ಪರಸ್ಪರ ಸಮ್ಮತಿಯ ಲೈಂಗಿಕ ಕ್ರಿಯೆ ಅಪರಾಧವಲ್ಲ: ಹೈಕೋರ್ಟ್‌

ಪರಸ್ಪರ ಸಮ್ಮತಿಯ ಲೈಂಗಿಕ ಕ್ರಿಯೆ ಅಪರಾಧವಲ್ಲ: ಹೈಕೋರ್ಟ್‌

ಪರಸ್ಪರ ಸಮ್ಮತಿಯ ಲೈಂಗಿಕ ಕ್ರಿಯೆ ಅಪರಾಧವಲ್ಲ: ಹೈಕೋರ್ಟ್‌  

ಬೆಂಗಳೂರು: ಪರಸ್ಪರ ಸಮ್ಮತಿಯ ಲೈಂಗಿಕ ಕ್ರಿಯೆ ಅಪರಾಧವಲ್ಲ ಎಂದು ಸಾರಿರುವ ಹೈಕೋರ್ಟ, ಡೇಟಿಂಗ್ ಆ್ಯಪ್ ಮೂಲಕ ಪರಿಚಿತರಾಗಿ ಆತ್ಮೀಯ  ಸಂಬಂಧ ಬೆಳೆಸಿಕೊಂಡ ನಂತರ ಓಯೋ ರೂಮ್ ನಲ್ಲಿ ಪರಸ್ಪರ ಒಪ್ಪಿಗೆ ಮೇಲೆ ಲೈಂಗಿಕ ಕ್ರಿಯೆ ನಡೆಸಿದ ಪ್ರಕರಣದಲ್ಲಿ ಯುವಕನೋರ್ವನ ವಿರುದ್ಧ ಮಹಿಳೆ ದಾಖಲಿಸಿದ್ದ ಅತ್ಯಾಚಾರ ಆರೋಪ ಪ್ರಕರಣವನ್ನು ರದ್ದುಪಡಿಸಿದೆ.  

ಪರಸ್ಪರ ಇಚ್ಛೆಯಿಂದ ಹುಟ್ಟಿದ ಸಂಬಂಧ, ಅದು ನಿರಾಶೆಯಲ್ಲಿ ಸ್ಥಾಪಿತವಾದರೂ ಸಹ, ಸ್ಪಷ್ಟ ಪ್ರಕರಣಗಳನ್ನು ಹೊರತುಪಡಿಸಿ, ಕ್ರಿಮಿನಲ್ ಕಾನೂನಿನಡಿಯಲ್ಲಿ ಅಪರಾಧವಾಗಿ ಪರಿವರ್ತಿಸಲು ಸಾಧ್ಯವಿಲ್ಲ ಎಂದೂ ನ್ಯಾಯಾಲಯ ಹೇಳಿದೆ.  

ಅತ್ಯಾಚಾರ ಆರೋಪದ ಮೇಲೆ ಮಹಿಳೆಯೊಬ್ಬರು ನೀಡಿದ ದೂರು ಆಧರಿಸಿ ತಮ್ಮ ವಿರುದ್ಧ ಕೋನಣಕುಂಟೆ ಪೊಲೀಸ್ ಠಾಣೆಯಲ್ಲಿ ದಾಲಿಸಿರುವ ಎಫ್‌ಐಆರ್ ರದ್ದು ಪಡಿಸುವಂತೆ ಕೋರಿ ಬನ್ನೇರುಘಟ್ಟ ರಸ್ತೆಯ ನಿವಾಸಿ ಸಂಪ್ರಾಸ್ ಆ್ಯಂಥೋನಿ ಎಂಬ ಯುವಕ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ.  

ಪ್ರಕರಣದಲ್ಲಿ ಮಹಿಳೆ ದಾಖಲಿಸಿದ್ದ ದೂರು, ತನಿಖೆ ನಡೆಸಿ ಪೊಲೀಸರು ಸಲ್ಲಿಸಿರುವ ಆರೋಪಪಟ್ಟಿ ಮತ್ತು ದೂರುದಾರರು ಮತ್ತು ಆರೋಪಿಗಳ ನಡುವಿನ ಸಂದೇಶದ (ಚಾಟ್) ವಿವರಗಳನ್ನು ಉಲ್ಲೇಖೀಸಿದ ನ್ಯಾಯಪೀಠ, ಆರೋಪಿ ಮತ್ತು ದೂರುದಾರೆಯ ನಡುವಿನ ಸಂದೇಶಗಳು ಉತ್ತಮ ಅಭಿರುಚಿಯಿಂದ ಕೂಡಿದ್ದಲ್ಲ. ಅವರ ನಡುವಿನ ಎಲ್ಲ ಕೃತ್ಯಗಳು ಸಮ್ಮತಿಯಿಂದ ಕೂಡಿವೆ ಎಂಬುದನ್ನು ಮಾತ್ರ ಸೂಚಿಸುತ್ತದೆ. ಅರ್ಜಿದಾರನವಿರುದ್ಧ ವಿಚಾರಣೆಗೆ ಅವಕಾಶ ನೀಡಿದರೆ ಕಾನೂನು ಪ್ರಕ್ರಿಯೆ ದುರು ಪಯೋಗವಾಗುತ್ತದೆ ಎಂದು ಆದೇಶದಲ್ಲಿ ತಿಳಿಸಿದೆ.  

ದೂರುದಾರೆ ಮತ್ತು ಅರ್ಜಿದಾರರು ಡೇಟಿಂಗ್ ಆ್ಯಪ್ ಬಂಬಲ್ ಮುಖಾಂತರ ಪರಿಚಿತರಾಗಿದ್ದರು. ನಂತರ ವರ್ಷಗಳ ಸಂಪರ್ಕದಲ್ಲಿದ್ದು, ಇನ್ಸ್ಟಾಗ್ರಾಮ್ ಮೂಲಕ ಪೋಟೋ ಹಾಗೂ ಸಂದೇಶಗಳನ್ನು ಪರಸ್ಪರ ವಿನಿಯಮ ಮಾಡಿಕೊಂಡಿದ್ದಾರೆ. 2024ರ ಆ.11ರಂದು ಭೇಟಿಯಾಗಲು ನಿರ್ಧರಿಸಿದ್ದರು. ಅದರಂತೆ ಓಯೋ ರೂಮ್ಗೆ ಇಬ್ಬರು ಹೋಗಿದ್ದಾರೆ. ಅಲ್ಲಿ ಇಬ್ಬರು ಲೈಂಗಿಕ ಕ್ರಿಯೆ ನಡೆಸಿದ್ದಾರೆ. ತನ್ನ ಇಚ್ಛೆಗೆ ವಿರುದ್ಧವಾಗಿ ಲೈಂಗಿಕ ಕ್ರಿಯೆ ನಡೆದಿದೆ ಎಂದು ಮಹಿಳೆ ಅ.13ರಂದು ದೂರು ನೀಡಿದ್ದಳು. ಅದರಂತೆ ಪ್ರಕರಣ ದಾಖಲಾಗಿತ್ತು. ಅದನ್ನು ರದ್ದುಪಡಿಸುವಂತೆ ಆ್ಯಂಥೋನಿ ಹೈಕೋರ್ಟ್ಗ ಅರ್ಜಿ ಸಲ್ಲಿಸಿದ್ದರು. 


ಸುದ್ದಿ ಓದಿ