ವಿಬಿ-ಜಿ ರಾಮ್ ಜಿ ಯೋಜನೆ ಅನುಷ್ಠಾನಕ್ಕೆ ಸಹಕರಿಸಿ: ಮಾದೇವಪ್ಪ ಏವೂರ
Cooperate in the implementation of the VB-G Ram Ji scheme: Mahadevappa Evur
ಇಂಡಿ 12 : ವಿಬಿ-ಜಿ ರಾಮ್ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕಾ ಮಿಷನ್ ಯೋಜನೆಯು ಜುಲೈ 1ರಿಂದ ದೇಶಾದ್ಯಂತ ಜಾರಿಗೊಂಡಿದ್ದು, ಈ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡುವ ಕರಪತ್ರವನ್ನು ಇಂಡಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಾದೇವಪ್ಪ ಏವೂರ ಅವರು ತಾಲೂಕು ಪಂಚಾಯಿತಿ ಆವರಣದಲ್ಲಿ ಬಿಡುಗಡೆ ಮಾಡಿದರು. ನಂತರ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದ ಜನರಿಗೆ ಉದ್ಯೋಗಾವಕಾಶ ಕಲ್ಪಿಸುವುದು ಹಾಗೂ ಗ್ರಾಮೀಣ ಕುಟುಂಬಗಳ ಜೀವನೋಪಾಯವನ್ನು ಬಲಪಡಿಸುವುದು ವಿಬಿ-ಜಿ ರಾಮ್ ಜಿ ಯೋಜನೆಯ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು. ಸಭೆಯಲ್ಲಿ ಯೋಜನೆಯಡಿ ಕೈಗೊಳ್ಳಲಾಗುವ 318 ಕಾಮಗಾರಿಗಳ ಕುರಿತು ವಿವರವಾದ ಮಾಹಿತಿ ನೀಡಿದರು.
ವಿಕಸಿ ದಿಳ್ತಿ ಫಾರ್ ರೋಜ್ಗಾರ್ ಅಂಡ್ ಅಜೀವಿಕಾ ಮಿಷನ್ ಯೋಜನೆಯಡಿ ಗ್ರಾಮೀಣ ಜನರಿಗೆ ಉದ್ಯೋಗಾವಕಾಶ ಒದಗಿಸುವುದರ ಜೊತೆಗೆ, ಗ್ರಾಮೀಣ ಪ್ರದೇಶಗಳ ಅಗತ್ಯ ಮೂಲಸೌಕರ್ಯ ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಪ್ರತಿಯೊಬ್ಬ ಅರ್ಹ ಗ್ರಾಮೀಣ ಕುಟುಂಬವೂ ಯೋಜನೆಯ ಸೌಲಭ್ಯಗಳನ್ನು ಸಮರ್ಕವಾಗಿ ಪಡೆದುಕೊಳ್ಳುವಂತೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜನರಿಗೆ ಮಾಹಿತಿ ನೀಡಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಇಂಡಿ ತಾಲೂಕು ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಸಹಾಯಕ ನಿರ್ದೇಶಕ ಸಂಜಯ ಖಡೆಗೆಕರ್ ಮಾತನಾಡಿ, ಯೋಜನೆಯಡಿ ದಿನಕ್ಕೆ ರೂ382 ಕೂಲಿ ನೀಡಲಾಗುವುದು. ಒಂದು ಕುಟುಂಬಕ್ಕೆ ಆರ್ಥಿಕ ವರ್ಷದಲ್ಲಿ ಒಟ್ಟು 125 ದಿನಗಳ ಉದ್ಯೋಗ ಒದಗಿಸಲಾಗುವುದು ಎಂದು ತಿಳಿಸಿದರು.
ಉದ್ಯೋಗದ ಅವಶ್ಯಕತೆ ಇರುವವರು ತಮ್ಮ ಉದ್ಯೋಗ ಬೇಡಿಕೆಯನ್ನು ಸಲ್ಲಿಸಿ, ಸ್ವಂತ ಗ್ರಾಮದಲ್ಲಿಯೇ ಉದ್ಯೋಗ ಪಡೆಯಲು ಮುಂದಾಗಬೇಕು. ಉದ್ಯೋಗಕ್ಕಾಗಿ ಗ್ರಾಮಗಳಿಂದ ನಗರ ಪ್ರದೇಶಗಳಿಗೆ ವಲಸೆ ಹೋಗುವ ಪರಿಸ್ಥಿತಿ ಕಡಿಮೆಯಾಗುವಂತೆ ಯೋಜನೆಯ ಸೌಲಭ್ಯಗಳನ್ನು ಜನರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಯೋಜನೆಯ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಅತ್ಯಂತ ಮುಖ್ಯವಾಗಿದೆ. ಗ್ರಾಮ ಕಾಯಕ ಮಿತ್ರರು, ರೋಜ್ಗಾರ್ ಮಿತ್ರರು, ಬೇರ್ಫೂಟ್ ಟೆಕ್ನಿಷಿಯನ್ಗಳು, ಮೆಟ್ಗಳು ಹಾಗೂ ಸಂಬಂಧಿಸಿದ ಸಿಬ್ಬಂದಿ ಅರ್ಹ ಫಲಾನುಭವಿಗಳಿಗೆ ಯೋಜನೆಯ ಮಾಹಿತಿ ತಲುಪಿಸುವಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದು ತಿಳಿಸಿದರು.
ಅರ್ಹ ಗ್ರಾಮೀಣ ಜನರು ವಿಬಿ-ಜಿ ರಾಮ್ ಜಿ ಯೋಜನೆಯ ಸೌಲಭ್ಯಗಳನ್ನು ಪಡೆದುಕೊಂಡು, ತಮ್ಮ ಗ್ರಾಮದಲ್ಲಿಯೇ ಉದ್ಯೋಗ ಹಾಗೂ ಜೀವನೋಪಾಯದ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ಯೋಜನಾಧಿಕಾರಿ ನಂದೀಪ ರಾಠೋಡ, ಸಹಾಯಕ ಲೆಕ್ಕಾಧಿಕಾರಿ ಜಬ್ಬರ್ ಅಲಿ, ವಿಷಯ ನಿರ್ವಾಹಕರಾದ ಮುರುಗೇಶ ನಾರಾಯಣಪುರ, ಪ್ರಭಾಕರ ಪೂಜಾರಿ, ತಾಂತ್ರಿಕ ಸಂಯೋಜಕ ಸಾಹಿಲ್ ದನಶೆಟ್ಟಿ, ಟಿ.ಎಂ.ಐ.ಎಸ್. ಹನುಮಂತ ಮೇಟಿ, ಐಇಸಿ ಸಂಯೋಜಕ ರಾಮಗೌಡ ಸರಬಡಗಿ, ಆಡಳಿತ ಸಹಾಯಕ ಪ್ರದೀಪ ಹಿಳ್ಳಿ, ತಾಲೂಕಿನ ಎಲ್ಲ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿ ಅಧಿಕಾರಿಗಳು ಹಾಗೂ ತಾಲೂಕು ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 