ಅವ್ಯವಸ್ಥೆ ಪ್ರಶ್ನಿಸಿದ್ದಕ್ಕೆ ಕೊರೊನಾ ವಾರಿಯರ್ಸ್‍ಗೆ ಅಮಾನತು ಶಿಕ್ಷೆ
ಶಿವಮೊಗ್ಗ, ಮೇ 13(ಯುಎನ್‌ಐ)ಕೊರೊನಾ ವಾರಿಯರ್ಸ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮೆಗಾನ್ ಆಸ್ಪತ್ರೆಯ ಆರು ಮಂದಿ ಆರೋಗ್ಯ ಇಲಾಖೆ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಖಾಯಂ ಶುಶ್ರೂಷಕಿಯಾದ ಚೇತನಾ ಕುಮಾರಿ, ಹೊರಗುತ್ತಿಗೆ ಶುಶ್ರೂಷಕಿ ಭುವನೇಶ್ವರಿ, ಹೊರಗುತ್ತಿಗೆ ಸಿಬ್ಬಂದಿ ಅಟೆಂಡರ್ ಅರುಣ್ ಕುಮಾರ್, ಪದ್ಮರಾಜ್, ಸ್ವೀಪರ್ ಅನಿತಾ, ಲಕ್ಷ್ಮಿದೇವಿ ಅವರನ್ನು ಅಮಾನತು ಗೊಳಿಸಲಾಗಿದೆ.ಈ ಆರು ಮಂದಿಯನ್ನು ಸಿಮ್ಸ್ ನಿರ್ದೇಶಕ ಡಾ. ಗುರುಪಾದಸ್ವಾಮಿ ಅಮಾನತುಗೊಳಿಸಿ ಆದೇಶಿಸಿದ್ದಾರೆ.ತಮಗೆ ನೀಡಿರುವ ವಸತಿ ವ್ಯವಸ್ಥೆ ಸರಿಯಿಲ್ಲ ಹಾಗೂ ಕಳಪೆ ಊಟ ವಿತರಿಸುತ್ತಿದ್ದಾರೆ ಎಂದು ಆರೋಪಿಸಿ ವಿಡಿಯೋ ಮಾಡಿ, ವಾಟ್ಸಪ್ ಗ್ರೂಪ್ ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿದ್ದರು. ಅಧಿಕಾರಿಗಳ ವಿರುದ್ಧ ಧ್ವನಿ ಎತ್ತಿದ್ದಕ್ಕೆ ಇದೀಗ ಅಮಾನತುಗಳಿಸಿದ್ದಾರೆ ಎಂದು ಇವರು ದೂರಿದ್ದಾರೆ.
ಶಿವಮೊಗ್ಗದಲ್ಲಿ ಕಳೆದ ಎರಡು ದಿನದ ಹಿಂದೆ ಅಹಮದಾಬಾದ್‍ನಿಂದ ವಾಪಸ್ ಬಂದಿದ್ದ 8 ಮಂದಿ ತಬ್ಲಿಘಿಗಳಲ್ಲಿ ಕೊರೊನಾ ಪಾಸಿಟಿವ್ ವರದಿಯಾಗಿದೆ. ಹೀಗಾಗಿ ಸೋಂಕಿತರನ್ನು ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ ಕ್ವಾರಂಟೈನ್ ನಲ್ಲಿ ಇಡಲಾಗಿದೆ. ಇವರಿಗೆ ಚಿಕಿತ್ಸೆ ನೀಡಲು ಹಲವು ಸಿಬ್ಬಂದಿಯನ್ನು ಮೂರು ಪಾಳಿಯಲ್ಲಿ ನೇಮಿಸಲಾಗಿದೆ. ಅಲ್ಲದೇ ಕೋವಿಡ್-19 ಆಸ್ಪತ್ರೆಯಲ್ಲಿ ಪಾಸಿಟಿವ್ ಇರುವವರಿಗೆ ಚಿಕಿತ್ಸೆ ನೀಡುವವರು ಮನೆಗೆ ಹೋಗುವಂತಿಲ್ಲ. ಆ ಎಲ್ಲಾ ಸಿಬ್ಬಂದಿಗೆ ಜಿಲ್ಲಾಡಳಿತ ಊಟ, ವಸತಿ ವ್ಯವಸ್ಥೆ ಕಲ್ಪಿಸಿದೆ. ಆದರೆ ಶುಶ್ರೂಷಕರು ಸೇರಿದಂತೆ ಇತರೆ ಸಿಬ್ಬಂದಿಗೆ ಶುಶ್ರೂಷಕರ ತರಬೇತಿ ವಸತಿ ನಿಲಯದಲ್ಲಿ ವ್ಯವಸ್ಥೆ ಮಾಡಿದ್ದಾರೆ.ಆದರೆ ಈ ವಸತಿ ನಿಲಯದಲ್ಲಿ ಸರಿಯಾದ ಮೂಲಭೂತ ಸೌಲಭ್ಯ ಇಲ್ಲ. ಊಟದ ವ್ಯವಸ್ಥೆ ಸರಿಯಿಲ್ಲ ಎಂದು ಸಿಬ್ಬಂದಿ ಆರೋಪಿಸಿದ್ದರು. ಅಲ್ಲದೇ ಇದರ ವಿರುದ್ಧ ವಿಡಿಯೋ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದರು. ಅವ್ಯವಸ್ಥೆ ಪ್ರಶ್ನಿಸಿದ್ದಕ್ಕೆ ಇದೀಗ ಕೊರೊನಾ ವಾರಿಯರ್ಸ್‍ಗೆ ಅಮಾನತು ಶಿಕ್ಷೆ ವಿಧಿಸಲಾಗಿದೆ. ಅಲ್ಲದೇ ಈ ಪ್ರಕರಣದಲ್ಲಿ ಮಧ್ಯ ಪ್ರವೇಶಿಸಿರುವ ಆರೋಗ್ಯ ಇಲಾಖೆ ನೌಕರರ ಸಂಘ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘ ಅಮಾನತು ಆದೇಶವನ್ನು ತಕ್ಷಣವೇ ಹಿಂಪಡೆಯಬೇಕು ಇಲ್ಲದಿದ್ದರೆ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 