15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮುಗೆ ಗಣ್ಯರಿಂದ ಅಭಿನಂದನೆ
ಸಿರುಗುಪ್ಪ 22: ಭವ್ಯ ಭಾರತ ದೇಶದ 15ನೇ ರಾಷ್ಟ್ರಪತಿಯಾಗಿ ಗೌರವಾನ್ವಿತ ದ್ರೌಪದಿ ಮುರ್ಮು ಅವರು ಆಯ್ಕೆಯಾಗಿದ್ದಕ್ಕೆ ಅವರ ಯಶಸ್ಸಿಗೆ ದೊರೆತಿರುವ ಗೌರವಕ್ಕೆ ಶಾಸಕ ಎಂ ಎಸ್ ಸೋಮಲಿಂಗಪ್ಪ, ಮಾಜಿ ಶಾಸಕ ಬಿ ಎಂ ನಾಗರಾಜ್, ಟಿ ಎಂ ಚಂದ್ರಶೇಖರಯ್ಯ ಸ್ವಾಮಿ, ಜನಾಭಿಪ್ರಾಯ ಮುಖಂಡರು ಸಮಾಜ ಸುಧಾರಕರು ಎ ಅಬ್ದುಲ್ ನಬಿ, ಖಾಜಿ ಸೈಯದ್ ಅಬ್ದುಲ್ ರಜಾಕ್ ಖಾದ್ರಿ ಅಶ್ರಫಿ, ಹಾಜಿ ಎ ಮೊಹಮ್ಮದ್ ಇಬ್ರಾಹಿಂ, ತಾಲ್ಲೂಕು ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಹಾಜಿ ಹಂಡಿ ಹುಸೇನ್ ಬಾಷಾ, ಈದ್ಗಾ ಮತ್ತು ಖಬರಸ್ತಾನ್ ಕಮಿಟಿ ಅಧ್ಯಕ್ಷ ಹಂಡಿ ಹಾಶಿಮ್, ಡಬಲ್ ಬಾಂಡ್ ಹಾಜಿ ಟಿ ಜಿ ಅಬ್ದುಲ್ ಗನಿ, ಸಾಮಾಜಿಕ ಕಾರ್ಯಕರ್ತ ಮೊಹಮ್ಮದ್ ರಫಿ, ಡಾ ಮೊಹಮ್ಮದ್ ಅಲಿ, ಖತೀಬ್ ಅಬುಲ್ ಹಸನ್, ಖತೀಬ್ ಜಹೀರುದ್ದೀನ್ ಬಾಬು, ಹಾಜಿ ಖಾಲಿ ಚೀಲ ಹುಸೇನ್ ಸಾಬ್, ಹಾಜಿ ಅಬ್ದುಲ್ ಹಮೀದ್ ಫಾರೂಕಿ, ಎ ಮೊಹಮ್ಮದ್ ನೌಷಾದ್ ಅಲಿ ಈ ಎಲ್ಲಾ ಪ್ರಮುಖರು ಮಾತನಾಡುತ್ತಾ ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಆಶಯಗಳನ್ನು ಉಳಿಸಿ ಬೆಳೆಸುವ ಕೆಲಸವಾಗಲಿ ಎಂದು ಹೃತ್ಪೂರ್ವಕವಾಗಿ ಅಭಿನಂದಿಸಿ ಶುಭ ಹಾರೈಸಿದರು.