ಕಾಂಗ್ರೆಸ್ ಪಕ್ಷದ ಸಂಸ್ಥಾಪನ ದಿನಾಚರಣೆ
ಶಿಗ್ಗಾವಿ 30: ಕಾಂಗ್ರೆಸ್ ಪಕ್ಷದ ಸಂಸ್ಥಾಪನ ದಿನಾಚರಣೆಯ ಸಂದರ್ಭದಲ್ಲಿ ಬೆಂಗಳೂರಿನ ಕಾಂಗ್ರೆಸ್ ಪಕ್ಷದ ಭಾರತಜೋಡೋ ಇಂದಿರಾ ಭವನದಲ್ಲಿ ಕೆಪಿಸಿಸಿ ರಾಜ್ಯಾಧ್ಯಕ್ಷರು ಹಾಗೂ ಮುಖ್ಯಮಂತ್ರಿಗಳ ಉಪಸ್ಥಿತಿಯಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಶಿಗ್ಗಾವಿ ತಾಲೂಕ ಕಾಂಗ್ರೆಸ್ ಪಕ್ಷದ ವಕ್ತಾರ ಮಂಜುನಾಥ್ ಮಣ್ಣನ್ನವರ್ ಭಾಗವಹಿಸಿ ತದನಂತರ ಪಕ್ಷದ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಹಾಗೂ ಉಪಾಧ್ಯಕ್ಷ ವಿನಯ ಕುಲಕರ್ಣಿ ಅವರನ್ನು ಭೇಟಿ ಮಾಡಿ ಶಿಗ್ಗಾವಿ ವಿಧಾನಸಭಾ ಮತಕ್ಷೇತ್ರದ ಪಕ್ಷ ಸಂಘಟನೆ ಕೆಲಸಕ್ಕೆ ಶಕ್ತಿ ತುಂಬುವ ಕೆಲಸವಾಗಬೇಕಾದರೆ ಪಕ್ಷದ ನಿಷ್ಠಾವಂತರಿಗೆ ಸ್ಥಳೀಯ ಸಂಸ್ಥೆಗಳ ಸರ್ಕಾರದ ನಾಮ ನಿರ್ದೇಶನಗಳಲ್ಲಿ ಹೆಚ್ಚು ಅನುಕೂಲ ಮಾಡಿಕೊಡಬೇಕು ಅತ್ಯಂತ ಪ್ರಮುಖವಾಗಿ ನಿಗಮ ಮಂಡಳಿ ನೇಮಕಾತಿಯಲ್ಲಿ ರಾಜ್ಯಮಟ್ಟದಲ್ಲಿ ಕನಿಷ್ಠ ಪಕ್ಷ ಎರಡು ನಿರ್ದೇಶಕರು ನಾದರೂ ನಾಮ ನಿರ್ದೇಶನ ಮಾಡಲು ಮಾಡಿಕೊಡಬೇಕು ಎಂದು ಮನವಿ ಮಾಡಿಕೊಂಡರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ನಾಯಕರುಗಳು ಶಿಗ್ಗಾವಿ ವಿಧಾನಸಭಾ ಮತಕ್ಷೇತ್ರಕ್ಕೆ ಸಂಘಟನೆ ವಿಚಾರವಾಗಿ ವಿಶೇಷ ಗಮನಹರಿಸಲಾಗಿದೆ. ಬಿಜೆಪಿ ಸರ್ಕಾರದಲ್ಲಿಅವರ ಆಡಳಿತ ವಿರೋಧಿ ಹಾಗೂ ಜನ ವಿರೋಧಿ ತೀರ್ಮಾನಗಳ ವಿರುದ್ಧ ಹೋರಾಟ ಮಾಡಿದವರಿಗೆ ಪಕ್ಷಕ್ಕಾಗಿ ಕ್ಷಮಿಸಿದವರಿಗೆ ಹೆಚ್ಚಿನಆದ್ಯತೆಕೊಟ್ಟು ನಾಮ ನಿರ್ದೇಶನ ಮಾಡಲಾಗುವುದೆಂದು ತಿಳಿಸಿದ್ದಾರೆ ಇದೇ ಸಂದರ್ಭದಲ್ಲಿ ಕೆಪಿಸಿಸಿ ಕಚೇರಿಗೆ ಆಗಮಿಸಿದ್ದ ಪರಿಶಿಷ್ಟ ಜಾತಿಅಭಿವೃದ್ಧಿ ಇಲಾಖೆ ಹಾಗೂ ಕ್ರೀಡಾ ಸಚಿವ ನಾಗೇಂದ್ರರವರು ಹಾಗೂ ಬಳ್ಳಾರಿ ಯುವ ಶಾಸಕರಾದ ಭರತ್ ರೆಡ್ಡಿ ಅವರನ್ನು ಭೇಟಿ ಮಾಡಲಾಯಿತು.