ಡಿಗ್ರಿ ಕಾಲೇಜಿನ ವಿದ್ಯಾರ್ಥಿಗಳಿಗೆ ಕೊರೊನಾ ಲಸಿಕೆ ಅಭಿಯಾನ ಕಾರ್ಯಕ್ರಮ
ಡಿಗ್ರಿ ಕಾಲೇಜಿನ ವಿದ್ಯಾರ್ಥಿಗಳಿಗೆ ಕೊರೊನಾ ಲಸಿಕೆ ಅಭಿಯಾನ ಕಾರ್ಯಕ್ರಮ
ಲೋಕದರ್ಶನ ವರದಿ
ಕಂಪ್ಲಿ 03: ಕರೊನಾ ಲಸಿಕೆ ಹಾಕಿಸಿಕೊಳ್ಳುವುದರಿಂದಆರೋಗ್ಯವನ್ನು ಕಾಪಾಡಬಹುದು ಕಾಲೇಜು ವಿದ್ಯಾರ್ಥಿಗಳು ಲಸಿಕೆ ಪಡೆಯುವಲ್ಲಿ ಮುಂದಾಗಬೇಕು ಎಂದು ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಇಂದ್ರಿಪಿ ಮಲ್ಲಿಕಾರ್ಜುನ ಹೇಳಿದರು.
ಸ್ಥಳೀಯ ಸರ್ಕಾರಿ ಡಿಗ್ರಿ ಕಾಲೇಜಿನಲ್ಲಿ ಶನಿವಾರ ಕಾಲೇಜಿನ ವಿದ್ಯಾರ್ಥಿಗಳಿಗೆ ಕರೊನಾ ಲಸಿಕೆ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಕಾಲೇಜಿನಲ್ಲಿ ಭೌತಿಕ ತರಗತಿಗಳ ಆರಂಭ, ಪರೀಕ್ಷೆ ಮುಂತಾದ ಶೈಕ್ಷಣಿಕ ಚಟುವಟಿಕೆಗಳು ಜರುಗಲಿವೆ. ಕಾಲೇಜಿನಲ್ಲಿ 790 ವಿದ್ಯಾರ್ಥಿಗಳಿದ್ದು ಎಲ್ಲಾ ವಿದ್ಯಾರ್ಥಿಗಳು ಕರೊನಾ ಲಸಿಕೆ ಹಾಕಿಸಿಕೊಳ್ಳಲು ಮುಂದಾಗಬೇಕು ಎಂದರು.
ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರಾಧಿಕಾ ಮಾತನಾಡಿ, ಕಾಲೇಜಿನ ಎಲ್ಲ ವಿದ್ಯಾರ್ಥಿಗಳಿಗೂ ಲಸಿಕೆ ನೀಡಲಿದ್ದು, ಇಂದು ಐದು ನೂರು ಲಸಿಕೆಗಳನ್ನು ಹಾಕುವ ಗುರಿ ಹೊಂದಿದೆ ಎಂದರು. ಕಾಲೇಜಿನ ಕರೊನಾ ಲಸಿಕೆ ಸಂಯೋಜಕ ಕೆ.ಗುರುಮೂರ್ತಿ, ಸಹಾಯಕ ಪ್ರಾಧ್ಯಾಪಕ ಡಾ.ಜೆ.ಕೃಷ್ಣ, ಡಾ. ಅನ್ನಪೂರ್ಣ ಗುಡದೂರು, ಟಿ.ಎಂ.ಆರ್ ರಾಜ್ಮಾ, ಎಂ.ಎನ್.ಪ್ರವೀಣ್ ಕುಮಾರ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶೋಭಾ, ಆರೋಗ್ಯ ಇಲಾಖೆ ಸಿಬ್ಬಂದಿಗಳಾದ ಚನ್ನಬಸವರಾಜ ಸುನಿತಾ, ಚಂದ್ರಶೇಖರ್, ಪ್ರಭಾಕರ್ ಇತರರಿದ್ದರು.