ಹುಬ್ಬಳ್ಳಿಯ ಇಬ್ಬರಲ್ಲಿ ಕೊರೊನಾ ಸೋಂಕು, ಪ್ರಕರಣದ ಸಂಖ್ಯೆ 9
ಹುಬ್ಬಳ್ಳಿ, ಏ.23,ನಗರದಲ್ಲಿ ಇಬ್ಬರು ಮಹಿಳೆಯರಲ್ಲಿ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ .ಏ.13 ರಂದು ಸೋಂಕು ದೃಢಪಟ್ಟಿದ್ದ ಸೋಂಕಿತ 236 ರ ಸಂಪರ್ಕದಿಂದಾಗಿ ಹುಬ್ಬಳ್ಳಿ ಮುಲ್ಲಾ ಓಣಿಯ 30 ವರ್ಷದ ಮಹಿಳೆ ಹಾಗೂ ಕೇಶ್ವಾಪುರದ ಆಜಾದ್ ಕಾಲನಿಯ 13 ವರ್ಷದ ಬಾಲಕಿಯೊಬ್ಬಳಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.ಇಬ್ಬರಿಗೂ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಧಾರವಾಡ ಜಿಲ್ಲೆಯಲ್ಲಿ ಇದು ಒಂಬತ್ತನೇ ಪ್ರಕರಣವಾಗಿದೆ.ಅವರಲ್ಲಿ ಒಬ್ಬರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ಎಂಟು ಜನರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 