ವಿಜಯಪುರ ಜಿಲ್ಲೆಯ ಖಾಸಗಿ ಶಾಲೆಗಳು ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಶೇ.15 ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಶಾಲಾ ಶುಲ್ಕವನ್ನು ಹೆಚ್ಚಿಸುತ್ತಿರುವ ಕ್ರಮವನ್ನು ಖಂಡಿಸಿ
ವಿಜಯಪುರ 09: ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷರಾದ ಭೋಗೇಶ್ ಸೋಲಾಪುರ್ ನೇತೃತ್ವದಲ್ಲಿ, ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ತಕ್ಷಣದ ಕ್ರಮಕ್ಕೆ ಆಗ್ರಹಿಸಿದೆ. ಮಾಧ್ಯಮದವರೊಂದಿಗೆ ಮಾತನಾಡಿದ ಜಿಲ್ಲಾಧ್ಯಕ್ಷ ಭೋಗೇಶ್ ಸೋಲಾಪುರ್ "ಜಿಲ್ಲೆಯ ಮಧ್ಯಮ ಹಾಗೂ ಬಡ ವರ್ಗದ ಕುಟುಂಬಗಳು ಈಗಾಗಲೇ ಬೆಲೆ ಏರಿಕೆಯ ಹೊರೆ ಹೊತ್ತಿದ್ದು, ಇಂತಹ ಸಂದರ್ಭದಲ್ಲಿ ವಿಜಯಪುರದ ಖಾಸಗಿ ಶಾಲೆಗಳ ಅನಿಯಂತ್ರಿತ ಶುಲ್ಕ ಹೆಚ್ಚಳವು ಪೋಷಕರ ಮೇಲೆ ಹೆಚ್ಚುವರಿ ಆರ್ಥಿಕ ಭಾರವನ್ನು ಹೊರಿಸುತ್ತಿದೆ" ಎಂದು ಅವರು ಆರೋಪಿಸಿದರು. "ಕರ್ನಾಟಕ ಶಿಕ್ಷಣ ಇಲಾಖೆಯ ನಿಯಮಗಳ ಪ್ರಕಾರ ಖಾಸಗಿ ಅನುದಾನರಹಿತ ಶಾಲೆಗಳು ಗರಿಷ್ಠ ಶೇ.5 ರವರೆಗೆ ಮಾತ್ರ ಶುಲ್ಕ ಹೆಚ್ಚಳ ಮಾಡಬಹುದಾಗಿದ್ದು, ಅದಕ್ಕಿಂತ ಹೆಚ್ಚಿನ ಏರಿಕೆ ನಿಯಮಬಾಹಿರವಾಗಿದೆ.
ಅಲ್ಲದೆ, ಹೆಚ್ಚಿನ ಶಾಲೆಗಳು ಶುಲ್ಕ ಹೆಚ್ಚಳಕ್ಕೆ ಅನುಗುಣವಾಗಿ ಮೂಲಸೌಕರ್ಯ, ಶಿಕ್ಷಕರ ಗುಣಮಟ್ಟ ಅಥವಾ ಶಿಕ್ಷಣದ ಮಟ್ಟದಲ್ಲಿ ಯಾವುದೇ ಗಮನಾರ್ಹ ಸುಧಾರಣೆ ಮಾಡಿಲ್ಲ. ಅತಿಯಾದ ಶುಲ್ಕ ಹೆಚ್ಚಳವು ಶಿಕ್ಷಣ ಕ್ಷೇತ್ರದಲ್ಲಿ ಅಸಮಾನತೆಯನ್ನು ಹೆಚ್ಚಿಸುವುದರ ಜೊತೆಗೆ ಆರ್ಥಿಕವಾಗಿ ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಶಿಕ್ಷಣದ ಹಕ್ಕಿಗೆ ಧಕ್ಕೆಯುಂಟು ಮಾಡಲಿದೆ" ಎಂದು ಭೋಗೇಶ್ ಸೋಲಾಪುರ್ ಬೇಸರ ವ್ಯಕ್ತಪಡಿಸಿದರು. ಆಮ್ ಆದ್ಮಿ ಪಾರ್ಟಿ ಜಿಲ್ಲಾಡಳಿತಕ್ಕೆ ಈ ಕೆಳಗಿನ ಪ್ರಮುಖ ಬೇಡಿಕೆಗಳನ್ನು ಜಿಲ್ಲೆಯ ಎಲ್ಲಾ ಖಾಸಗಿ ಶಾಲೆಗಳಲ್ಲಿ ಶೇ.5 ಕ್ಕಿಂತ ಹೆಚ್ಚಿನ ಶುಲ್ಕ ಹೆಚ್ಚಳವನ್ನು ನಿಷೇಧಿಸಿ, ಗರಿಷ್ಠ ಶೇ.5 ರಷ್ಟು ಮಾತ್ರ ಏರಿಕೆಗೆ ಅವಕಾಶ ನಿಯಮ ಉಲ್ಲಂಘಿಸಿ ಹೆಚ್ಚುವರಿ ಶುಲ್ಕ ವಸೂಲಿ ಮಾಡಿರುವ ಶಾಲೆಗಳ ವಿರುದ್ಧ ಕಾನೂನು ಕ್ರಮ ಕೈಗೊಂಡು, ಪೋಷಕರಿಂದ ವಸೂಲಿ ಮಾಡಿದ ಹೆಚ್ಚುವರಿ ಮೊತ್ತವನ್ನು ಜಿಲ್ಲಾ ಮಟ್ಟದಲ್ಲಿ " ಜಿಲ್ಲಾ ಶುಲ್ಕ ಪರೀಶೀಲನಾ ಸಮಿತಿ"ಯನ್ನು ರಚಿಸಿ,
ಶಾಲೆಗಳ ಶುಲ್ಕ ವಿವರಗಳನ್ನು ಸಾರ್ವಜನಿಕವಾಗಿ ನಿಯಮ ಉಲ್ಲಂಘಿಸುವ ಶಾಲೆಗಳ ವಿರುದ್ಧ ದಂಡಾತ್ಮಕ ಕ್ರಮ ಹಾಗೂ ಅಗತ್ಯವಿದ್ದಲ್ಲಿ ಮಾನ್ಯತೆ ರದ್ದುಪಡಿಸುವಂತಹ ಕಠಿಣ ಕ್ರಮಗಳನ್ನು ಸರ್ಕಾರಿ ಶಾಲೆಗಳ ಗುಣಮಟ್ಟವನ್ನು ಮತ್ತಷ್ಟು ಸುಧಾರಿಸಿ, ಪೋಷಕರಿಗೆ ಉತ್ತಮ ಹಾಗೂ ಕೈಗೆಟುಕುವ ಶಿಕ್ಷಣದ ಪರ್ಯಾಯ ವ್ಯವಸ್ಥೆಯನ ಪೋಷಕರ ಸಂಘಗಳು, ಶಾಲಾ ಆಡಳಿತ ಮಂಡಳಿಗಳು ಹಾಗೂ ಸಂಬಂಧಿತ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು.ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ವಿದ್ಯಾರ್ಥಿಗಳು ಹಾಗೂ ಪೋಷಕರ ಹಿತಾಸಕ್ತಿಯನ್ನು ಕಾಪಾಡಲು ಜಿಲ್ಲಾಡಳಿತವು ತ್ವರಿತ ಮತ್ತು ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಆಮ್ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಭೋಗೇಶ್ ಸೋಲಾಪುರ್ ಆಗ್ರಹಿಸಿದ್ದಾರೆ.ಈ ಸಂದರ್ಭದಲ್ಲಿ ಜಿಲ್ಲಾ ಮಾಧ್ಯಮ ಉಸ್ತುವಾರಿ ಸಂಜು ಶೆಟಗಾರ, ಯುವ ಮುಖಂಡ ಪ್ರಕಾಶ್ ಸಬರದ, ನಗರ ಜಂಟಿ ಕಾರ್ಯದರ್ಶಿ ಜ್ಯೋತಿಭಾ ಹೊನ್ನಕಲಸೆ ಉಪಸ್ಥಿತರಿದ್ದರು