ರಾಜಸ್ತಾನದಲ್ಲಿ ತೀವ್ರ ಆತಂಕ ತಂದ ಕರೋನಾ ವೈರಸ್ ಸೋಂಕು
ಜೈಪುರ, ಜನವರಿ 27, ಚೀನಾದಲ್ಲಿ ಕಾಣಿಸಿಕೊಂಡ ಕರೋನಾ ವೈರಸ್ ಈಗ ವಿಶ್ವದೆಲ್ಲೆಡೆ ಭೀತಿ ಸೃಷ್ಟಿಸಿದ್ದು, ಈ ಮಾರಣಾಂತಿಕ ವೈರಸ್ ಉಸಿರಾಟದ ಮೂಲಕ ಒಬ್ಬರಿಂದ ಒಬ್ಬರಿಗೆ ಹರಡುತ್ತದೆ ಎನ್ನಲಾಗಿದೆ. ಭಾರತದಲ್ಲೂ ಕೆಲವು ರೋಗಿಗಳಲ್ಲಿ ಕರೋನಾ ವೈರಸ್ ಲಕ್ಷಣಗಳು ಪತ್ತೆಯಾಗಿರುವುದರಿಂದ ಎಲ್ಲ ರೀತಿಯ ಎಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದರ ನಡುವೆಯೇ, ರಾಜಸ್ತಾನದ ವೈದ್ಯರೊಬ್ಬರಲ್ಲಿ ರೋಗದ ಶಂಕೆ ಕಾಣಿಸಿಕೊಂಡ ಕಾರಣ ಅವರನ್ನು ಪ್ರತ್ಯೇಕವಾಗಿ ಇರಿಸಲಾಗಿದೆ. ಚೀನಾದಲ್ಲಿ ಎಂಬಿಬಿಎಸ್ ಮುಗಿಸಿ, ತವರಿಗೆ ಮರಳಿದ ವೈದ್ಯನನ್ನು ಮುನ್ನೆಚ್ಚರಿಕಾ ಕ್ರಮವಾಗಿ ವಿಮಾನ ನಿಲ್ದಾಣದಲ್ಲಿ ತಪಾಸಣೆ ಮಾಡಲಾಗಿದೆ. ಈ ವೇಳೆ ಆತನಿಗೆ ಕರೋನಾ ವೈರಸ್ ಸೋಂಕು ತಗುಲಿರುವ ಶಂಕೆಯಿದ್ದು, ಹೀಗಾಗಿ, ಆತನಿಂದ ಬೇರೆಯವರಿಗೆ ಸೋಂಕು ಹರಡಬಾರದು ಎಂದು ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ಆರೋಗ್ಯ ಸಚಿವ ರಘು ಶರ್ಮ ಸ್ಪಷ್ಟಪಡಿಸಿದ್ದಾರೆ.
ಆ ವೈದ್ಯನನ್ನು ಸಂಪೂರ್ಣ ತಪಾಸಣೆಗೆ ಒಳಪಡಿಸಿ, ಕರೋನಾ ವೈರಸ್ ತಗುಲಿದೆಯೇ ಇಲ್ಲವೇ ಎಂಬುದನ್ನು ಖಚಿತಪಡಿಸಿಕೊಂಡ ನಂತರವೇ ಆತನನ್ನು ಮನೆಗೆ ಕಳುಹಿಸಲಾಗುವುದು ಎಂದೂ ಸಚಿವರು ಹೇಳಿದ್ದಾರೆ.ರಾಜಸ್ತಾನದ 4 ಜಿಲ್ಲೆಗಳ 18 ಜನರು ಚೀನಾದಿಂದ ವಾಪಾಸಾಗಿದ್ದು ಅವರ ಆರೋಗ್ಯದ ಮೇಲೆ ನಿಗಾವಹಿಸಲಾಗಿದೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 