ಚಿಕ್ಕೋಡಿ

ರೈತರ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಕಾಳಜಿಯಿಲ್ಲ: ಶಾಸಕ ದುರ್ಯೋಧನ ಐಹೊಳೆ

ರೈತರ ಬಗ್ಗೆ ಕಾಂಗ್ರೆಸ್ ಸರ್ಕಾರಕ್ಕೆ ಕಾಳಜಿಯಿಲ್ಲ: ಶಾಸಕ ದುರ್ಯೋಧನ ಐಹೊಳೆ


ಚಿಕ್ಕೋಡಿ 07: ಕಾಂಗ್ರೆಸ್ ಸರ್ಕಾರಕ್ಕೆ ರೈತರ ಬಗ್ಗೆ ಯಾವುದೇ ಕಾಳಜಿಯಿಲ್ಲ. ಬರದಿಂದ ರೈತರು ಸಂಕಷ್ಟದಲ್ಲಿದ್ದರೂ ಸರ್ಕಾರ ಮಾತ್ರ ಕಾಟಾಚಾರಕ್ಕೆ ಪರಿಹಾರ ನೀಡುವ ಮೂಲಕ ರೈತರನ್ನು ನಿರ್ಲಕ್ಷಿಸುತ್ತಿದೆ ಎಂದು ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ತಾಲೂಕಿನ ಕರೋಶಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ಚಿಕ್ಕೋಡಿ ತಾಲೂಕನ್ನು ಸರ್ಕಾರ ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಿದೆ.

ಆದರೆ ಬರ ಘೋಷಣೆ ಮಾಡಿ ಹಲವು ದಿನಗಳು ಕಳೆದರೂ ಇದುವರೆಗೆ ಯಾವುದೇ ಬರ ಕಾಮಗಾರಿಗಳನ್ನು ಆರಂಭಿಸಿಲ್ಲ. ಇದರಿಂದ ರೈತರು ಹಾಗೂ ಗ್ರಾಮೀಣ ಭಾಗದ ಕೂಲಿ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದರು. ಬರದಿಂದ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಸರ್ಕಾರ ಪ್ರತಿ ರೈತನಿಗೆ ಕೇವಲ 2,500 ಬರ ಪರಿಹಾರ ನೀಡುವುದಾಗಿ ಹೇಳುತ್ತಿದೆ.

ಇಂದಿನ ಬೆಲೆ ಏರಿಕೆಯ ಸಂದರ್ಭದಲ್ಲಿ 2,500 ಹಣದಿಂದ ರೈತನಿಗೆ ಏನು ಪ್ರಯೋಜನ ಬ್ಯಾಂಕಿನಿಂದ 2,500 ಹಣವನ್ನು ವಿತ್ಡ್ರಾ ಮಾಡಿಕೊಂಡು ಮನೆಗೆ ಬರುವಷ್ಟರಲ್ಲಿ ಆ ಹಣ ಖರ್ಚಾಗಿ ಹೋಗುತ್ತದೆ. ಇಂತಹ ಅಲ್ಪ ಮೊತ್ತದ ಪರಿಹಾರ ನೀಡುವುದು ರೈತರ ಸಂಕಷ್ಟಕ್ಕೆ ಸ್ಪಂದಿಸಿದಂತಾಗುವುದಿಲ್ಲ ಎಂದು ವ್ಯಂಗ್ಯವಾಡಿದರು. ರೈತರು ವರ್ಷವೀಡೀ ದುಡಿದು ಬೆಳೆ ಬೆಳೆಯುತ್ತಾರೆ. ಆದರೆ ಮಳೆ ಕೈಕೊಟ್ಟಾಗ ಬೆಳೆ ನಷ್ಟವಾಗಿ ಸಾಲದ ಹೊರೆ ಹೆಚ್ಚಾಗುತ್ತದೆ. ಇಂತಹ ಸಂದರ್ಭದಲ್ಲಿ ಸರ್ಕಾರ ರೈತರ ನೆರವಿಗೆ ನಿಲ್ಲಬೇಕು.  


ಸುದ್ದಿ ಓದಿ