ಶಿಗ್ಗಾವಿ ತಾಲ್ಲೂಕಿನಲ್ಲಿ ಮತದಾರ ಪಟ್ಟಿ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಆರಂಭ
Comprehensive voter list revision process begins in Shiggaon taluk
ಲಕ್ಷ್ಮೇಶ್ವರ 06: ತಾಲ್ಲೂಕಿನ ಎಲ್ಲ ಗ್ರಾಮಗಳಲ್ಲಿ ಚುನಾವಣಾ ಆಯೋಗದ ನಿರ್ದೇಶನದಂತೆ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಪ್ರಾರಂಭಿಸಲಾಗಿದೆ. ಈ ಹಿನ್ನೆಲೆಯಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆ ಭೇಟಿ ನೀಡಿ ಮತದಾರರ ವಿವರಗಳನ್ನು ಸಂಗ್ರಹಿಸುವ ಕಾರ್ಯದಲ್ಲಿ ತೊಡಗಿದ್ದಾರೆ.
ಮತದಾರರ ಪಟ್ಟಿ ಶುದ್ಧೀಕರಣ ಮತ್ತು ನಿಖರತೆ ಕಾಪಾಡುವ ಉದ್ದೇಶದಿಂದ ಈ ಪ್ರಕ್ರಿಯೆ ಅತ್ಯಂತ ಅಗತ್ಯವಾಗಿದ್ದು, ಪ್ರಜಾಪ್ರಭುತ್ವದ ಬಲವರ್ಧನೆಗಾಗಿ ನಾಗರಿಕರು ಸಹಕರಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಹೊಸ ಮತದಾರರು ತಮ್ಮ ಹೆಸರುಗಳನ್ನು ಪಟ್ಟಿ ಸೇರಿಸುವುದು, ಹಾಗೂ ಇರುವ ಮತದಾರರು ತಮ್ಮ ವಿವರಗಳನ್ನು ಪರೀಶೀಲಿಸುವಂತೆ ಸೂಚಿಸಲಾಗಿದೆ.
ಮನೆ ಮನೆ ಭೇಟಿ ಸಂದರ್ಭದಲ್ಲಿ ನೀಡಲಾಗುವ ಮಾಹಿತಿಯನ್ನು ಸರಿಯಾಗಿ ಪರೀಶೀಲಿಸಿ ಸಹಿ ಮಾಡುವಂತೆ ಹಾಗೂ ಯಾವುದೇ ತಪ್ಪು ಮಾಹಿತಿ ಇದ್ದರೆ ತಕ್ಷಣ ಸಂಬಂಧಿತ ಅಧಿಕಾರಿಗಳಿಗೆ ತಿಳಿಸುವಂತೆ ಅಧಿಕಾರಿಗಳು ಹೇಳಿದ್ದಾರೆ. ಈ ಕಾರ್ಯವನ್ನು ಯಶಸ್ವಿಯಾಗಿ ನಡೆಸಲು ಸಾರ್ವಜನಿಕರ ಸಹಕಾರ ಅಗತ್ಯವಿದೆ ಎಂದು ಅವರು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 