ಕಾಂಗ್ರೆಸ್ ಅಭ್ಯರ್ಥಿ ಸುನೀಲಗೌಡ ಪಾಟೀಲ ಗೆಲುವು: ವಿಜಯೋತ್ಸವ
ತಾಳಿಕೋಟೆ 14: ವಿಧಾನ ಪರಿಷತ್ಗೆ ಸ್ಥಳೀಯ ಸಂಸ್ಥೆಗಳಿಂದ ನಡೆದ ಚುನಾವಣೆಯಲ್ಲಿ ಕಾಂಗ್ರೇಸ್ ಅಭ್ಯರ್ಥಿ ಸುನೀಲಗೌಡ ಪಾಟೀಲ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಪಟ್ಟಣದ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಸಂಭ್ರಮಿಸಿದರು.
ವಿಧಾನ ಪರಿಷತ್ ಚುನಾವಣೆಯಲ್ಲಿ ಮೊದಲ ಪ್ರಾಶಸ್ತ್ಯದ ಮತಗಳ ಮೂಲಕ ಗೆಲುವು ಸಾಧಿಸುತ್ತಿದ್ದಂತೆ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಸೇರಿದ ಕಾರ್ಯಕರ್ತರು, ಮುಖಂಡರು ಪಟಾಕ್ಷಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪುರಸಭೆ ಸದಸ್ಯ ಮಲ್ಲಿಕಾರ್ಜುನ ಪಟ್ಟಣಶೇಟ್ಟಿ, ಪರಶುರಾಮ ತಂಗಡಗಿ, ಸ್ಥಳೀಯ ಸಂಸ್ಥೆಗಳಿಂದ ನಡೆದ ಚುನಾವಣೆಯಲ್ಲಿ ಮೊದಲ ಪ್ರಾಶಸ್ತ್ಯದ ಮತಗಳಿಂದ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಗೆಲುವು ಸಾಧಿಸಿರುವದು ಅವಳಿ ಜಿಲ್ಲೆಯಲ್ಲಿ ಪಕ್ಷ ಪ್ರಬಲವಾಗಿದೆ ಎನ್ನುವದನ್ನು ತೋರಿಸುತ್ತದೆ. ಅತಿ ಹೆಚ್ಚು ಸಂಖ್ಯೆಯಲ್ಲಿ ಮುದ್ದೇಬಿಹಾಳ ಮತಕ್ಷೇತ್ರದಿಂದ ಕಾಂಗ್ರೇಸ್ ಪಕ್ಷಕ್ಕೆ ಬಿದ್ದಿವೆ. ಬಿಜೆಪಿ ಸರ್ಕಾರ ಸತ್ತು ಹೋಗಿದೆ. ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಬ್ರಷ್ಠಾಚಾರ, ಸ್ವಜನ ಪಕ್ಷಪಾತ ನಡೆಯುತ್ತಿದೆ. ಮುಂದಿನ ದಿನಗಳಲ್ಲಿ ಕಾಂಗ್ರೇಸ್ ಪಕ್ಷವನ್ನು ಸಂಘಟಿಸುವ ಮೂಲಕ ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಮುದ್ದೇಬಿಹಾಳದಲ್ಲಿಯೂ ಕಾಂಗ್ರೇಸ್ ಗೆಲುವಿನ ನಾಗಾಲೋಟ ಮುಂದುವರೆಸೋಣ ಎಂದರು.
ಪುರಸಭೆ ಉಪಾಧ್ಯಕ್ಷ ಮುಸ್ತಫಾ ಚೌದ್ರಿ, ಸದಸ್ಯರಾದ ಅಕ್ಕಮಹಾದೇವಿ ಕಟ್ಟಿಮನಿ, ಯಾಸೀನ ಮಮದಾಪೂರ, ಮುಖಂಡರಾದ ಪ್ರಭುಗೌಡ ಮದರಕಲ್ಲ, ಮಾಜಿ ಪುರಸಭೆ ಅಧ್ಯಕ್ಷ ಮಹಿಬೂಬ ಚೋರಗಸ್ತಿ, ಸಂಗನಗೌಡ ಅಸ್ಕಿ, ಮೋದಿನಸಾಬ ನಗಾರ್ಚಿ, ಮಹಿಬೂಬ ಕೆಂಭಾವಿ ಸೇರಿದಂತೆ ಮುಖಂಡರು, ಕಾರ್ಯಕರ್ತರು ಇದ್ದರು.