ವಾರ್ಡ ನಂ.11 ರಲ್ಲಿ ಆಂಟಿನ ಚಾಳದಲ್ಲಿ ರೂ.12 ಲಕ್ಷ ವೆಚ್ಚದಲ್ಲಿ ಕಾಂಕ್ರಿಟ ರಸ್ತೆ ಕಾಮಗಾರಿಯ ಭೂಮಿ ಪೂಜೆ ನೇರವೇರಿಸಿ ಮಾತನಾಡಿ, ಪಟ್ಟಣದ ಸರ್ವಾಂಗೀಣ ಅಭಿವೃದ್ದಿಗೆ ಸಾರ್ವಜನಿಕರು ಸಹಕರಿಸಬೇಕೆಂದರು.
ಪುರಸಸಭೆ ಅಧ್ಯಕ್ಷ ಬಸವರಾಜ ಜನ್ಮಟ್ಟಿ, ಸದಸ್ಯ ಅರ್ಜುನ ಕಲಕುಟಕರ, ಎಇಇ ಆರ.ಜಿ.ಯಲಿಗಾರ, ಗುತ್ತಿಗೆದಾರ ಕುಶಾಲ ದೇವಕರ, ಬಡಾವಣೆಯ ನಾಗರೀಕರು ಇದ್ದರು.