ಸರ್ಕಾರದ ವಿರುದ್ದ ಜನಕ್ರೋಶ ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಗೆಲವು: ಮಲಘಾಣ
ಮುಧೋಳ: ತಾಲೂಕಿನ ಬೆಳಗಲಿಯಲ್ಲಿ ಬಿಜೆಪಿಯ ದುರಾಡಳಿತಕ್ಕೆ ಬೇಸರತ್ತಾಗಿ ಕಾಂಗ್ರೆಸ್ಗೆ ಮತದಾರ ಪ್ರಭುಗಳು ಹೆಚ್ಚಿನ ಸ್ಥಾನ ಗೆಲ್ಲುವಲ್ಲಿ ಸಹಕರ ನೀಡಿದ್ದಾರೆ ಜೊತೆಗೆ ಪಟ್ಟಣ ಪಂಚಾಯತಿಯ ಅಧಿಕಾರದ ಚುಕ್ಕಾಣೆ ಹಿಡಿಯಲು ಮುಂದಾಗಿದ್ದು ಅಲ್ಲದೆ ಗ್ರಾ.ಪಂಯ ಉಪಚುನಾವಣೆಯಲ್ಲಿ ನಾಗರಾಳದಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗೆ ಗೆಲವು ಲಭಿಸಿದ್ದು ಮುಖ್ಯವಾಗಿ ರಾಜ್ಯದಲ್ಲಿ ಎಲ್ಲೆಡೆ ಕಾಂಗ್ರೆಸ್ ಪಕ್ಷ ಜಯ ಸಾಧಿಸಿದ್ದು ಮುಂಬರುವ ದಿನಮಾನಗಳಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರ ಹಿಡಿಯುವ ಮುನ್ಸೂಚನೆ ನೀಡಿದೆ. ಸದ್ಯ ರಾಜ್ಯದಲ್ಲಿ ಬಿಜೆಪಿಯ ಸರ್ಕಾರದ ವಿರುದ್ಧ ಜನಾಕ್ರೋಶ ಉಂಟಾಗಿದ್ದುದುರ ಪರಿಣಾಮ ಕಾಂಗ್ರೆಸ್ ಗೆಲುವಿಗೆ ಕಾರಣವಾಗಿದೆ ಎಂದು ಮಾಜಿ ಜಿ.ಪಂ ಅಧ್ಯಕ್ಷ ಶಿವಕುಮಾರ ಮಲಘಾಣ ಹೇಳಿದರು.
ನಗರದಲ್ಲಿ ಕಾಂಗ್ರೆಸ್ ಪಕ್ಷ ಬೆಳಗಲಿ ಹಾಗೂ ನಾಗರಾಳದಲ್ಲಿ ಗೆಲವು ಸಾಧಿಸಿದ ನಂತರ ಪತ್ರಿಕೆಯ ಜೊತೆಗೆ ಅವರು ಮಾತನಾಡಿದರು. ರಾಜ್ಯದಲ್ಲಿ ಬಿಜೆಪಿಯ ದುರಾಡಳಿತಕ್ಕೆ ಜನ ಬೇಸತ್ತು ಪರ್ಯಾಯ ವ್ಯವಸ್ಥೆಯನ್ನು ಕಂಡುಕೊಳ್ಳಲು ಎಲ್ಲೆಡೆ ಕಾಂಗ್ರೆಸ್ ಗೆಲುವಿಗೆ ಕಾರಣವಾಗಿದೆ ಎಂದು ಹೇಳಿದರು.