ಬಿಜೆಪಿ ವಿಜಯಪುರ ಜಿಲ್ಲಾ ಕಾರ್ಯಾಲಯದಲ್ಲಿ ಸಂವಿಧಾನ ದಿನಾಚರಣೆ
ವಿಜಯಪುರ 26: ಭಾರತೀಯ ಜನತಾ ಪಾರ್ಟಿಯ ವಿಜಯಪುರ ಜಿಲ್ಲಾ ಕಾರ್ಯಾಲಯದಲ್ಲಿ ನವೆಂಬರ್ 26ರಂದು ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಭಾರತದ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನಗಳನ್ನು ಅರ್ಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಸಂಗಮೇಶ ಹೌದೆ ಮಾತನಾಡಿ, ಭಾರತದ ಸಂವಿಧಾನವು ದೇಶದ ಪ್ರಜಾಪ್ರಭುತ್ವದ ಬುನಾದಿಯಾಗಿದ್ದು, ಪ್ರತಿಯೊಬ್ಬ ನಾಗರಿಕನ ಹಕ್ಕುಗಳು, ಕರ್ತವ್ಯಗಳು ಹಾಗೂ ಜವಾಬ್ದಾರಿಗಳನ್ನು ಪ್ರತಿಪಾದಿಸುತ್ತದೆ. ಸಂವಿಧಾನದ ಆಶಯಗಳು, ಮೌಲ್ಯಗಳು ಮತ್ತು ಪ್ರಜಾಪ್ರಭುತ್ವದ ತತ್ವಗಳನ್ನು ಪ್ರತಿಯೊಬ್ಬರೂ ಅರಿತುಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಸಂವಿಧಾನ ರಚನೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಸೇರಿದಂತೆ ಅನೇಕ ಮಹನೀಯರು ಸಲ್ಲಿಸಿದ ಕೊಡುಗೆ ಹಾಗೂ ಪರಿಶ್ರಮವನ್ನು ಸ್ಮರಿಸಲಾಯಿತು. ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಗುರುಲಿಂಗಪ್ಪ ಅಂಗಡಿ, ಪ್ರಮುಖರಾದ ಉಮೇಶ ಕಾರಜೋಳ, ಚಂದ್ರಶೇಖರ ಕವಟಗಿ, ಎಸ್. ಎ. ಪಾಟೀಲ, ಚಿದಾನಂದ ಚಲವಾದಿ, ರಮೇಶ ಬಿದನೂರ, ಭೀಮಾಶಂಕರ ಹದನೂರ,
ಈರಣ್ಣ ರಾವೂರ, ಮಲ್ಲಮ್ಮ ಜೋಗುರ, ರವೀಂದ್ರ ಲೋಣಿ, ಹರ್ಷಗೌಡ ಪಾಟೀಲ, ಬಸವರಾಜ ಬೈಚಬಾಳ, ವಿಜಯ ಜೋಶಿ, ರಾಜೇಶ ತಾವಸೆ, ವಿನಾಯಕ ದಹಿಂಡೆ, ಮಹೇಶ ಒಡೆಯರ, ಭರತ್ ಕೋಳಿ, ಸಿದ್ಧಗೊಂಡ ಬಿರಾದಾರ, ವಿಜಯಲಕ್ಷ್ಮೀ ಪಟ್ಟಣಶೆಟ್ಟಿ, ರವಿ ಬಿರಾದಾರ, ವಿನೋದ ಕೊಳುರಗಿ ಸೇರಿದಂತೆ ಪದಾಧಿಕಾರಿಗಳು ಕಾರ್ಯಕರ್ತರು ಹಾಜರಿದ್ದರು.