ತಾಳಿಕೋಟಿ

ಎಸ್‌.ಎಸ್‌.ವಿದ್ಯಾಸಂಸ್ಥೆಯಲ್ಲಿ ಸಂವಿಧಾನ ದಿನ ಆಚರಣೆ

ಎಸ್‌.ಎಸ್‌.ವಿದ್ಯಾಸಂಸ್ಥೆಯಲ್ಲಿ ಸಂವಿಧಾನ ದಿನ ಆಚರಣೆ

            ತಾಳಿಕೋಟಿ 28:   ಪಟ್ಟಣದ ಶ್ರೀ ಎಸ್‌.ಎಸ್‌.ವಿದ್ಯಾಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಶ್ರೀ ಬ್ರಹ್ಮಲಿಂಗೇಶ್ವರ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಹಾಗೂ   ಸಂಗಮೇಶ್ವರ ಪ್ರೌಢಶಾಲೆಯಲ್ಲಿ ಗುರುವಾರ ಸಂವಿಧಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಅಶೋಕ ಕಟ್ಟಿ.ಪ್ರಾಥಮಿಕ ಶಾಲೆಯ ಮುಖ್ಯ ಗುರುಗಳಾದ ಜೆ.ಎಮ್‌.ಕೊಣ್ಣೂರ. ಪ್ರಾಥಮಿಕ ಮತ್ತು ಪ್ರೌಢಶಾಲೆಯ ಸಮಸ್ತ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ವಿದ್ಯಾರ್ಥಿಗಳಿಗೆ ಶಿಕ್ಷಕರಾದ ಬಿ.ಆಯ್‌.ಹಿರೇಹೊಳಿಯವರು ಸಂವಿಧಾನ ಪೀಠಿಕೆ ಬೋಧಿಸಿದರು. 


ಸುದ್ದಿ ಓದಿ