ಮುಂದಗೋಡ

ಮುಂಡಗೋಡಿನಲ್ಲಿ ಕಾಂಗ್ರೆಸ್ ಸಂಘಟನಾ ಶಕ್ತಿ ಪ್ರದರ್ಶನ

ಮುಂಡಗೋಡಿನಲ್ಲಿ ಕಾಂಗ್ರೆಸ್ ಸಂಘಟನಾ ಶಕ್ತಿ ಪ್ರದರ್ಶನ


ಲೋಕದರ್ಶನ ವರದಿ 

ಮುಂಡಗೋಡ 06: ಪಟ್ಟಣದ ಸರ್ಕಾರಿ ಆಸ್ಪತ್ರೆಯ ಮುಂಭಾಗದಲ್ಲಿರುವ  ಮಹಾಗಣಪತಿ ದೇವಸ್ಥಾನದ ಸಭಾಂಗಣದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮುಂಡಗೋಡ ವತಿಯಿಂದ ’ಸಂಘಟನಾ ಸೃಜನ 2.0’ ಕಾರ್ಯಕ್ರಮದ ಪ್ರಮುಖ ಪೂರ್ವಭಾವಿ ಸಭೆಯು ಅತ್ಯಂತ ಯಶಸ್ವಿಯಾಗಿ ಜರುಗಿತು. ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷ ಜಿ.ಟಿ. ನಾಯ್ಕ, "ಕಾಂಗ್ರೆಸ್ ಎನ್ನುವುದು ಕೇವಲ ರಾಜಕೀಯ ಪಕ್ಷವಲ್ಲ, ಅದೊಂದು ಸಿದ್ಧಾಂತದ ಚಳುವಳಿ. ನಮ್ಮಲ್ಲಿ ಯಾವುದೇ ಬಣಗಳಿಲ್ಲ, ನಾವೆಲ್ಲರೂ ಒಂದೇ ಬ್ಯಾನರ್ ಅಡಿಯಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದೇವೆ" ಎಂದರು.

ಪಕ್ಷದ ಸಂಘಟನೆಯನ್ನು ಶಕ್ತಿಗೊಳಿಸಲು ಹಾಗೂ ಕಾರ್ಯಕರ್ತರನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳಲು ಅವರು ಕರೆ ನೀಡಿದರು. ಕೆಪಿಸಿಸಿ ಸದಸ್ಯ ವಿವೇಕ್ ಹೆಬ್ಬಾರ್ ಮಾತನಾಡಿ, "ಮುಂಡಗೋಡು ಎಂದರೆ ಗಂಡುಮೆಟ್ಟಿದ ನಾಡು. ಲೋಕಸಭಾ ಚುನಾವಣೆಯಲ್ಲಿ ಮುಂಡಗೋಡ ತಾಲೂಕಿನಿಂದ ಕಾಂಗ್ರೆಸ್ ಪಕ್ಷಕ್ಕೆ ಭಾರಿ ಲೀಡ್ ತಂದಿಕೊಟ್ಟ ಹೆಮ್ಮೆ ನಮ್ಮ ಕಾರ್ಯಕರ್ತರದ್ದು. ಬಿಜೆಪಿ ಪಕ್ಷವು ಧರ್ಮ ಮತ್ತು ದೇವರ ಹೆಸರಿನಲ್ಲಿ ರಾಜಕೀಯ ಮಾಡುತ್ತಿದೆ" ಎಂದು ತೀವ್ರ ವಾಗ್ದಾಳಿ ನಡೆಸಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ ಹಾಗೂ ವಾದಿರಾಜ್ ಸಹ ಸಭೆಯನ್ನುದ್ದೇಶಿಸಿ ಮಾತನಾಡಿದರು.  


ಸುದ್ದಿ ಓದಿ