ಗುರಿಯನ್ನು ಸಾಧಿಸಲು ಆತ್ಮವಿಶ್ವಾಸ ಮುಖ್ಯ-ಶ್ರೀ ಅರಿಹಂತ ಪ್ರಸಾದ
Confidence is key to achieving goals - Shri Arihant Prasad
ಧಾರವಾಡ 05 : ವಿದ್ಯ ಕಲಿಸಿದ ಗುರು ದೇವರಿಗೆ ಸಮಾನ ಜನ್ಮ ಕೊಟ್ಟ ತಂದೆ ತಾಯಿ ಹಾಗೂ ಜನ್ಮಭೂಮಿಯನ್ನು ಮರೆಯಬೇಡಿ. ವಿದ್ಯಾರ್ಥಿಗಳು ಗುರುಗಳು ತೋರಿಸುವ ಉತ್ತಮ ಮಾರ್ಗದಲ್ಲಿ ಸಾಗಬೇಕು ಹಾಗೂ ಚೆನ್ನಾಗಿ ವಿದ್ಯಾಭ್ಯಾಸ ಮಾಡಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಧಾರವಾಡದ ವಿದ್ಯಾಗಿರಿಯ ಜೆ.ಎಸ್.ಎಸ್ ಕನ್ನಡ ಮಾಧ್ಯಮ ಪ್ರೌಢಶಾಲೆಯ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವನ್ನು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಜೆ.ಎಸ್.ಎಸ್ ನ ಆಡಳಿತಾಧಿಕಾರಿಗಳಾದ ಶ್ರೀ ಅರಿಹಂತ ಪ್ರಸಾದರವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಇಂದಿನ ಮಕ್ಕಳೇ ನಾಳಿನ ಪ್ರಜೆಗಳು ಶಾಲೆಯಲ್ಲಿ ಉತ್ತಮ ಶಿಕ್ಷಣ ಪಡೆದುಕೊಂಡು ನಿಮ್ಮ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಿ ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳು ಕ್ರಿಯಾಶೀಲರಾಗಿ ಚಟುವಟಿಕೆ ಉಳ್ಳವರಾಗಿ ಆತ್ಮವಿಶ್ವಾಸವನ್ನು ರೂಢಿಸಿಕೊಂಡು ಮುಂದೆ ಸಾಗಬೇಕು ಇತ್ತೀಚಿಗೆ ಕೃತಕ ಬುದ್ಧಿಮತ್ತೆಯ ಪ್ರಭಾವ ಹೆಚ್ಚಾಗಿದ್ದು ಮಕ್ಕಳು ಈಗಿನಿಂದಲೇ ಶಿಸ್ತನ್ನು ರೂಢಿಸಿಕೊಂಡು ಉತ್ತಮ ಶಿಕ್ಷಣ ಪಡೆದುಕೊಂಡು ಉತ್ತಮ ಬದುಕನ್ನು ರೂಪಿಸಿಕೊಳ್ಳಿ, ಧೈರ್ಯದಿಂದ ಮುನ್ನಡೆಯಿರಿ ಎಂದು ಹೇಳಿದರು.
ಇನ್ನೋರ್ವ ಅತಿಥಿಗಳಾದ ಐಟಿಐ ಕಾಲೇಜಿಗೆ ಪ್ರಾಚಾರ್ಯರಾದ ಶ್ರೀ ಮಹಾವೀರ ಉಪಾಧ್ಯೆ ಮಾತನಾಡಿ ಜೆ.ಎಸ್.ಎಸ್ ಒಂದು ಆಲದಮರ ಅಲ್ಲಿ ಸಾಕಷ್ಟು ಕೋರ್ಸ್ಗಳಿದ್ದು ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ನಂತರ ಮುಂದೇನು ಎಂಬ ಭಯ ಬೇಡ ಮಕ್ಕಳ ಶ್ರೇಯೋಭಿವೃದ್ಧಿಗಾಗಿಯೇ ಪೂಜ್ಯ ಡಾ. ಡಿ.ವೀರೇಂದ್ರ ಹೆಗ್ಗಡೆಯವರ ಆಶೀರ್ವಾದದಡಿಯಲ್ಲಿ ಹಲವಾರು ಕೋರ್ಸುಗಳು ಜೆ.ಎಸ್.ಎಸ್ ನಲ್ಲಿ ಕಲಿಯಲು ಲಭ್ಯವಿದೆ. ತಮ್ಮ ಆಸಕ್ತಿಯ ಕೋರ್ಸಗಳನ್ನು ಆಯ್ಕೆ ಮಾಡಿ ಚೆನ್ನಾಗಿ ಕಲಿಯಿರಿ. ಇಲ್ಲಿ ಸಿಗುವ ನೈತಿಕ ಶಿಕ್ಷಣ ನಿಮ್ಮ ಜೀವನಕ್ಕೆ ದಾರದೀಪವಾಗಲಿ ಎಂದು ಹೇಳಿದರು.
ಶಾಲೆಯ ಮುಖ್ಯೋಪಾಧ್ಯಾಯಿನಿಯರಾದ ಶ್ರೀಮತಿ ಮೈನಾವತಿ ದಿವಟೆ ಮಾತನಾಡಿ ವಿದ್ಯೆ ಎಂಬ ಎರಡಕ್ಷರ ಮನುಷ್ಯನನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುತ್ತದೆ. ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಪ್ರಪಂಚದ ಅನ್ವೇಷಣೆಗೆ ಹೊರಡಲು ಸಿದ್ದರಾಗಿ ನಿಮ್ಮ ಭವಿಷ್ಯ ಉಜ್ವಲವಾಗಲಿ ಎಂದು ಮಕ್ಕಳಿಗೆ ಹಾರೈಸಿದರು ಇದೇ ಸಂದರ್ಭದಲ್ಲಿ ವಿವಿಧ ಚಟುವಟಿಕಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಮಾಣಪತ್ರ ವಿತರಿಸಲಾಯಿತು. ಶೀತಲ್ ಕುಂದರ್ ಅವರು ಕಾರ್ಯಕ್ರಮ ನಿರೂಪಿಸಿದರು. ಶ್ರೀ ಮಂಜುನಾಥ ದಾಸನಕೊಪ್ಪ ವಂದಿಸಿದರು. ಕಾರ್ಯಕ್ರಮದಲ್ಲಿ ಎಲ್ಲ ಶಿಕ್ಷಕ ವೃಂದದವರು ಮತ್ತು ಮಕ್ಕಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 