ಇಂದು ಹಿರೇಮಲ್ಲಾಪುರ ಗ್ರಾಮದಲ್ಲಿ ನೂತನ ಬಸವೇಶ್ವರ ದೇವಸ್ಥಾನ ಲೋಕಾರೆ್ಣ ಮೂರ್ತಿ ಪ್ರಾಣ ಪ್ರತಿಷ್ಠಾಪನೆ
ಲಕ್ಷ್ಮೇಶ್ವರ 11: ತಾಲೂಕಿನ ಹಿರೇಮಲ್ಲಾಪುರ ಗ್ರಾಮದಲ್ಲಿ ಇಂದು ಶುಕ್ರವಾರ ನೂತನವಾಗಿ ನಿರ್ಮಾಣಗೊಂಡ ಬಸವೇಶ್ವರ ದೇವಸ್ಥಾನ ಹಾಗೂ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮವು ವೈಭವದೊಂದಿಗೆ ಜರುಗಲಿದೆಮೂರ್ತಿ ಪ್ರತಿಷ್ಠಾಪನೆಯ ಕಾರ್ಯಕ್ರಮದಲ್ಲಿ ವಿವಿಧ ಮಠಗಳ ಪೂಜ್ಯರು ಶಾಸಕರು ಮಾಜಿ ಶಾಸಕರು ಸೇರಿದಂತೆ ಸುತ್ತಮುತ್ತಲಿನ ಗ್ರಾಮದ ಗುರುಹಿರಿಯರು ಪಾಲ್ಗೊಳ್ಳಲಿದ್ದು ಬಸವೇಶ್ವರ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಪ್ರಯುಕ್ತ ಗ್ರಾಮದಲ್ಲಿ ಪ್ರಥಮ ಬಾರಿಗೆ ಬಾರಿ ಬಾರಿ ಸವಾಲ್ ಜವಾಬು ಭಜನಾ ಸ್ಪರ್ಧೆ ನಡೆಯಲಿದ್ದು ಈ ಒಂದು ಮಹತ್ತರವಾದ ಕಾರ್ಯಕ್ರಮಕ್ಕೆ ಸುತ್ತಮುತ್ತಲಿನ ಗ್ರಾಮದವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ಬಸವೇಶ್ವರ ದೇವರ ಕೃಪೆಗೆ ಪಾತ್ರರಾಗಬೇಕು ಎಂದು ಬಸವೇಶ್ವರ ದೇವಸ್ಥಾನ ಕಮಿಟಿ ಅವರು ಪ್ರಕಟಣೆ ಮೂಲಕ ತಿಳಿಸಿದ್ದಾರೆ