ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ಸಂವಿಧಾನ ದಿನ ಆಚರಣೆ
ಬೈಲಹೊಂಗಲ 26 : ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಸಂವಿಧಾನ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು. ಸಾಮೂಹಿಕವಾಗಿ ಭಾರತೀಯ ಸಂವಿಧಾನದ ಪೂರ್ವ ಪೀಠಿಕೆಯನ್ನು ವಾಚಿಸುವುದರ ಮೂಲಕ ದೈಹಿಕ ಶಿಕ್ಷಣ ಶಿಕ್ಷಕರಾದ ಪ್ರವೀಣ ಗುರುನಗೌಡರ ಎಲ್ಲರಿಗೂ ಸಂವಿಧಾನದ ಮೌಲ್ಯಗಳಿಗೆ ಬದ್ಧರಾಗಿರುವ ಬಗ್ಗೆ ಪ್ರತಿಜ್ಞೆಯನ್ನು ಬೋಧಿಸಿದರು.
ಸಮಾಜ ವಿಜ್ಞಾನ ಶಿಕ್ಷಕರಾದ ವಿಠ್ಠಲ ಕೋಟಗಾರ ಅವರು ಮಾತನಾಡಿ ಸಂವಿಧಾನ ದಿನಾಚರಣೆಯ ಮಹತ್ವ, ಭಾರತ ಸಂವಿಧಾನ ರಚನೆಯ ಹಿನ್ನೆಲೆ, ಡಾ. ಬಿ.ಆರ್. ಅಂಬೇಡ್ಕರ್ ಅವರ ಕೊಡುಗೆ ಹಾಗೂ ಪ್ರತಿಯೊಬ್ಬ ನಾಗರಿಕನು ತಿಳಿದುಕೊಳ್ಳಬೇಕಾದ ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.
ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ಸಂವಿಧಾನ ಹಾಗೂ ರಾಷ್ಟ್ರೀಯ ಭಾವೈಕ್ಯತೆಗೆ ಸಂಬಂಧಿಸಿದ ಚಿತ್ರಕಲೆ, ಪೋಸ್ಟರ್, ಬ್ಯಾಚ್ ತಯಾರಿಕೆ ಸ್ಪರ್ಧೆಗಳನ್ನು ಏರಿ್ಡಸಲಾಗಿತ್ತು. ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕ ಎನ್.ಆರ್.ಠಕ್ಕಾಯಿ, ಶಿಕ್ಷಕರಾದ ಜಗದೀಶ ನರಿ, ಹೇಮಲತಾ ಪುರಾಣಿಕ, ಶಿವಾನಂದ ಬಳಿಗಾರ, ಗಾಯತ್ರಿ ತುರಾದಿ, ಎ.ಎಂ. ಬೇಪಾರಿ ಹಾಗೂ ವಿದ್ಯಾರ್ಥಿಗಳ ಉಪಸ್ಥಿತರಿದ್ದರು. ಶ್ರಾವಣಿ ಹಂಪಣ್ಣವರ ಸ್ವಾಗತಿಸಿದರು. ಚಂದ್ರ್ರಭಾ ಪಾಟೀಲ ವಂದಿಸಿದರು. ದೀಪಾ ಕುರಿ ಮತ್ತು ಚೈತ್ರಾ ಜೀರಿಗವಾಡ ನಿರೂಪಿಸಿದರು.