ಇಂದು ನೂತನ ಶಾಸಕ ಜಿ ಎಸ್ ಪಾಟೀಲ ನೇತೃತ್ವದಲ್ಲಿ ಅಭಿನಂದನಾ ಕಾರ್ಯಕ್ರಮ
ರೋಣ 01: ಪಟ್ಟಣದ ರಾಜೀವಗಾಂಧಿ ಆಯುರ್ವೇದಿಕ್ ಮಹಾ ವಿದ್ಯಾಲಯದಲ್ಲಿ ಜೂನ್ 02ರಂದು ರೋಣ ಮತಕ್ಷೇತ್ರದ ವಿಧಾನಸಭೆ ಚುನಾವಣೆಯಲ್ಲಿ ಕಾರ್ಯಕರ್ತರು ಹಾಗೂ ಮುಖಂಡರಿಂದ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಶಾಸಕ ಜಿ.ಎಸ್.ಪಾಟೀಲ ಅವರ ನೇತೃತ್ವದಲ್ಲಿ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಾಮಾಜಿಕ ಜಾಲತಾಣ ರೋಣ ತಾಲೂಕ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಗಂಗಯ್ಯ ಗುಮ್ಮತಿ ಅವರು ತಿಳಿಸಿದ್ದಾರೆ.
ಅಭಿನಂದನಾ ಕಾರ್ಯಕ್ರಮದಲ್ಲಿ ಶಾಸಕ ಜಿ.ಎಸ್.ಪಾಟೀಲ ಅವರ ಗೆಲುವಿಗಾಗಿ ಶ್ರಮಿಸಿದ ಹಿರಿಯರು ಮುಖಂಡರು, ಕಾರ್ಯಕರ್ತರು,ಮಹಿಳಾ ಕಾರ್ಯಕರ್ತರು ಭಾಗವಹಿಸಬೇಕೆಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.