ಅಯೋಧ್ಯೆ ರಾಮಮಂದಿರದ ಆರೋಪಗಳ ಕುರಿತು ಸಿಬಿಐ ತನಿಖೆಗೆ ಕಾಂಗ್ರೆಸ್ ಒತ್ತಾಯ
Congress demands CBI probe into Ayodhya Ram Mandir allegations
ಕೊಪ್ಪಳ 17: ಅಯೋಧ್ಯೆ ರಾಮಮಂದಿರದ ನಿರ್ಮಾಣ ಹಾಗೂ ದೇವಾಲಯದ ಆಡಳಿತಕ್ಕೆ ಸಂಬಂಧಿಸಿದಂತೆ ಕೇಳಿಬರುತ್ತಿರುವ ಆರೋಪಗಳ ಕುರಿತು ಸುಪ್ರೀಂ ಕೋರ್ಟ್ನ ಹಾಲಿ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್ ಜಿಲ್ಲಾ ಪ್ರಚಾರ ಸಮಿತಿ ಮುಖ್ಯ ಸಂಯೋಜಕ ವೆಂಕಟೇಶ್ ಹೆಗಡೆ ಆಗ್ರಹಿಸಿದರು.
ನಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ ಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಮಮಂದಿರ ನಿರ್ಮಾಣ ಹಾಗೂ ದೇವಾಲಯಕ್ಕೆ ಭಕ್ತರು ನೀಡಿರುವ ಹಣ, ಚಿನ್ನ, ಬೆಳ್ಳಿ, ಆಭರಣ ಮತ್ತು ಇತರ ಕಾಣಿಕೆಗಳ ನಿರ್ವಹಣೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳು ಕೇಳಿಬರುತ್ತಿವೆ ಎಂದು ಹೇಳಿದರು.
ಈ ಆರೋಪಗಳ ಹಿನ್ನೆಲೆಯಲ್ಲಿ ಕೇಂದ್ರ ಹಾಗೂ ಉತ್ತರ ಪ್ರದೇಶ ಸರ್ಕಾರ ನೇಮಕ ಮಾಡಿರುವ ರಾಮಮಂದಿರ ಟ್ರಸ್ಟ್ನ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸದಸ್ಯರನ್ನು ವಿಸರ್ಜಿಸಿ, ತಾತ್ಕಾಲಿಕ ಆಡಳಿತಾಧಿಕಾರಿಯನ್ನು ನೇಮಿಸಬೇಕು. ನಂತರ ಪಾರದರ್ಶಕ ಮತ್ತು ಪ್ರಾಮಾಣಿಕ ವ್ಯಕ್ತಿಗಳನ್ನು ಟ್ರಸ್ಟ್ಗೆ ನೇಮಕ ಮಾಡುವಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಪ್ರಕರಣದ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಲು ಸುಪ್ರೀಂ ಕೋರ್ಟ್ನ ಹಾಲಿ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಗೆ ಆದೇಶ ನೀಡಬೇಕು ಎಂದು ಅವರು ಆಗ್ರಹಿಸಿದರು.
ಇದೇ ವೇಳೆ, ಈ ಬೆಳವಣಿಗೆಗೆ ನೈತಿಕ ಹೊಣೆ ಹೊತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ದೇಶದ ಜನರ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದರು.
ದೇಶದ ಜನರ ಧಾರ್ಮಿಕ ನಂಬಿಕೆಗೆ ಸಂಬಂಧಿಸಿದ ವಿಷಯದಲ್ಲಿ ಯಾವುದೇ ಅಕ್ರಮ ಅಥವಾ ಭ್ರಷ್ಟಾಚಾರ ನಡೆದಿದ್ದರೆ ಅದನ್ನು ಮುಚ್ಚಿಡದೆ ಸತ್ಯಾಂಶವನ್ನು ಬಹಿರಂಗಪಡಿಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು. ಸುದ್ದಿಗೋಷ್ಠಿಯಲ್ಲಿ ತಾಲೂಕು ಉಪಾಧ್ಯಕ್ಷ ತೋಟಪ್ಪ ಕಾಮನೂರು, ಪ್ರಕಾಶ್ ರಾಠೋಡ್, ಶೇಖರಗೌಡ ಮಾಲಿಪಾಟೀಲ್, ಸೋಮಲಿಂಗಪ್ಪ ಹುಡೆದ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 