ಬೈಲಹೊಂಗಲ

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಮಹಿಳಾ ಘಟಕ ಪ್ರತಿಭಟನೆ

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಮಹಿಳಾ ಘಟಕ ಪ್ರತಿಭಟನೆ

ಬೈಲಹೊಂಗಲ 14: ತಾಲೂಕಿನ ಆನಿಗೊಳ ರಸ್ತೆಯಲ್ಲಿರುವ ಪೆಟ್ರೋಲ್ ಬಂಕ್ ಮುಂಭಾಗದಲ್ಲಿ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದಿಂದ  ಪೆಟ್ರೋಲ್, ಡೀಸೆಲ್, ಹಾಗೂ ಅಗತ್ಯವಸ್ತುಗಳ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ ಸೋಮವಾರ ಹಮ್ಮಿಕೊಳ್ಳಲಾಗಿತ್ತು. 

ಬೆಳಗಾವಿ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷ ಶೋಭಾ ಕುರಬೇಟ್ ಮಾತನಾಡಿ, ಕೋರೊನ ದಂತ ಸಂದಿಗ್ಧ ಸ್ಥಿತಿಯಲ್ಲಿ ಸಾರ್ವಜನಿಕರಿಗೆ ಸಹಾಯ ಮಾಡುವ ಬದಲಾಗಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವುದರ ಮೂಲಕ ಗಾಯದ ಮೇಲೆ ಬರೆ ಹಾಕುವ ಕೆಲಸಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ  ಕೈ ಹಾಕಿವೆ ಎಂದರು. 

ಪೆಟ್ರೋಲ್, ಡೀಸೆಲ್, ಗ್ಯಾಸ್, ಅಡುಗೆ ಎಣ್ಣೆ, ವಿದ್ಯುತ್ ಬಿಲ್ ಹೆಚ್ಚಳ ಹೀಗೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವುದನ್ನು ಬಿಟ್ಟು, ರಾಜ್ಯಕ್ಕೆ ಹತ್ತು ಹಲವು ಯೋಜನೆ ( ಭಾಗ್ಯ) ಗಳನ್ನು ನೀಡಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹಾಗೆ ಜನಪರ ಯೋಜನೆಗಳನ್ನು ಜಾರಿಗೊಳಿಸಬೇಕು. ಕೊರೊಂದಂತಹ ಸಂದಿಗ್ಧ ಪರಿಸ್ಥಿತಿಯಲ್ಲಿಯೂ ಕೂಡ ದೆಹಲಿ ಸಿಎಂ ಕೇಜ್ರಿವಾಲರವರು ದೆಹಲಿ ರಾಜ್ಯದಲ್ಲಿ ಜಾರಿಗೊಳಿಸಿದ ಜನಪರ ಯೋಜನೆಗಳನ್ನು ನಮ್ಮ ಕರ್ನಾಟಕ ರಾಜ್ಯದಲ್ಲಿಯೂ ಜಾರಿಗೊಸಬೇಕೆಂದು ಮುಖ್ಯಮಂತ್ರಿ ಯಡಿಯೂರ​‍್ಪನವರಿಗೆ ಆಗ್ರಹಿಸಿದರು. 

ಕಮಲವ್ವ ಸಂಬರಗಿ, ಗಂಗವ್ವ ಉಪ್ಪಾರ್, ದೇವಕ್ಕ ತಳವಾರ್, ನಾಗವ್ವ ತಳವಾರ್, ಶಾಂತವ್ವ ಹಲಕಿ, ಮಹಾದೇವಿ ಬೊರಣಕಿ. 

ಚೆನ್ನವ್ವ ಬೈಲವಾಡ್, ಬಸವ್ವ ಕಾಳಗಗ್ಗರಿ, ಬಸಲಿಂಗವ್ವ ಸಂಬಾಳ್, ಪಾರವ್ವ ಮರಿಕೆಂಚನವರ್, ರತ್ನವ್ವ ಮರಕುಂಬಿ ಮತ್ತಿತರರು ಉಪಸ್ಥಿತರಿದ್ದರು. 


ಸುದ್ದಿ ಓದಿ