ಮುಂದಗೋಡ

ವಿ.ಎಸ್‌.ಪಾಟೀಲ ಮುಖಂಡತ್ವದಲ್ಲಿ ಕಾಂಗ್ರೆಸ್ ಸೇರ್ಪಡೆ

ವಿ.ಎಸ್‌.ಪಾಟೀಲ ಮುಖಂಡತ್ವದಲ್ಲಿ ಕಾಂಗ್ರೆಸ್ ಸೇರ್ಪಡೆ

ಲೋಕದರ್ಶನ ವರದಿ   

ಮುಂಡಗೋಡ:ತಾಲೂಕಿನ ಮೈನಳ್ಳಿ ಗ್ರಾಮದ ದುರ್ಗಾ ಕಾಲನಿಯ ಸುಮಾರು 50ಕ್ಕೂ ಹೆಚ್ಚು ಜನರು ಬಿಜೆಪಿ ಮತ್ತು ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರೆ​‍್ಡಯಾದರು. 

ಮಾಜಿ ಶಾಸಕ ವಿ.ಎಸ್‌.ಪಾಟೀಲ ಮುಖಂಡತ್ವದಲ್ಲಿ ನಡೆದ ಪಕ್ಷ ಸಂಘಟನಾ ಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರೆ​‍್ಡಯಾದರು. ಈ ವೇಳೆ ಮಾತನಾಡಿದ ಮಾಜಿ ಶಾಸಕ ವಿ.ಎಸ್‌.ಪಾಟೀಲ ಈ ಭಾಗದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ಆಗಬೇಕಿದ್ದು ಕಾಂಗ್ರೆಸ್ ಪಕ್ಷದಿಂದ ಮಾತ್ರ ಇದು ಸಾಧ್ಯ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಹೆಚ್ಚಿನ ಪ್ರಮಾಣದಲ್ಲಿ ಅಭಿವೃದ್ಧಿ ಕೆಲಸಗಳನ್ನು ಈ ಭಾಗದಲ್ಲಿ ಮಾಡಲಾಗುವುದು ಎಂದರು. 

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜ್ಞಾನದೇವ ಗುಡಿಯಾಳ, ಶ್ರೀನಿವಾಸ ಧಾತ್ರಿ, ಲಕ್ಷ್ಮಣ ಬನಸೋಡೆ, ಕೃಷ್ಣ ಹಿರೇಹಳ್ಳಿ, ರಾಜಶೇಖರ ಹಿರೇಮಠ, ಎಂ.ಎನ್‌.ದುಂಡಸಿ, ಪ್ರಶಾಂತ ಜೊಜೆ, ಮಹಮ್ಮದ್‌ಗೌಸ್ ಮಕಾಂದಾರ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು. 


ಸುದ್ದಿ ಓದಿ