ಗ್ರಾಪಂ ವತಿಯಿಂದ ಸಾರ್ವಜನಿಕರಿಗೆ ಕೊರೊನಾ ಜಾಗೃತಿ
ಹಾವೇರಿ03: ತಾಲೂಕಿನ ಕುರುಬಗೊಂಡ ಗ್ರಾಮದಲ್ಲಿ ಕೊರೋನಾ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಗ್ರಾಮ ಪಂಚಾಯತ ವತಿಯಿಂದ ಸಾರ್ವಜನಿಕರಿಗೆ ಅರಿವು ಮೂಡಿಸಲಾಯಿತು.
ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಗುಡ್ಡಪ್ಪ ಮೋಟಗಿ ಮಾತನಾಡಿ, ದೇಶದಾದ್ಯಂತ ಜನರಲ್ಲಿ ಭಯದ ವಾತಾವರಣ ಮೂಡಿಸಿರುವ ಕೊರೋನಾ ವೈರಸ್ ಬಗ್ಗೆ ಪ್ರತಿಯೊಬ್ಬರೂ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳುವ ಮೂಲಕ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಮುಂದಾಗಬೇಕು ಎಂದರಲ್ಲದೆ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳಲ್ಲೂ ಹೊರ ರಾಜ್ಯ ಹಾಗೂ ಇತರೆ ಜಿಲ್ಲೆಗಳಿಂದ ಬಂದಿರುವ ಪ್ರತಿಯೊಬ್ಬ ವ್ಯಕ್ತಿಯ ಮಾಹಿತಿಯನ್ನು ಸಂಗ್ರಹಿಸಿ ಮೇಲಾಧಿಕಾರಿಗಳ ಕಚೇರಿಗೆ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಗ್ರಾಮದಲ್ಲಿ ಕರಪತ್ರಗಳ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಯಿತು. ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಗೂ ಗ್ರಾ.ಪಂ. ಸಿಬ್ಬಂದಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 