ಮಹಾಲಿಂಗಪುರ ಪುರಸಭೆಯಲ್ಲಿ ಅರ್ಥಪೂರ್ಣವಾಗಿ ಸಂವಿಧಾನ ದಿನಾಚರಣೆ
ಲೋಕದರ್ಶನ ವರದಿ
ಮಹಾಲಿಂಗಪುರ 26: ಭಾರತದ ಸಂವಿಧಾನ ಅಂಗೀಕಾರಗೊಂಡ ನವೆಂಬರ್ 26ರ ಸ್ಮರಣಾರ್ಥ ಮಹಾಲಿಂಗಪುರ ಪುರಸಭೆಯಲ್ಲಿ ರಾಷ್ಟ್ರೀಯ ಸಂವಿಧಾನ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಪುರಸಭೆಯ ಮುಖ್ಯಾಧಿಕಾರಿ ನಾಮದೇವ ಲಮಾಣಿ ಅವರ ನೇತೃತ್ವದಲ್ಲಿ ಪುರಸಭೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಂವಿಧಾನದ ಪೀಠಿಕೆಯನ್ನು ಸಾಮೂಹಿಕವಾಗಿ ಪಠಿಸುವ ಮೂಲಕ ಸಂವಿಧಾನದ ಆಶಯಗಳನ್ನು ಪಾಲಿಸುವ ಹಾಗೂ ಅದರ ಮೌಲ್ಯಗಳನ್ನು ಎತ್ತಿಹಿಡಿಯುವ ಪ್ರತಿಜ್ಞೆ ಸ್ವೀಕರಿಸಿದರು.
ಭಾರತದ ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ, ಸ್ವಾತಂತ್ರ್ಯ, ನ್ಯಾಯ ಹಾಗೂ ಭ್ರಾತೃತ್ವದ ಮೌಲ್ಯಗಳನ್ನು ಪ್ರತಿಪಾದಿಸುತ್ತದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನದ ಮಹತ್ವವನ್ನು ಅರಿತು, ಪ್ರತಿಯೊಬ್ಬರೂ ತಮ್ಮ ಹಕ್ಕುಗಳ ಜೊತೆಗೆ ಕರ್ತವ್ಯಗಳನ್ನೂ ಜವಾಬ್ದಾರಿಯಿಂದ ನಿರ್ವಹಿಸಬೇಕು ಎಂಬ ಸಂದೇಶವನ್ನು ಈ ಆಚರಣೆ ಸಾರಿತು.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಾಧಿಕಾರಿ ನಾಮದೇವ ಲಮಾಣಿ ಅವರು, ಸಂವಿಧಾನವು ದೇಶದ ಆಡಳಿತ ವ್ಯವಸ್ಥೆಗೆ ಭದ್ರ ಬುನಾದಿಯಾಗಿದ್ದು, ಪ್ರತಿಯೊಬ್ಬ ನಾಗರಿಕನ ಹಕ್ಕುಗಳು ಹಾಗೂ ಕರ್ತವ್ಯಗಳಿಗೆ ದಾರೀದೀಪವಾಗಿದೆ. ಸಂವಿಧಾನದ ಆಶಯಗಳನ್ನು ಕೇವಲ ಆಚರಣೆಗೆ ಸೀಮಿತಗೊಳಿಸದೆ,
ದೈನಂದಿನ ಜೀವನದಲ್ಲಿಯೂ ಅಳವಡಿಸಿಕೊಳ್ಳಬೇಕು. ಸಾರ್ವಜನಿಕ ಸೇವೆಯಲ್ಲಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ಸಂವಿಧಾನದ ಮೌಲ್ಯಗಳಿಗೆ ಬದ್ಧರಾಗಿ ಸಾರ್ವಜನಿಕರಿಗೆ ಪ್ರಾಮಾಣಿಕತೆ ಹಾಗೂ ನಿಷ್ಠೆಯಿಂದ ಸೇವೆ ಸಲ್ಲಿಸಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಪುರಸಭೆಯ ಸಿಬ್ಬಂದಿಗಳಾದ ಮನೋಜ್ ಹಂಚಾಟೆ, ಅರುಣ ಸಣ್ಣಕ್ಕಿ, ಉಮೇಶ ರೂಗೆ, ಪ್ರಕಾಶ ಕಟಾಂವಿ,
ಕಾಂತು ಹಡಪದ, ಸೈಯದ್ ಅಲಿ ಮುಲ್ಲಾ, ಎಂ.ಕೆ. ದಳವಾಯಿ, ಮಹಾಂತೇಶ ಬಂಡಿವಡ್ಡರ, ಸುನೀಲ ಬಬಲೇಶ್ವರ, ಮಹಾಲಿಂಗ ಗಸ್ತಿ, ಚನ್ನಮ್ಮ ಕಮತಗಿ, ಮಂಜುಳಾ ಬಂಡಿವಡ್ಡರ, ಲಕ್ಷ್ಮೀ ಪರೀಟ, ರಾಜೇಶ್ವರಿ ಸೋರಗಾಂವಿ, ತಿಪ್ಪಣ್ಣ ಬಂಡಿವಡ್ಡರ, ಬಸವ ಬಂಡಿವಡ್ಡರ ಸೇರಿದಂತೆ ಪುರಸಭೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.