ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ
ಗದಗ 22: ಮುಂಡರಗಿ ತಾಲೂಕು ಕದಾಂಪೂರ ಗ್ರಾಮದಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಜರುಗಿತು. ಗ್ರಾಮ ಪಂಚಾಯತ್ ಅಧ್ಯಕ್ಷರಾದ ಹುಲಿಗೆಮ್ಮ ಪಾಟೀಲ, ಉಪಾಧ್ಯಕ್ಷರಾದ ರೇಣುಕಾ ಲಮಾಣಿ, ಸಮುದಾಯದ ಮುಖಂಡರು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು, ಗ್ರಾಮ ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿದರು.