ಜಾಲವಾದ ಕೆಪಿಎಸ್ ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ
Comprehensive Award for Jalava KPS High School
ಜಾಲವಾದ ಕೆಪಿಎಸ್ ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ
ದೇವರಹಿಪ್ಪರಗಿ 12: ತಾಲೂಕಿನ ಜಾಲವಾದ ಗ್ರಾಮದ ಕೆಪಿಎಸ್ ಪ್ರೌಢಶಾಲೆಯ ಕ್ರೀಡಾಪಟುಗಳು 2026ನೇ ಸಾಲಿನ ವಲಯಮಟ್ಟದ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮಾಡಿ ಸಮಗ್ರ ಪ್ರಶಸ್ತಿ ಪಡೆದು ತಾಲೂಕುಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬಾಲಕರ ಖೋ-ಖೋ, ಥ್ರೋಬಾಲ್ ಹಾಗೂ ಬಾಲಕಿಯರ ಥ್ರೋಬಾಲ್ ವಿಭಾಗಗಳಲ್ಲಿ ಪ್ರಥಮ ಸ್ಥಾನ ಗಳಿಸಿದ ಕ್ರೀಡಾಪಟುಗಳು, ವಿವಿಧ ಮೇಲಾಟಗಳಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ತಾಲೂಕುಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಈ ಮೂಲಕ ಶಾಲೆ ಹಾಗೂ ಗ್ರಾಮಕ್ಕೆ ಕೀರ್ತಿ ತಂದಿದ್ದಾರೆ. ಉತ್ತಮ ಸಾಧನೆ ಮಾಡಿದ ಕ್ರೀಡಾಪಟುಗಳನ್ನು ಶಾಲೆಯ ಉಪಪ್ರಾಂಶುಪಾಲರಾದ ಎ.ಎಸ್. ಹೊಸಗೌಡರ, ದೈಹಿಕ ಶಿಕ್ಷಣ ಶಿಕ್ಷಕರಾದ ಸಂಗು ಮಲ್ಲೇದ ಸೇರಿದಂತೆ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 