ಡಿ.ಸಿ.ಸಿ ಬ್ಯಾಂಕಿನ ಚುನಾವಣೆಯಲ್ಲಿ ಸ್ಪರ್ಧೆ: ಗೆಲುವು ನಿಶ್ಚಿತ - ಶಾಸಕ ಕಾಗೆ
Contesting in DCC Bank elections: Victory is certain - MLA Kage
ಅಥಣಿ 26: ಜಿಲ್ಲಾ ಮಧ್ಯವರ್ತಿ ಬ್ಯಾಂಕಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದು ನಿಶ್ಚಿತ ಮತ್ತು ನನ್ನ ಗೆಲುವು ಕೂಡ ನೂರಕ್ಕೆ ನೂರ ಇಪ್ಪತ್ತರಷ್ಟು ನಿಶ್ಚಿತ ಎಂದು ಕಾಗವಾಡ ಶಾಸಕ ರಾಜು ಕಾಗೆ ಹೇಳಿದರು.
ಅವರು ಚಮಕೇರಿ ಗ್ರಾಮದಲ್ಲಿ ಚಮಕೇರಿ - ಬ್ಯಾಡರಟ್ಟಿ - ಸಿಂಧೂರ ಗಡಿವರೆಗಿನ 9 ಕೋಟಿ ಅನುದಾನದ 8.77 ಕಿಲೋ ಮೀಟರ್ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡುತ್ತಿದ್ದರು. ಪ್ರಜಾ ಪ್ರಭುತ್ವ ವ್ಯವಸ್ಥೆಯಲ್ಲಿ ಯಾರ ಬೇಕಾದರೂ ಚುನಾವಣೆಯಲ್ಲಿ ಸ್ಪರ್ಧೆ ಮಾಡಬಹುದು ಆದರೆ ಯಾರು ಅತೀ ಹೆಚ್ಚು ಮತಗಳನ್ನು ಪಡೆಯುತ್ತಾರೋ ಅವರೇ ಗೆಲುವು ಸಾಧಿಸುತ್ತಾರೆ ಎಂದ ಅವರು ಕಾಗವಾಡ ಕ್ಷೇತ್ರದಿಂದ ನಾನು ನಿಶ್ಚಿತವಾಗಿಯೂ ಸ್ಪರ್ಧೆ ಮಾಡುವೆ ಮತ್ತು ನನ್ನ ಗೆಲುವು ಕೂಡ ನಿಶ್ಚಿತ ಎಂದರು. ರಾಜ್ಯದ ಮುಖ್ಯಮಂತ್ರಿಗಳು ಒಂದೊಂದು ವಿಧಾನ ಸಭಾ ಕ್ಷೇತ್ರಕ್ಕೆ 50 ಕೋಟಿ ವಿಶೇಷ ಅನುದಾನ ಬಿಡುಗಡೆಗೊಳಿಸಿದ್ದು, ಈ ಅನುದಾನದಲ್ಲಿ 25 ಕೋಟಿ ಲೋಕೋಪಯೋಗಿ ಇಲಾಖೆಗೆ, 12.5 ಪಂಚಾಯತ ರಾಜ್ಯ ಇಲಾಖೆಗೆ ಮತ್ತು ಇನ್ನುಳಿದ 12.5 ಕೋಟಿ ಶಾಸಕರ ನಿಧಿಗೆ ಹಂಚಿಕೆ ಮಾಡಲಾಗಿದೆ ಎಂದ ಅವರು ಇದೇ ಜುಲೈ 31 ರ ಒಳಗಾಗಿ ಮುಖ್ಯಮಂತ್ರಿಗಳಿಗೆ ಕಾಮಗಾರಿಗಳ ಪಟ್ಟಿ ಕೊಡಬೇಕು ಮತ್ತು ಈ ಎಲ್ಲ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಅಗಸ್ಟ 15 ರ ಒಳಗಾಗಿ ಪೂರ್ಣಗೊಳ್ಳಲಿದೆ ಎಂದರು.
ಚಮಕೇರಿ ಸಿಂಧೂರ ಗಡಿ ವರೆಗೆ 8.77 ಕಿಲೋ ಮೀಟರ, ರಸ್ತೆ ಸುಧಾರಣೆಗೆ 9 ಕೋಟಿ ಲೋಕೋಪಯೋಗಿ ಅನುದಾನದಲ್ಲಿ ಮತ್ತು ಪಂಚಾಯತ ರಾಜ ಇಲಾಖೆಯಡಿ 20 ಲಕ್ಷ ವೆಚ್ಚದ ಸಮುದಾಯ ಭವನಕ್ಕೆ ಶಂಕುಸ್ಥಾಪನೆ ನೆರವೇರಿಸಿರುವೆ ಎಂದ ಅವರು ಮುಂದಿನ ದಿನಗಳಲ್ಲಿ ಮತ್ತಷ್ಟು ಜನಪರ, ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನಕ್ಕೆ ಆದ್ಯತೆ ನೀಡುವೆ ಎಂದರು. ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ಮಲ್ಲಿಕಾರ್ಜುನ ಮಗದುಮ್, ಜಿ.ಪಂ ಇಲಾಖೆಯ ವೀರಣ್ಣಾ ವಾಲಿ, ಧುರೀಣರಾದ ಬಸವರಾಜ ಪಾಟೀಲ, ರಫಿಕ್ ಪಟೇಲ್, ಅಮಸಿದ್ಧ ಮಂಗರೂಳ, ಬಸವರಾಜ ಮಗದುಮ್, ಸಿದ್ಧಾರೂಢ ನೇಮಗೌಡ, ಶಿವಪುತ್ರ ನಾಯಿಕ, ರಾಜು ಮರಡಿ, ಸೋಹಿತ ಪಾಟೀಲ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 