ದೇಶದ ಸಮಗ್ರ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯ: ಸುಭಾಷ ಪಾಟೀಲ
Comprehensive development of the country is possible only through BJP: Subhash Patil
ಬೆಳಗಾವಿ 19: ದೇಶದ ಸಮಗ್ರ ಅಭಿವೃದ್ಧಿ ಬಿಜೆಪಿಯಿಂದ ಮಾತ್ರ ಸಾಧ್ಯ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ ಹಾಗೂ ವಿಧಾನ ಪರಿಷತ್ ಸದಸ್ಯ ಹನುಮಂತ ನಿರಾಣಿ ಹೇಳಿದರು. ಅವರು ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾ ಅಭಿಯಾನ- 2026 ಅಂಗವಾಗಿ ಖಾನಾಪೂರ ತಾಲೂಕಿನ ಜಾಂಬೋಟಿ ಹತ್ತಿರದ ಕೈವಲ್ಯಂ ಯೋಗ ರಿಟ್ರೀಟ್ ಸೆಂಟರ್ ದಲ್ಲಿ ನಡೆದ ಬಿಜೆಪಿ ಜಿಲ್ಲಾ ಮಟ್ಟದ ಪ್ರಶಿಕ್ಷಣ ವರ್ಗದ ಎರಡು ದಿನಗಳ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು ಯಾವುದೇ ಪಕ್ಷಗಳು ಸರ್ಕಾರ ನಡೆಸುವುದು ಮುಖ್ಯವಲ್ಲ, ಸರ್ಕಾರ ನಡೆಸುವ ಸಂದರ್ಭದಲ್ಲಿ ಪಕ್ಷದ ವಿಚಾರಧಾರೆ ದೇಶದ ಅಭಿವೃದ್ಧಿ ಸಿದ್ದಾಂತಗಳು ಮುಖ್ಯ ಇಡೀ ವಿಶ್ವದಲ್ಲಿ ಭಾರತ ದೇಶದ ಛಾಪನ್ನು ಮೂಡಿಸಿರುವ ಬಿಜೆಪಿ ಕೇಂದ್ರ ಸರ್ಕಾರ ರಾಷ್ಟ್ರವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತಿದೆ ಎಂದು ಹೇಳಿದರು ಶಾಸಕ ವಿಠ್ಠಲ ಹಲಗೇಕರ ಮಾಜಿ ಶಾಸಕರಾದ ಮಹಾಂತೇಶ ದೊಡ್ಡಗೌಡರ ಮಾತನಾಡಿ ವಿಚಾರಧಾರೆ ಸಿದ್ದಾಂತಗಳು ಇಲ್ಲದೆ ದಿಢೀರನೆ ಸರಕಾರವನ್ನು ಸ್ಥಾಪಿಸಿದ್ದ ಆಪ್, ಮತ್ತಿತರ ಪಕ್ಷಗಳ ಇತ್ತೀಚಿನ ಬೆಳವಣಿಗೆಗಳನ್ನು ಕಂಡಾಗ ಇವುಗಳು ಕೇವಲ ಕೆಲವೇ ವರ್ಷಗಳಿಗೆ ಮಾತ್ರ ಸೀಮಿತ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ವ್ಯಕ್ತಿಗಿಂತ ಪಕ್ಷ ಶ್ರೇಷ್ಠ ಪಕ್ಷಕ್ಕಿಂತ ದೇಶ ಪ್ರಮುಖವಾಗಿದೆ ಪಕ್ಷದ ಕಾರ್ಯಕರ್ತರಲ್ಲಿ ಅಭ್ಯಾಸ ವರ್ಗ ಕಾರ್ಯ ವೈಖರಿ ಜವಾಬ್ದಾರಿ ನೆನಪಿಸುವ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕಾಗಿದೆ. ಈ ಮೂಲಕ ತಳಮಟ್ಟದಲ್ಲಿ ಕಾರ್ಯಕರ್ತರ ಜವಾಬ್ದಾರಿಯನ್ನು ತಿಳಿ ಹೇಳುವುದು ಪ್ರತಿಯೊಬ್ಬರ ಹೊಣೆಯಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಅರವಿಂದ ಪಾಟೀಲ, ಚಂದ್ರಶೇಖರ ಕವಟಗಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸಂದೀಪ ದೇಶಪಾಂಡೆ, ಮಲ್ಲಿಕಾರ್ಜುನ ಮಾದಮ್ಮನವರ, ಧನಶ್ರೀ ದೇಸಾಯಿ, ಪ್ರಕೋಷ್ಠಗಳ ಸಂಯೋಜಕ ಮಹೇಶ್ ಮೋಹಿತೆ, ಜಿಲ್ಲಾ ಉಪಾಧ್ಯಕ್ಷರಾದ ಪ್ರಮೋದ್ ಕೊಚೇರಿ,ವಿನಯ ಕದಂ, ಮಂಡಲ ಅಧ್ಯಕ್ಷ ಬಸವರಾಜ ಸಾಣಿಕೊಪ್ಪ, ಮುಖಂಡರಾದ ಸಂಜಯ ಕುಬಲ, ಪ್ರಶಾಂತ್ ಅಮ್ಮಿನಭಾವಿ ಹಾಗೂ ಪ್ರಮುಖರಿದ್ದರು.
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 