ಜಮಖಂಡಿ

ದಶಕಗಳ ರಂಗಸೇವೆಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ: ಬಸವನಗೌಡ ಬಿರಾದಾರ ಆಗ್ರಹ

ದಶಕಗಳ ರಂಗಸೇವೆಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿ: ಬಸವನಗೌಡ ಬಿರಾದಾರ ಆಗ್ರಹ

ಲೋಕದರ್ಶನ ವರದಿ 


ಜಮಖಂಡಿ 25 : ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಮಹೇಶ್ವರ ಗ್ರಾಮದ ಬಸವನಗೌಡ ಬಿರಾದಾರ ಅವರ ಕುಟುಂಬದ ಹಿನ್ನೆಲೆಯ ಹಿರಿಯ ರಂಗಭೂಮಿ ಕಲಾವಿದನಾಗಿ. ತಮ್ಮ ಸುದೀರ್ಘ ಕಲಾಸೇವೆಯನ್ನು ಪರಿಗಣಿಸಿ ರಾಜ್ಯ ಸರಕಾರ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಬೇಕೆಂದು ರಾಜ್ಯ ಸರ್ಕಾರಕ್ಕೆ ಮನವಿ ಸಲಿಸಿ ಒತ್ತಾಯಿಸಿದ್ದಾರೆ. 

ನಗರದ ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಸುಮಾರು 5-6 ವರ್ಷಗಳಿಂದ ರಾಜ್ಯ ಸರಕಾರಕ್ಕೆ ಮನವಿಯನ್ನು ಸಲಿಸುತ್ತಾ ಬಂದಿರುತ್ತೇನೆ. ಸರಕಾರ ನನ್ನಂತ ಬಡ ಕಲಾವಿದನ್ನು ಪರಿಗಣಿಸದೆ ಕಡೆಗಣಿಸುತ್ತಿದೆ. 5-6 ವರ್ಷಗಳಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಬೇಕೆಂದು ಮನವಿಯನ್ನು ಸಲಿಸುತ್ತಿದೆನೆ. ಶಾಸಕರುಗಳು, ಸಚಿವರಗಳಿಗೆ ಭೇಟಿ ನೀಡಿ. ಅವರಿಂದ ಶಿಫಾರಸು ಪತ್ರಗಳನ್ನು ಲಗತ್ತಿಸಿ ಮನವಿಯನ್ನು ರಾಜ್ಯ ಸರಕಾರಕ್ಕೆ ಮನವಿಯನ್ನು ನೀಡುತ್ತಾ ಬಂದಿರುತ್ತೇನೆ ಎಂದು ತಮ್ಮ ಅಳಲನ್ನು ತೋಡಿಕೊಂಡರು. 

ನಾನು ಒಬ್ಬ ಬಡ ಕುಟುಂಬದಿಂದ ಬಂದವನು 1982ರಿಂದ ನಾಟಕ ಕಂಪನಿಗಳಲ್ಲಿ ಕಲಾವಿದನಾಗಿ ಹಾಗೂ ವ್ಯವಸ್ಥಾಪಕನಾಗಿ ಕಾರ್ಯನಿರ್ವಹಿಸುತ್ತಿದ್ದು, ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಸಂಚರಿಸಿ ನಾಟಕ ಪ್ರದರ್ಶನಗಳಲ್ಲಿ ಭಾಗವಹಿಸಿದ್ದೇನೆ. 150ಕ್ಕೂ ಹೆಚ್ಚು ನಾಟಕಗಳಲ್ಲಿ ಅಭಿನಯಿಸಿದ್ದು, ವೀರಗಾಸೆ, ಬಯಲಾಟ ಸೇರಿದಂತೆ ವಿವಿಧ ಸಾಂಸ್ಕೃತಿಕ ಚಟುವಟಿಕೆಗಳಲ್ಲಿಯೂ ತೊಡಗಿಸಿಕೊಂಡಿದ್ದೇನೆ.  

ಪ್ರತಿ ವರ್ಷ ರಾಜ್ಯೋತ್ಸವ ಪ್ರಶಸ್ತಿಗಾಗಿ ಅರ್ಜಿ ಸಲ್ಲಿಸುತ್ತಿದ್ದರೂ, ಇದುವರೆಗೆ ತಮ್ಮನ್ನು ಪ್ರಶಸ್ತಿಗೆ ಆಯ್ಕೆ ಮಾಡಿಲ್ಲ ಎಂಬುದು ಅವರ ಅಳಲು. ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ, ಮಾಜಿ ಸಚಿವ ಸಿ.ಎಸ್‌. ನಾಡಗೌಡ ಸೇರಿದಂತೆ ಹಲವು ಶಾಸಕರು ಸಹ ತಮ್ಮ ಪರವಾಗಿ ಶಿಫಾರಸು ಪತ್ರಗಳನ್ನು ನೀಡಿದ್ದಾರೆ. ಆದರೂ ಪ್ರಶಸ್ತಿ ದೊರೆಯದಿರುವುದು ಬೇಸರ ತಂದಿದೆ. ಈ ಬಾರಿ ಮುಖ್ಯಮಂತ್ರಿಗಳು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರು ತಮ್ಮ ಸುದೀರ್ಘ ಕಲಾಸೇವೆಯನ್ನು ಪರಿಗಣಿಸಿ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಬೇಕು ಎಂದು ಮನವಿ ಮಾಡಿದರು. 

ತಮ್ಮ ಕಣ್ಣಿನ ರೆಟಿನಾ ಶಸ್ತ್ರಚಿಕಿತ್ಸೆ ತುರ್ತಾಗಿ ಮಾಡಿಸಿಕೊಳ್ಳಬೇಕಿದ್ದು, ಅದಕ್ಕೆ ಹೆಚ್ಚಿನ ಹಣದ ಅವಶ್ಯಕತೆಯಿದೆ. ಈಗಾಗಲೇ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ತಮಗೆ ಚಿಕಿತ್ಸೆ ವೆಚ್ಚ ಭರಿಸುವುದು ಕಷ್ಟವಾಗಿದೆ ಎಂದು ಅವರು ನೋವು ತೋಡಿಕೊಂಡರು. 


ಸುದ್ದಿ ಓದಿ