ಒಳ ಮೀಸಲಾತಿ ನೀಡಿಕೆಯಲ್ಲಿ ಕಾಂಗ್ರೆಸ್ ಗೊಂದಲ ಸೃಷ್ಟಿ: ಹನುಮಂತಪ್ಪ
Congress creating confusion in granting internal reservations: Hanumanthappa
ಬಳ್ಳಾರಿ 18: ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಯಾಗಿದ್ದಾಗ ಮಾಡಿದ್ದ ಒಳ ಮೀಸಲಾತಿಯನ್ನು ಜಾರಿಗೊಳಿಸಬಾರದು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರ ಮೀಸಲಾತಿ ಅನುಷ್ಠಾನ ವಿಷಯದಲ್ಲಿ ಗೊಂದಲ ಸೃಷ್ಟಿಸಿದೆ ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿ ರಾಜ್ಯಾಧ್ಯಕ್ಷಹ ಎಚ್.ಹನುಮಂತಪ್ಪ ಆರೋಪಿಸಿದ್ದಾರೆ.ಅವರು ನಿನ್ನೆ ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದಸುದ್ದಿಗೋಷ್ಠಿಯಲ್ಲಿ ಅವರು, ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ನಿಜಕ್ಕೂ ದಲಿತ ಪರ ಕಾಳಜಿಯಿದ್ದಿದ್ದರೆ ನಾಗಮೋಹನ್ ದಾಸ್ ವರದಿಯನ್ನು ಅನುಷ್ಠಾನಗೊಳಿಸಬೇಕಿತ್ತು. ಆದರೆ, ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ದಲಿತರ ಮತಗಳು ಮಾತ್ರ ಬೇಕೇ ವಿನಾ, ದಲಿತರ ಕಲ್ಯಾಣದ ಯಾವ ಕಾಳಜಿಯೂ ಈ ಸರ್ಕಾರಕ್ಕಿಲ್ಲ. ಶೋಷಿತ ಸಮುದಾಯಗಳ ಅಭಿವೃದ್ಧಿಗೆಂದೇ ಮೀಸಲಾಗಿರುವ ಎಸಿಪಿ, ಟಿಎಸ್ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಳ್ಳುತ್ತಿರಲಿಲ್ಲ ಎಂದು ಆರೋಪಿಸಿದರು.
ದಲಿತರಿಗೆ ಒಳ ಮೀಸಲಾತಿ ವಿಚಾರದಲ್ಲಿ ನೆರೆಯ ತೆಲಂಗಾಣ ಸರ್ಕಾರ ತೆಗೆದುಕೊಂಡ ಮಹತ್ವದ ನಿರ್ಧಾರವನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ತೆಗೆದುಕೊಳ್ಳದಿರುವ ಕುರಿತು ಕಾಂಗ್ರೆಸ್ ಪಕ್ಷದಲ್ಲಿರುವ ದಲಿತ ನಾಯಕರೇ ಧ್ವನಿ ಎತ್ತದಿರುವುದು ವಿಪರ್ಯಾಸ ಸಂಗತಿಯಾಗಿದೆ. ಶೋಷಿತ ಸಮುದಾಯಗಳ ವಿಚಾರ ಬಂದಾಗ ಬಿಜೆಪಿ ಈ ಮೊದಲಿನಿಂದಲೂ ಧ್ವನಿ ಎತ್ತುತ್ತಲೇ ಬಂದಿದೆ. ಮೀಸಲಾತಿ ಜಾರಿ ನೀತಿಯಲ್ಲಿ ಕಾಂಗ್ರೆಸ್ ಮಾಡುತ್ತಿರುವ ಗೊಂದಲ ಹಾಗೂ ವಿಭಿನ್ನ ನೀತಿಗಳ ವಿರುದ್ದ ಬಿಜೆಪಿ ಹೋರಾಟ ನಡೆಸಲಿದೆಂದರು. ವಿಧಾನ ಪರಿಷತ್ ಸದಸ್ಯ ವೈ.ಎಂ.ಸತೀಶ್ ನಗರದ ಮಾಜಿ ಶಾಸಕ ಜಿ.ಸೋಮಶೇಖರ ರೆಡ್ಡಿ ಮಾತನಾಡಿ, ದಲಿತರ ಮತಗಳನ್ನು ಪಡೆದು ಅಧಿಕಾರಕ್ಕೆ ಬರುವ ಕಾಂಗ್ರೆಸ್ಗೆ ಈ ಸಮುದಾಯಗಳ ಅಭಿವೃದ್ಧಿಯ ಬಗ್ಗೆ ಕಾಳಜಿ ಇಲ್ಲ. ಮೀಸಲಾತಿ ವಿಚಾರದಲ್ಲಿನ ಗೊಂದಲವನ್ನು ತಿಳಿಗೊಳಿಸಬೇಕು ಎಂದು ಆಗ್ರಹಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 