ಕೋವಿಡ್-19 ಬಗ್ಗೆ ನೈಜ ಮಾಹಿತಿ ನೀಡಲು ‘ಕೊರೊನಾ ಯೋಧರು
ಬೆಂಗಳೂರು, ಮಾ. 21, ರಾಜ್ಯ ಸರ್ಕಾರವು ಕೊರೊನಾ ಸೋಂಕು ಹರಡುವಿಕೆ ತಡೆಯಲು ಹಾಗೂ ಅದರ ನಿಯಂತ್ರಣಕ್ಕೆ ಹಲವಾರು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದೆ.
ಅದರ ಭಾಗವಾಗಿ, ಕೊರೊನಾ ವೈರಸ್ ಬಗ್ಗೆ ಹರಡುವ ವದಂತಿಗಳು ಹಾಗೂ ಅಪಪ್ರಚಾರಗಳನ್ನು ತಡೆದು ಜನರಿಗೆ ನೈಜ ಮಾಹಿತಿ ಒದಗಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಭಾರತೀಯ ರೆಡ್ ಕ್ರಾಸ್ ಸೊಸೈಟಿ ಹಾಗೂ ಕರ್ನಾಟಕ ರಾಜ್ಯ ಕಾರ್ಮಿಕ ಅಧ್ಯಯನ ಸಂಸ್ಥೆ ಸಹಯೋಗದಲ್ಲಿ ಪ್ರಾರಂಭಿಸಿರುವ ಕಾರ್ಯಕ್ರಮಕ್ಕೆ ಸ್ವಯಂ ಸೇವಕರನ್ನು ಆಹ್ವಾನಿಸಿದೆ.
ಸರ್ಕಾರದೊಂದಿಗೆ ಕೈಜೋಡಿಸಿ ಕೊರೊನಾ ವಿರುದ್ಧ ಹೋರಾಡಲು ಇದೊಂದು ಸದವಕಾಶವಾಗಿದೆ. ‘ಕೊರೊನಾ ಯೋಧ’ರೆಂದೇ ಕರೆಯಲ್ಪಡುವ ಈ ಸ್ವಯಂ ಸೇವಕರು ರಾಜ್ಯಾದ್ಯಂತ ಎಲ್ಲಾ ತಾಲ್ಲೂಕುಗಳಲ್ಲಿ ಹರಡುವ ವದಂತಿಗಳ ಬಗ್ಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ನೈಜ ಮಾಹಿತಿಯನ್ನು ಜನರಿಗೆ ತಲುಪಿಸಲು ಸಹಕಾರಿಯಾಗಲಿದ್ದಾರೆ. ಅಲ್ಲದೇ, ಸ್ಥಳೀಯವಾಗಿ ಕೊರೋನಾ ಸಂಬಂಧಿತ ವಿದ್ಯಮಾನಗಳನ್ನು ತಂಡದ ಗಮನಕ್ಕೆ ತರಲು ಶ್ರಮವಹಿಸುವರು.
ಈಗಾಗಲೇ ಆನ್‍ಲೈನ್ ಮೂಲಕ ಅರ್ಜಿಗಳು ಸ್ವೀಕೃತವಾಗುತ್ತಿದ್ದು, ನೋಂದಾಯಿತ ಸ್ವಯಂ ಸೇವಕರಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಎಲ್ಲಾ ಜಿಲ್ಲಾ ಕಚೇರಿಗಳಲ್ಲಿ ಸೂಕ್ತ ತರಬೇತಿ, ಸುರಕ್ಷತಾ ಕಿಟ್ ಹಾಗೂ ಗುರುತಿನ ಚೀಟಿಯನ್ನು ನೀಡಲಾಗುವುದು.ರಾಜ್ಯದ ಪ್ರತಿ ತಾಲ್ಲೂಕಿನಲ್ಲಿ ಕನಿಷ್ಠ 4 ಸ್ವಯಂಸೇವಕರು ದಿನಕ್ಕೆ ನಾಲ್ಕು ಪಾಳಿಗಳಲ್ಲಿ ಕಾರ್ಯ ನಿರ್ವಹಿಸುವರು. ಬೆಂಗಳೂರು ನಗರದಲ್ಲೆ ಸುಮಾರು 120 ಸ್ವಯಂ ಸೇವಕರಿಗೆ ಅವಕಾಶವಿದ್ದು, ರಾಜ್ಯಾದ್ಯಂತ ಸುಮಾರು 3000 ಕೊರೋನಾ ಯೋಧರು ನೋಂದಾಯಿಸುವ ನಿರೀಕ್ಷೆಯಿದೆ. ಆನ್‍ಲೈನ್ ಅರ್ಜಿ ಮೂಲಕ ಮೊದಲ ದಿನವೇ 400 ಕ್ಕೂ ಹೆಚ್ಚು ಸ್ವಯಂ ಸೇವಕರು ನೋಂದಾಯಿಸಿಕೊಂಡಿದ್ದಾರೆ.ಹೋರಾಟದಲ್ಲಿ ಸರ್ಕಾರದೊಂದಿಗೆ ಕೈ ಜೋಡಿಸಲು ಇಚ್ಛಿಸುವವರು https:ovid19.karnataka.gov.in/coronawarrior.html ನಲ್ಲಿ ನೋಂದಾಯಿಸಿಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 