ಹಿಂಡಲಗಾ ಜೈಲಿನಿಂದಲೇ ಈಶ್ವರಪ್ಪ ಹತ್ಯೆಗೆ ಕೈದಿಯಿಂದ ಸಂಚು : ಮಹಾ ಪೊಲೀಸರ ತನಿಖೆಯಲ್ಲಿ ಬಯಲಾಯಿತು ಸ್ಪೋಟಕ ಸತ್ಯ

ಹಿಂಡಲಗಾ ಜೈಲಿನಿಂದಲೇ ಈಶ್ವರಪ್ಪ ಹತ್ಯೆಗೆ ಕೈದಿಯಿಂದ ಸಂಚು : ಮಹಾ ಪೊಲೀಸರ ತನಿಖೆಯಲ್ಲಿ ಬಯಲಾಯಿತು ಸ್ಪೋಟಕ ಸತ್ಯ

ಬೆಳಗಾವಿ : ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಹಣ ನೀಡುವಂತೆ ಹಿಂಡಲಗಾ ಜೈಲಿನಿಂದ ಬೆದರಿಕೆ ಕರೆ ಮಾಡಿದ್ದ ಜಯೇಶ್ ಪೂಜಾರಿಯನ್ನು ಮಹಾರಾಷ್ಟ್ರ ಪೊಲೀಸರು ಇತ್ತೀಚಿಗೆ ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದು, ಆತ ಇದೀಗ ಮಾಜಿ ಸಚಿ ಕೆ.ಎಸ್. ಈಶ್ವರಪ್ಪ ಅವರ ಹತ್ಯೆಗೂ ಸಂಚು ರೂಪಿಸಿದ್ದ ಎನ್ನುವ ಸ್ಪೋಟಕ ಮಾಹಿತಿ ಬಾಯಿಬಿಟ್ಟಿದ್ದಾನೆ ಎನ್ನಲಾಗಿದೆ.

  ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರಿಗೆ ಬೆಳಗಾವಿಯ ಹಿಂಡಲಗಾ ಜೈಲಿನಿಂದಲೇ 100 ಕೋಟಿ ರು. ಸುಲಿಗೆ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣದಲ್ಲಿ ಮಹಾರಾಷ್ಟ್ರ ಪೊಲೀಸರಿಂದ ವಿಚಾರಣೆಗೆ ಒಳಪಟ್ಟಿರುವ ಕುಖ್ಯಾತ ಭೂಗತ ಪಾತಕಿ ಜಯೇಶ್‌ ಪೂಜಾರಿ ಅಲಿಯಾಸ್‌ ಶಾಹೀರ್‌ ಶಾಕೀರ್‌ (35) ಬಿಜೆಪಿಯ ಹಿರಿಯ ನಾಯಕ, ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರ ಹತ್ಯೆಗೂ ಸಂಚು ರೂಪಿಸಿದ್ದ ಎಂಬ ಸ್ಫೋಟಕ ವಿಷಯ ಬೆಳಕಿಗೆ ಬಂದಿದೆ.

   ಅಲ್ಪಸಂಖ್ಯಾತರ ವಿರುದ್ಧ ಈಶ್ವರಪ್ಪ ಬಹಿರಂಗವಾಗಿಯೇ ನೀಡುತ್ತಿದ್ದ ಹೇಳಿಕೆಗಳಿಂದ ಆಕ್ರೋಶಗೊಂಡಿದ್ದ ನಿಷೇಧಿತ ಪಿಎಫ್‌ಐ ಕಾರ್ಯಕರ್ತನೂ ಆಗಿರುವ ಜಯೇಶ್‌, ಈಶ್ವರಪ್ಪ ಹತ್ಯೆಗೆ ತನ್ನ ಬೆಂಬಲಿಗರಿಗೆ ಸುಪಾರಿ ನೀಡಿದ್ದ ಎಂದು ತಿಳಿದು ಬಂದಿದೆ. ವಿವಿಧ ಪ್ರಕರಣಗಳಲ್ಲಿ ಜಯೇಶ್‌ನನ್ನು ವಿಚಾರಣೆಗೆ ಒಳಪಡಿಸಿರುವ ನಾಗಪುರ ಪೊಲೀಸರಿಗೆ ಈಶ್ವರಪ್ಪ ಅವರ ಹತ್ಯೆಯ ಮಾಹಿತಿ ಮಾಹಿತಿ ಸಿಕ್ಕಿದ್ದು, ಅವರು ಜಯೇಶ್‌ನ ಎಲ್ಲಾ ದುಷ್ಕೃತ್ಯಗಳ ಕುರಿತು ಎನ್‌ಐಎಗೆ ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಎನ್‌ಐಎನ ತಂಡವೊಂದು ನಾಗಪುರಕ್ಕೆ ಆಗಮಿಸಿದ್ದು, ಮಾಹಿತಿ ಕಲೆ ಹಾಕುತ್ತಿದೆ. ಜೊತೆಗೆ ಅದು ಈಶ್ವರಪ್ಪ ಹತ್ಯೆ ಸಂಚಿನ ಕುರಿತ ಪ್ರಕರಣಗಳನ್ನು ತನಿಖೆ ನಡೆಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

     ಇದಕ್ಕೆಂದೇ ಆತನಿಗೆ ಮಾಸಿಕ 4 ಲಕ್ಷ ರು. ಹಣ ಪಾವತಿ ಮಾಡುತ್ತಿದೆ. ಈ ಹಣ ಬಳಸಿಕೊಂಡು ಜಯೇಶ್‌ ಮತ್ತು ಆತನ ಸಂಗಡಿಗರು ಹಿಂಡಲಗಾ ಜೈಲಿನಲ್ಲಿ ಎಲೆಕ್ಟ್ರಾನಿಕ್‌ ಉಪಕರಣಗಳ ಖರೀದಿ, ಬಳಕೆ, ಮಾಹಿತಿ ಹಂಚಿಕೆ, ವಿಡಿಯೋ ಚಾಟ್‌ ಮತ್ತಿತರೆ ಕಾನೂನು ಬಾಹಿರ ಚಟುವಟಿಕೆ ನಡೆಸುತ್ತಿದ್ದಾರೆ. ಜೊತೆಗೆ ಜೈಲಿನಿಂದ ಹೊರಗೆ ಇರುವ ತಮ್ಮ ಬೆಂಬಲಿಗರ ಮೂಲಕವೂ ದುಷ್ಕೃತ್ಯಗಳನ್ನು ನಡೆಸುತ್ತಿದ್ದಾರೆ ಎಂಬ ವಿಷಯ ಪೊಲೀಸರ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಆಂಗ್ಲ ಪತ್ರಿಕೆಯೊಂದು ವರದಿ ಮಾಡಿದೆ.

ಸುದ್ದಿ ಓದಿ