ಹುಕ್ಕೇರಿ ಕುಟುಂಬಕ್ಕೆ ಸಚಿವ ಸ್ಥಾನಕ್ಕೆ ಒತ್ತಾಯಿಸಿ ಚಿಕ್ಕೋಡಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ
Congress workers stage massive protest in Chikkodi demanding ministerial berth for Hukkeri family
ಚಿಕ್ಕೋಡಿ 01 : ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರಕಾಶ್ ಹುಕ್ಕೇರಿ ಅಥವಾ ಶಾಸಕ ಗಣೇಶ್ ಹುಕ್ಕೇರಿ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಚಿಕ್ಕೋಡಿ ನಗರದಲ್ಲಿ ಭಾರಿ ಪ್ರತಿಭಟನೆ ೂಳ್ಪ್ಠ್ತ್ಘ್ದು.ಸ್ತ್ಲೂ್ಯೂಳ್ತಹ್ಠಿಳ್ಲ್ಚಷ್ಣ ಕ್ಷೇತ್ರದ ವಿವಿಧ ಗ್ರಾಮಗಳಿಂದ ಆಗಮಿಸಿದ ಕಾರ್ಯಕರ್ತರು ಪಟ್ಟಣದ ಪ್ರವಾಸಿ ಮಂದಿರದಿಂದ ಬಸವ ವೃತ್ತದವರೆಗೆ ಮೆರವಣಿಗೆ ನಡೆಸಿ, ಮಾನವ ಸರಪಳಿ ನಿರ್ಮಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ, ಸ್ತ್ಲೂ್ಯೂಳ್ತಹ್ಠಿಳ್ಲ್ಚಷ್ಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಕುಲಕರ್ಣಿ ಹಾಗೂ ಗ್ರಾಮೀಣ ಅಧ್ಯಕ್ಷ ಅನಿಲ್ ಪಾಟೀಲ್ ಮುಖಾಂತರ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಪ್ರಕಾಶ್ ಹುಕ್ಕೇರಿ ಅವರು ಕಳೆದ ನಾಲ್ಕು ದಶಕಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠೆಯಿಂದ ಸೇವೆ ಸಲ್ಲಿಸಿದ್ದು, 2014ರಲ್ಲಿ ಹೈಕಮಾಂಡ್ ಸೂಚನೆಯ ಮೇರೆಗೆ ಸಚಿವ ಸ್ಥಾನ ತ್ಯಜಿಸಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದರು. ಇದೇ ವೇಳೆ, ಆಪರೇಷನ್ ಕಮಲ ಸಂದರ್ಭದಲ್ಲಿ ಶಾಸಕ ಗಣೇಶ್ ಹುಕ್ಕೇರಿ ಅವರಿಗೆ ಬಂದ ಸಚಿವ ಸ್ಥಾನ ಆಮಿಷವನ್ನೂ ತಿರಸ್ಕರಿಸಿ ಕಾಂಗ್ರೆಸ್ ಪಕ್ಷದೊಂದಿಗೇ ಉಳಿದಿರುವುದು ಅವರ ಕುಟುಂಬದ ನಿಷ್ಠೆಗೆ ಸಾಕ್ಷಿಯಾಗಿದೆ ಎಂದು ಕಾರ್ಯಕರ್ತರು ಅಭಿಪ್ರಾಯಪಟ್ಟರು. ಪಕ್ಷದ ಹಿತಕ್ಕಾಗಿ ಸಚಿವ ಸ್ಥಾನವನ್ನು ಬಿಟ್ಟುಕೊಟ್ಟ ಹುಕ್ಕೇರಿ ಕುಟುಂಬಕ್ಕೆ 2014ರಿಂದಲೂ ಸಚಿವ ಸ್ಥಾನ ದೊರಕಿಲ್ಲ.
ಆದ್ದರಿಂದ, ಈ ಬಾರಿ ಸಚಿವ ಸಂಪುಟ ರಚನೆಯಲ್ಲಿ ಪ್ರಕಾಶ್ ಹುಕ್ಕೇರಿ ಅಥವಾ ಗಣೇಶ್ ಹುಕ್ಕೇರಿ ಅವರಿಗೆ ಅವಕಾಶ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ರವಿ ಮಿರ್ಜೆ, ಸಾಬೀರ ಜಮಾದಾರ, ನರೇಂದ್ರ ನೇರ್ಲಿಕರ ಸೇರಿದಂತೆ ಹಲವರು ಮಾತನಾಡಿದರು. ಅನಿಲ್ ಮಾನೆ, ಪ್ರಭಾಕರ ಇ.ಕೋರೆ, ಶ್ಯಾಮ್ ರೇವಡೆ, ಮುದ್ದಸರ ಜಮಾದಾರ, ರಂಜಿತ್ ಶಿರಸೇಟ್, ಎಚ್.ಎಸ್. ನಸಲಾಪುರೆ, ರಮೇಶ ಪಾಟೀಲ, ಅಣ್ಣಾಸಾಹೇಬ ಹವಲೆ, ವಿನೋದ ಕಾಗೆ, ಮಲ್ಲಿರ್ಜುನ ಪಾಟೀಲ ಸೇರಿದಂತೆ ಸಾವಿರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 