ಮುಂಡಗೋಡಿನಲ್ಲಿ ರಾಜ್ಯ ಪಾಲರ್ ವಿರುದ್ದ ಕಾಂಗ್ರೆಸ್ ಪ್ರತಿಭಟನೆ!
ಮುಂಡಗೋಡ 21: ರಾಜ್ಯಪಾಲರಾದ ಥಾಮರ್ ಚಂದ್ ಗೆಹ್ಲೋಟ್ ಅವರು ರಾಜ್ಯದ ಜನಪ್ರಿಯ ಮುಖ್ಯಮಂತ್ರಿಗ ಸಿದ್ಧರಾಮಯ್ಯ ಅವರ ವಿರುದ್ಧ ಪ್ಯಾಸಿಕ್ಯೂಷನ್ ತನಿಖೆ ನೀಡಿರುವುದನ್ನು ಖಂಡಿಸಿ ಮುಂಡಗೋಡ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಪ್ರತಿಭಟನೆ ನಡೆಸಿ ತಹಸೀಲ್ದಾರ್ಮೂಲಕ ರಾಷ್ಟ್ರಪತಿಗಳಿಗೆ ಮನವಿ ಅರ್ಿಸಿದರು.
ಪಟ್ಟಣದ ಲೋಕೋಪಯೋಗಿ ಇಲಾಖೆಯ ಪರೀವೀಕ್ಷಣಾ ಮಂದಿರದಿಂದ ಪಾದಯಾತ್ರೆ ಮೂಲಕವಾಗಿ ಪಕ್ಷದ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ತಹಶೀಲ್ದಾರ್ ಕಚೇರಿಗೆ ತೆರಳಿ ಉಪತಹಶೀಲ್ದಾರ್ ಮೂಲಕವಾಗಿ ರಾಷ್ಟ್ರಪತಿಗಳಿಗೆ ರಾಜ್ಯಪಾಲರ ವಿರುದ್ಧ ಮನವಿಯನ್ನು ಸಲ್ಲಿಸಿದರು.
ಮಾಜಿ ಶಾಸಕರಾದ ವಿ.ಎಸ್.ಪಾಟೀಲ್, ಯುವ ನಾಯಕರು ಹಾಗೂ ಕೆ.ಪಿ.ಸಿ.ಸಿ ಸದಸ್ಯರಾದ ವಿವೇಕ್ ಹೆಬ್ಬಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಜ್ಞಾನೇಶ್ವರ ಗುಡಿಯಾಳ, ಪ್ರಧಾನ ಕಾರ್ಯದರ್ಶಿ ಗೋಪಾಲ ಪಾಟೀಲ್, ಪ್ರಮುಖರಾದ ಎಚ್.ಎಮ್.ನಾಯ್ಕ, ಕೃಷ್ಣ ಹಿರೇಹಳ್ಳಿ, ರವಿಗೌಡ ಪಾಟೀಲ್, ಗುಡ್ಡಪ್ಪ ಕಾತೂರ, ಕಿರಣ್ ಶೇರಖಾನೆ ಎನ್.ಎಮ್.ಧುಂಡಸಿ, ರಾಮಕೃಷ್ಣ ಮೂಲಿಮನಿ, ರಫೀಕ್ ಚಿನ್ನಳ್ಳಿ, ನಾಗಭೂಷಣ ಹಾವಣಗಿ,ಕೆ.ಸಿ.ಗಲಭಿ, ದೇವು ಪಾಟೀಲ್, ಲಕ್ಷ್ಮಣ ಬನಸೋಡೆ ಸೇರಿದಂತೆ ಪಕ್ಷದ ವಿವಿಧಸ್ಥರದ ಪದಾಧಿಕಾರಿಗಳು, ವಿವಿಧ ಸೇಲ್ ಅಧ್ಯಕ್ಷರು, ಘಟಕಾಧ್ಯಕ್ಷರು, ಬೂತ್ ಅಧ್ಯಕ್ಷರು ಉಪಸ್ಥಿತರಿದ್ದರು.