ಧಾರವಾಡ - ಹುಬ್ಬಳ್ಳಿ

ತಾಲೂಕು ಆಡಳಿತದಿಂದ ಸಂವಿಧಾನ ದಿನಾಚರಣೆ

ತಾಲೂಕು ಆಡಳಿತದಿಂದ ಸಂವಿಧಾನ ದಿನಾಚರಣೆ



                ಹುಬ್ಬಳ್ಳಿ 26: ಇಂದು ತಾಲೂಕು ಆಡಳಿತ ಸೌಧದ ತಹಶೀಲ್ದಾರ ಕಾರ್ಯಾಲಯದ ಸಭಾಭವನದಲ್ಲಿ ತಾಲೂಕು ಆಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ತಾಲೂಕು ಮಟ್ಟದ ಸಂವಿಧಾನ ದಿನಾಚರಣೆ ಕಾರ್ಯಕ್ರಮವನ್ನು ಸಂವಿಧಾನ ಶಿಲ್ಪಿ ಡಾ.ಬಿ.ಆರ್‌.ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪೂಜೆ, ಪುಷ​‍್ಾರೆ್ಪಣ ಮಾಡುವ ಮೂಲಕ ಆಚರಿಸಲಾಯಿತು.  ಈ ಸಂದರ್ಭದಲ್ಲಿ ಸಂವಿಧಾನ ಪೀಠಿಕೆಯನ್ನು ಬೋಧಿಸಲಾಯಿತು.

              ಕಾರ್ಯಕ್ರಮಕ್ಕೂ ಮೊದಲು ಸ್ಟೇಷನ್ ರಸ್ತೆಯಲ್ಲಿರುವ ಡಾ.ಬಿ.ಆರ್‌.ಅಂಬೇಡ್ಕರ್ ಅವರ ಪ್ರತಿಮೆಗೆ ಗಣ್ಯರು ಮಾಲಾರೆ​‍್ಣ ಮಾಡಿದರು. ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಸಂತೋಷ ಬಿರಾದಾರ ಪಾಟೀಲ, ಉಪ ತಹಶೀಲ್ದಾರ ಪ್ರವೀಣ ಪೂಜಾರ, ಕಂದಾಯ ಇಲಾಖೆಯ ಎ.ಎಸ್‌.ಪಠಾಣ, ಎನ್‌.ಎಸ್‌.ಚಿಕ್ಕನಗೌಡ್ರ, ಸಂಜು, ಸಮಾಜ ಕಲ್ಯಾಣ ಇಲಾಖೆಯ ಶ್ರೀನಿವಾಸ ಗಾಣಿಗೇರ,

              ಸಮಾಜದ ಮುಖಂಡರಾದ ಪ್ರೇಮನಾಥ ಚಿಕ್ಕತುಂಬಳ, ಗುರುನಾಥ ಉಳ್ಳಿಕಾಶಿ, ಮಂಜುನಾಥ ಉಳ್ಳಿಕಾಶಿ, ಶೋಭಾ ಬಳ್ಳಾರಿ, ಚಂದ್ರಶೇಖರ ಯಾತಗೇರಿ ಸೇರಿದಂತೆ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಮುಖಂಡರು, ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ, ನಿಲಯ ಪಾಲಕರು, ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಿದ್ದರು. 


ಸುದ್ದಿ ಓದಿ