ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ವಿಡಿಯೋ ವಿವಾದ ರಾಜಕೀಯ ಪಿತೂರಿ : ಅಜ್ಜಂಪೀರ ಖಾದ್ರಿ
ಲೋಕದರ್ಶನ ವರದಿ
ಶಿಗ್ಗಾವಿ 16: ರಾಜಕೀಯ ಭಿನ್ನಾಭಿಪ್ರಾಯಗಳ ನಡುವೆಯೂ ವ್ಯಕ್ತಿಗಳ ವಿರುದ್ಧ ಆರೋಪ ಮಾಡುವಾಗ ವಾಸ್ತವಾಂಶಗಳಿಗೆ ಆದ್ಯತೆ ನೀಡಬೇಕು ಎಂದು ಮಾಜಿ ಶಾಸಕ ಹಾಗೂ ಹೆಸ್ಕಾಂ ಅಧ್ಯಕ್ಷ ಸೈಯದ್ ಅಜ್ಜಂಪೀರ ಖಾದ್ರಿ ಹೇಳಿದರು. ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯ ಅವರು ಐದು ದಶಕಗಳ ರಾಜಕೀಯ ಜೀವನ ಮತ್ತು ಸಾರ್ವಜನಿಕ ಬದುಕಿನ ಬಗ್ಗೆ ರಾಜ್ಯದ ಜನತೆಗೆ ಅರಿವಿದೆ.
ತಮ್ಮ ನಾಯಕರು ನಿರಪರಾಧಿ ಸ್ಟಿಂಗ್ ಆಪರೇಷನ್ ವಿಡಿಯೋಗೆ ಸಿದ್ದರಾಮಯ್ಯ ಅವರ ಹೆಸರನ್ನು ಜೋಡಿಸಿ ಅಪಪ್ರಚಾರ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಇದು ರಾಜಕೀಯ ದುರುದ್ದೇಶದಿಂದ ಅವರ ಚಾರಿತ್ರ್ಯಹರಣ ಮಾಡಲು ಅಲ್ಲದೇ ಸತ್ಯಾಸತ್ಯತೆ ಪರೀಶೀಲಿಸದೆ ಯಾವುದೇ ನಿರ್ಧಾರಕ್ಕೆ ಬರುವುದು ಸರಿಯಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಅಣ್ಣಪ್ಪ ನಡಟ್ಟಿ, ಬಿ.ಯು. ಅಜ್ಜನವರ, ಸುನೀಲ್ ಲಮಾಣಿ, ತಾಜ್ ರವಿ ಮಲ್ಲೂರ, ಆಸೀಮ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.