ಬಳ್ಳಾರಿ

ಕೇಂದ್ರ ಸರ್ಕಾರದ ನಡೆ ಖಂಡಿಸಿ ಕಾಂಗ್ರೆಸ್ ಹೋರಾಟ; ಜಿಲ್ಲಾ- ತಾಲೂಕು ಮಟ್ಟದಲ್ಲಿ ಹೋರಾಟಕ್ಕೆ ತೀರ್ಮಾನ

ಕೇಂದ್ರ ಸರ್ಕಾರದ ನಡೆ ಖಂಡಿಸಿ ಕಾಂಗ್ರೆಸ್ ಹೋರಾಟ; ಜಿಲ್ಲಾ-  ತಾಲೂಕು ಮಟ್ಟದಲ್ಲಿ ಹೋರಾಟಕ್ಕೆ ತೀರ್ಮಾನ
Congress protests against the central government's move; decision to protest at district and taluk l

             ಬಳ್ಳಾರಿ 14:  ನಗರದಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ನರೇಗಾ) ಸಂಬಂಧಿಸಿದಂತೆ ಕೇಂದ್ರ ಬಿಜೆಪಿ ಸರ್ಕಾರದ ನಡೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್, ಈ ಯೋಜನೆಯನ್ನು ದುರ್ಬಲಗೊಳಿಸುವ ಯಾವುದೇ ಪ್ರಯತ್ನವನ್ನು ಕಾಂಗ್ರೆಸ್ ಪಕ್ಷ ಸಹಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.ನಗರದಲ್ಲಿ ಬುಧವಾರ ನೆಡದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2006ರಲ್ಲಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಡವರ ಬದುಕಿಗೆ ಆಸರೆಯಾಗುವ ಉದ್ದೇಶದಿಂದ ನರೇಗಾ ಯೋಜನೆಯನ್ನು ಜಾರಿಗೆ ತಂದಿತ್ತು. ಆದರೆ ಈಗಿನ ಕೇಂದ್ರ ಬಿಜೆಪಿ ಸರ್ಕಾರ ಈ ಯೋಜನೆಯನ್ನು ಹಂತಹಂತವಾಗಿ ತೆಗೆದು ಹಾಕುವ ಸಿದ್ಧತೆ ನಡೆಸುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.

              ಗಾಂಧಿ ಹೆಸರು ತೆಗೆದು ಹಾಕಿದ್ದು ಬೇಸರದ ಸಂಗತಿನರೇಗಾ ಯೋಜನೆಯ ಹೆಸರಿನಿಂದ ಮಹಾತ್ಮ ಗಾಂಧಿ ಅವರ ಹೆಸರನ್ನು ತೆಗೆದು ಹಾಕಿರುವುದನ್ನು ಕಾಂಗ್ರೆಸ್ ಪಕ್ಷ ತೀವ್ರವಾಗಿ ಖಂಡಿಸುತ್ತದೆ ಎಂದರು.“ಜೀ ರಾಮ್ ಜಿ ಎಂದು ಹೆಸರು ಬದಲಾವಣೆ ಮಾಡಿರುವುದು ಕೇವಲ ರಾಜಕೀಯ ಉದ್ದೇಶದಿಂದಲೇ ಮಾಡಲಾಗಿದೆ. ಇದು ಮಹಾತ್ಮ ಗಾಂಧಿ ಅವರಿಗೆ ಮಾಡಿದ ಅಪಮಾನ. ಇದೇ ರೀತಿ ಮುಂದುವರಿದರೆ, ಮುಂದಿನ ದಿನಗಳಲ್ಲಿ ನೋಟುಗಳಿಂದಲೂ ಗಾಂಧಿ ಅವರ ಹೆಸರು ಹಾಗೂ ಚಿತ್ರವನ್ನು ತೆಗೆದು ಹಾಕುವ ಸಾಧ್ಯತೆ ಇದೆ” ಎಂದು ಆತಂಕ ವ್ಯಕ್ತಪಡಿಸಿದರು.

               "ಬಡವರಿಗೆ ನರೇಗಾ ಜೀವಾಳ"ನರೇಗಾ ಯೋಜನೆ ಗ್ರಾಮೀಣ ಬಡವರಿಗೆ ಉದ್ಯೋಗ, ಆಹಾರ ಭದ್ರತೆ ಮತ್ತು ಬದುಕಿನ ಗೌರವ ನೀಡಿರುವ ಯೋಜನೆ ಎಂದು ವಿವರಿಸಿದ ಸಚಿವರು, ಕೇಂದ್ರ ಸರ್ಕಾರದ ಈ ನಡೆ ಖಂಡನೀಯವಾಗಿದ್ದು, ಜನ ವಿರೋಧಿ ನೀತಿಯ ಪ್ರತಿಬಿಂಬವಾಗಿದೆ ಎಂದರು.ಈ ವಿಚಾರವಾಗಿ ಇಂದು ತುರ್ತು ರಾಜ್ಯ ಸಚಿವ ಸಂಪುಟ (ಕ್ಯಾಬಿನೆಟ್) ಸಭೆ ನಡೆಯಲಿದ್ದು, ನರೇಗಾ ಬಚಾವೋ ಸಂಗ್ರಾಮ ಕುರಿತು ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಸಿ ಹೋರಾಟದ ರೂಪರೇಷೆ ತೀರ್ಮಾನಿಸಲಾಗುತ್ತದೆ ಎಂದು ಜಿಲ್ಲಾ-  ತಾಲೂಕು ಮಟ್ಟದಲ್ಲಿ ಹೋರಾಟ "ಕಾಂಗ್ರೆಸ್ ಪಕ್ಷ ರಾಜ್ಯದ ಎಲ್ಲಾ ಜಿಲ್ಲೆಗಳು ಹಾಗೂ ತಾಲೂಕು ಮಟ್ಟದಲ್ಲಿ ಜನಪ್ರತಿನಿಧಿಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರೊಂದಿಗೆ ಸೇರಿ ಹೋರಾಟ ನಡೆಸಲಿದೆ. ನರೇಗಾ ಯೋಜನೆಯನ್ನು ರಕ್ಷಿಸಲು ಬೀದಿಗಿಳಿಯುವ ಅಗತ್ಯ ಬಂದರೂ ಹಿಂದೆ ಸರಿಯುವುದಿಲ್ಲ ಎಂದು ಸಚಿವ ಜಮೀರ್ ಸ್ಪಷ್ಟಪಡಿಸಿದರು.  

              "42 ಸಾವಿರಕ್ಕೂ ಹೆಚ್ಚು ಮನೆ ವಿತರಣೆ"ಸರ್ಕಾರದ ಜನಪರ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದ ಅವರು, ಇದೇ ತಿಂಗಳ 24ರಂದು ಹುಬ್ಬಳ್ಳಿಯಲ್ಲಿ 42 ಸಾವಿರಕ್ಕೂ ಅಧಿಕ ಮನೆಗಳನ್ನು ವಿತರಣೆ ಮಾಡಲಾಗುತ್ತದೆ ಎಂದು ಘೋಷಿಸಿದರು. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮನೆಗಳು ಸಿದ್ಧವಾಗಿದ್ದು, ಹಂತ ಹಂತವಾಗಿ ಫಲಾನುಭವಿಗಳಿಗೆ ಹಸ್ತಾಂತರಿಸಲಾಗುತ್ತ ಎಂದು ಸಿಎಂ-ಡಿಸಿಎಂ ಪ್ರತ್ಯೇಕ ಮಾತುಕತೆ ವಿಚಾರಕ್ಕೆ ಸ್ಪಷ್ಟನೆ"ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ನಡುವಿನ ಪ್ರತ್ಯೇಕ ಮಾತುಕತೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವ ಜಮೀರ್,“ಇದು ಸಹಜ ರಾಜಕೀಯ ಮಾತುಕತೆ. ಇದರಲ್ಲಿ ಯಾವುದೇ ಗೊಂದಲ ಅಥವಾ ಬದಲಾವಣೆ ಇಲ್ಲ. ನೋ ಕ್ರಾಂತಿ, ನೋ ಬ್ರಾಂತಿ. ನವೆಂಬರ್ ಇರಲಿ ಅಥವಾ ಸಂಕ್ರಾಂತಿ ಇರಲಿ ಹಿ ಐದು ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿ ಮುಂದುವರಿಯುತ್ತಾರೆ.

            ಮುಖ್ಯಮಂತ್ರಿ ಬದಲಾವಣೆ ಎಂಬ ಪ್ರಶ್ನೆಯೇ ಇಲ್ಲ” ಎಂದು ಸ್ಪಷ್ಟಪಡಿಸಿದರು."ಬಿಜೆಪಿ ಪಾದಯಾತ್ರೆ ಬಗ್ಗೆ ವ್ಯಂಗ್ಯ"ಬಿಜೆಪಿಯ ಪಾದಯಾತ್ರೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು,“ಅದು ಅವರ ಪಕ್ಷದ ವಿಚಾರ. ಅವರಿಗೆ ಏನು ಬೇಕಾದರೂ ಮಾಡಿಕೊಳ್ಳಲಿ. ಪಾದಯಾತ್ರೆಗೆ ಅನುಮತಿ ನೀಡುವ ವಿಚಾರವನ್ನು ಪೊಲೀಸರು ನೋಡಿಕೊಳ್ಳುತ್ತಾರೆ. ಬಿಜೆಪಿಯವರಿಗೆ ಮಾಡಲು ಕೆಲಸವಿಲ್ಲದಿದ್ದರೆ ಪಾದಯಾತ್ರೆ ಮಾಡಲಿ” ಎಂದು ವ್ಯಂಗ್ಯವಾಡಿದರು.ಈ ಸುದ್ದಿಗೊಷ್ಟಿಯಲ್ಲಿ, ಸಂಸದರಾದ ಈ ತುಕಾರಾಂ, ಶಾಸಕರಾದ, ಜೆ, ಎನ್, ಗಣೇಶ್, ಭಾರತ್ ರೆಡ್ಡಿ, ಗ್ಯಾರಂಟಿ ಯೋಜನೆ ಅಧ್ಯಕ್ಷ, ಚಿದಾನಂದಪ್ಪ, ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ, ಅಲ್ಲಮ ಪ್ರಶಾಂತ್,ಎ. ಮಾನಯ, ಮೇಯರ್ ಗಾದೆಪ್ಪ, , ಸೇರಿದಂತೆ ಕಾಂಗ್ರೆಸ್ ಮುಖಂಡರು ಇದ್ದರು. 


ಸುದ್ದಿ ಓದಿ