ಜಾವಡೇಕರ್ ವಿರುದ್ಧ ಕಾಂಗ್ರೆಸ್ ನಾಯಕರ ಪ್ರತಿಭಟನೆ- ಬಂಧನ
ಪಣಜಿ, ಅಕ್ಟೋಬರ್ 3 : ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್ ಅವರನ್ನು ಭೇಟಿಯಾಗಲು ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ಗೋವಾ ಪ್ರದೇಶದ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಸೇರಿದಂತೆ ಹಲವು ಪ್ರಮುಖ ಕಾಂಗ್ರೆಸ್ ನಾಯಕರನ್ನು ಬಂಧಿಸಲಾಗಿದೆ.
ಶುಕ್ರವಾರ ರಾತ್ರಿ ನಗರದ ಹೋಟೆಲ್ ಮುಂದೆ ಪ್ರತಿಭಟನೆ ನಡೆಸಿದ ನಂತರ ಕಾಂಗ್ರೆಸ್ ನಾಯಕರನ್ನು ಬಂಧಿಸಲಾಗಿದೆ.
ಕೃಷಿ ಮಸೂದೆ ಕುರಿತಂತೆ ಸರಣಿ ಸಭೆಗಳಲ್ಲಿ ಭಾಗವಹಿಸಲು ಕೇಂದ್ರ ಸಚಿವರು ನಗರದಲ್ಲಿದ್ದ ಕಾರಣ, ಕಾಂಗ್ರೆಸ್ ನಾಯಕರು ಕೇಂದ್ರ ಸಚಿವರನ್ನು ಭೇಟಿ ಮಾಡಲು ಬಯಸಿದ್ದರು ಆದರೆ ಅನುಮತಿ ನಿರಾಕರಿಸಲಾಯಿತು .
ಇದರಿಂದ ಕೆರಳಿದ ಕೈ ನಾಯಕರು ಸಚಿವರ ವಿರುದ್ಧ ಕಾಂಗ್ರೆಸ್ ಘೋಷಣೆ ಕೂಗಿ ಮತ್ತು ಕಪ್ಪು ಭಾವುಟ ಪ್ರದರ್ಶನ ಮಾಡಿದರು.ರಾಜ್ಯದ ಕಾಂಗ್ರೆಸ್ ಮುಖಂಡರು ಘಟನೆಯನ್ನು ಬಲವಾಗಿ ಖಂಡಿಸಿ ಜಂಗಲ್ ರಾಜ್ ಆಡಳಿತ ನಡೆಯುತ್ತಿದೆ ಎಂದೂ ದೂರಿದ್ದಾರೆ.