ಇಂದು (ನ.26) ಸಂವಿಧಾನ ದಿನ ಆಚರಣೆ
ತಾಳಿಕೋಟಿ 25 : ತಾಲೂಕ ಆಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ದಿನವನ್ನು ಇಂದು (ನವೆಂಬರ್ 26) ಗುರುವಾರ ಪಟ್ಟಣದಲ್ಲಿ ಆಚರಿಸಲಾಗುವುದು.
ಬೆಳಿಗ್ಗೆ 10-00 ಘಂಟೆಗೆ ಪಟ್ಟಣದ ಡಾ. ಬಿ.ಆರ್.ಅಂಬೇಡ್ಕರ್ ವೃತ್ತದ ಹತ್ತಿರ ಉದ್ಯಾನವನದಲ್ಲಿರುವ ಡಾ. ಬಿ. ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರೆ್ಣ ಮಾಡಿ ಭಾರತದ ಸಂವಿಧಾನದ ಪ್ರಸ್ತಾವನೆಯನ್ನು ಸಾಮೂಹಿಕವಾಗಿ ಓದುವುದರ ಮೂಲಕ ಆಚರಿಸಲಾಗುವುದು.
ಸದರಿ ಕಾರ್ಯಕ್ರಮದಲ್ಲಿ ತಾಲೂಕ ಮಟ್ಟದ ಎಲ್ಲಾ ಅಧಿಕಾರಿಗಳು, ಸಮುದಾಯದ ಮುಖಂಡರು, ಸಂಘ ಸಂಸ್ಥೆಗಳ ಅಧ್ಯಕ್ಷರು, ಉಪಾಧ್ಯಕ್ಷರು, ಜನ ಪ್ರತಿನಿಧಿಗಳು ಹಾಗೂ ಸಮಸ್ತ ನಾಗರಿಕರು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಪ್ರಭಾರಿ ತಹಸಿಲ್ದಾರ್ ಎಂ.ಎಸ್. ಅರಕೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.